ನಗರದ ಎ.ಜೆ. ತಾಂತ್ರಿಕ ಮಹಾವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ಮತ್ತು ಎಂಜಿನಿಯರಿಂಗ್ ವಿಭಾಗ ಹಾಗೂ ತರಬೇತಿ ಮತ್ತು ಉದ್ಯೋಗ ವಿಭಾಗದ ಸಹಯೋಗದಲ್ಲಿ ಅ.8 ಮತ್ತು 9ರಂದು ರಾಷ್ಟ್ರೀಯ ಮಟ್ಟದ ಹ್ಯಾಕಥಾನ್ ನಡೆಯಲಿದೆ.
ದೇಶದ ವಿವಿಧ ಭಾಗಗಳ ವಿದ್ಯಾರ್ಥಿಗಳು ಹಾಗೂ ಯುವ ನವೋದ್ಯಮಿಗಳನ್ನು ಒಂದೇ ವೇದಿಕೆಗೆ ಕರೆತಂದು, ತಂತ್ರಜ್ಞಾನ ಆಧಾರಿತ ಪರಿಹಾರಗಳ ಮೂಲಕ ನೈಜ ಜಗತ್ತಿನ ಸವಾಲುಗಳಿಗೆ ಉತ್ತರ ಕಂಡುಕೊಳ್ಳುವುದು ಹ್ಯಾಕಥಾನ್‌ನ ಉದ್ದೇಶವಾಗಿದೆ ಎಂದು ಎ.ಜೆ. ಸಮೂಹ ಸಂಸ್ಥೆಗಳ ಆಡಳಿತ ಮಂಡಳಿ ಹಾಗೂ ಕ್ಯಾಂಪಸ್ ನಿರ್ದೇಶಕ ಡಾ. ಟಿ. ಜಯಪ್ರಕಾಶ್ ರಾವ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಹ್ಯಾಕಥಾನ್‌ನಲ್ಲಿ ಒಟ್ಟು ₹1 ಲಕ್ಷ ಬಹುಮಾನ ಮೊತ್ತ ನೀಡಲಾಗುತ್ತಿದ್ದು, ನವೀನತೆ, ತಾಂತ್ರಿಕ ಪರಿಣಾಮಕಾರಿತ್ವ ಹಾಗೂ ಸಾಮಾಜಿಕ ಉಪಯುಕ್ತತೆಯನ್ನು ಆಧರಿಸಿ ತಂಡಗಳನ್ನು ಗೌರವಿಸಲಾಗುವುದು. ಅ.8ರಂದು ಜುವೆಗೊ ಸ್ಟುಡಿಯೋಸ್ ಉಪಾಧ್ಯಕ್ಷ ಅಭಿಜಿತ್ ಶೆಟ್ಟಿ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಿದ್ದು, ಅ.9ರಂದು ಯುನಿಕೋರ್ಟ್ ಸಹ-ಸಂಸ್ಥಾಪಕ ಹಾಗೂ ಸಿಟಿಒ ಪ್ರಶಾಂತ್ ಶೆಣೈ ಕಟ್ಟಾಡಿ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಿಕೆ ಸೇರಿದಂತೆ ವಿವಿಧ ಬೆಳೆಗಳಿಗೆ ಹವಾಮಾನ ಆಧರಿತ ಬೆಳೆ ವಿಮೆ ಪರಿಹಾರ ನಿರೀಕ್ಷಿತ ಪ್ರಮಾಣಕ್ಕಿಂತ ಕಡಿಮೆಯಾಗಿರುವ…
ಪ್ರಧಾನಿ ನರೇಂದ್ರ ಮೋದಿಯವರ 25ನೇ ವರ್ಷದ ಆಡಳಿತದ ಅಂಗವಾಗಿ ದೇಶಾದ್ಯಂತ ನಡೆಯುತ್ತಿರುವ ‘ಸೇವಾ ಮೇರಾ ಯೋಗದಾನ್’ ಸೇವಾ ಕಾರ್ಯಕ್ರಮದ ಪ್ರಯುಕ್ತ…
ಅಂಬೇಡ್ಕರ್ ಯುವಸೇನೆ ಉಡುಪಿ ಜಿಲ್ಲೆ ಆಶ್ರಯದಲ್ಲಿ ಸಹಭಾಗಿ ಸಂಘಟನೆಗಳ ಸಹಯೋಗದೊಂದಿಗೆ ಮೂಲ ನಿವಾಸಿಗಳ ಸಾಂಸ್ಕೃತಿಕ ಹಬ್ಬ ‘ಮಹಿಷ ಮಹೋತ್ಸವ’ವನ್ನು ಅ.11ರಂದು…
ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಅಂಗವಾಗಿ ಅ.10ರಂದು ದೊಡ್ಡಣಗುಡ್ಡೆಯ ಡಾ. ಎ.ವಿ. ಬಾಳಿಗಾ ಸ್ಮಾರಕ ಆಸ್ಪತ್ರೆಯಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ…
ಅರ್ಹ ಹಾಗೂ ಮಾನ್ಯಗೊಂಡ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಅಕ್ರಮವಾಗಿ ಅಳಿಸುವ ಉದ್ದೇಶದಿಂದ ಸುಳ್ಳು ಹಾಗೂ ಆಧಾರರಹಿತ ಫಾರಂ ನಂ.7…
ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಆನೆದೋಡಿಯಲ್ಲಿ ಸೋಮವಾರ ಮುಂಜಾನೆ ಸಿಡಿಲು ಬಡಿದು ಮನೆಯೊಂದು ಸಂಪೂರ್ಣ ಹಾನಿಗೊಳಗಾದ ಘಟನೆ ನಡೆದಿದೆ. ಆನೆದೋಡಿ ನಿವಾಸಿ…