ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಅಂಗವಾಗಿ ಅ.10ರಂದು ದೊಡ್ಡಣಗುಡ್ಡೆಯ ಡಾ. ಎ.ವಿ. ಬಾಳಿಗಾ ಸ್ಮಾರಕ ಆಸ್ಪತ್ರೆಯಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ಪಿ.ವಿ. ಭಂಡಾರಿ ತಿಳಿಸಿದ್ದಾರೆ.
‘ಅಲಿಸಲ್ಪಟ್ಟ ಜೀವನದ ಅನುಭವಗಳು, ನೈಜ ಧ್ವನಿಗಳು, ನೈಜ ಬದಲಾವಣೆ’ ಎಂಬ ಆಶಯದೊಂದಿಗೆ ಈ ಬಾರಿಯ ದಿನಾಚರಣೆ ನಡೆಯಲಿದೆ. ಇಂದಿನ ಒತ್ತಡದ ಜೀವನಶೈಲಿಯಿಂದ ಮಾನಸಿಕ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿದ್ದು, 10ರಿಂದ 19 ವರ್ಷದೊಳಗಿನ ಏಳು ಮಂದಿಯಲ್ಲಿ ಒಬ್ಬರಿಗೆ ಮಾನಸಿಕ ಆರೋಗ್ಯ ಸಮಸ್ಯೆ ಕಾಣಿಸಿಕೊಳ್ಳುತ್ತಿದೆ. 60 ವರ್ಷ ಮೇಲ್ಪಟ್ಟವರಲ್ಲಿಯೂ ಸಮಸ್ಯೆಗಳು ಕಂಡುಬರುತ್ತಿವೆ ಎಂದು ಅವರು ಹೇಳಿದರು.
ಒಂಟಿತನ ಮತ್ತು ಸಾಮಾಜಿಕ ಪ್ರತ್ಯೇಕತೆ ಮಾನಸಿಕ ಆರೋಗ್ಯ ಸಮಸ್ಯೆಗಳ ಪ್ರಮುಖ ಅಪಾಯಕಾರಿ ಅಂಶಗಳಾಗಿವೆ ಎಂದು ಡಾ. ಭಂಡಾರಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಲಯನ್ಸ್ ಜಿಲ್ಲೆ 317ಎಯ ನೂತನ ಜಿಲ್ಲಾ ಗವರ್ನರ್ ರಾಜೀವ್ ಕೋಟ್ಯಾನ್, ಡಾ. ಕೃಷ್ಣಮೂರ್ತಿ ಉಪಾಧ್ಯಾಯ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಿಕೆ ಸೇರಿದಂತೆ ವಿವಿಧ ಬೆಳೆಗಳಿಗೆ ಹವಾಮಾನ ಆಧರಿತ ಬೆಳೆ ವಿಮೆ ಪರಿಹಾರ ನಿರೀಕ್ಷಿತ ಪ್ರಮಾಣಕ್ಕಿಂತ ಕಡಿಮೆಯಾಗಿರುವ…
ಪ್ರಧಾನಿ ನರೇಂದ್ರ ಮೋದಿಯವರ 25ನೇ ವರ್ಷದ ಆಡಳಿತದ ಅಂಗವಾಗಿ ದೇಶಾದ್ಯಂತ ನಡೆಯುತ್ತಿರುವ ‘ಸೇವಾ ಮೇರಾ ಯೋಗದಾನ್’ ಸೇವಾ ಕಾರ್ಯಕ್ರಮದ ಪ್ರಯುಕ್ತ…
ಅಂಬೇಡ್ಕರ್ ಯುವಸೇನೆ ಉಡುಪಿ ಜಿಲ್ಲೆ ಆಶ್ರಯದಲ್ಲಿ ಸಹಭಾಗಿ ಸಂಘಟನೆಗಳ ಸಹಯೋಗದೊಂದಿಗೆ ಮೂಲ ನಿವಾಸಿಗಳ ಸಾಂಸ್ಕೃತಿಕ ಹಬ್ಬ ‘ಮಹಿಷ ಮಹೋತ್ಸವ’ವನ್ನು ಅ.11ರಂದು…
ನಗರದ ಎ.ಜೆ. ತಾಂತ್ರಿಕ ಮಹಾವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ಮತ್ತು ಎಂಜಿನಿಯರಿಂಗ್ ವಿಭಾಗ ಹಾಗೂ ತರಬೇತಿ ಮತ್ತು ಉದ್ಯೋಗ ವಿಭಾಗದ ಸಹಯೋಗದಲ್ಲಿ…
ಅರ್ಹ ಹಾಗೂ ಮಾನ್ಯಗೊಂಡ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಅಕ್ರಮವಾಗಿ ಅಳಿಸುವ ಉದ್ದೇಶದಿಂದ ಸುಳ್ಳು ಹಾಗೂ ಆಧಾರರಹಿತ ಫಾರಂ ನಂ.7…
ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಆನೆದೋಡಿಯಲ್ಲಿ ಸೋಮವಾರ ಮುಂಜಾನೆ ಸಿಡಿಲು ಬಡಿದು ಮನೆಯೊಂದು ಸಂಪೂರ್ಣ ಹಾನಿಗೊಳಗಾದ ಘಟನೆ ನಡೆದಿದೆ. ಆನೆದೋಡಿ ನಿವಾಸಿ…