ಅಂಬೇಡ್ಕರ್ ಯುವಸೇನೆ ಉಡುಪಿ ಜಿಲ್ಲೆ ಆಶ್ರಯದಲ್ಲಿ ಸಹಭಾಗಿ ಸಂಘಟನೆಗಳ ಸಹಯೋಗದೊಂದಿಗೆ ಮೂಲ ನಿವಾಸಿಗಳ ಸಾಂಸ್ಕೃತಿಕ ಹಬ್ಬ ‘ಮಹಿಷ ಮಹೋತ್ಸವ’ವನ್ನು ಅ.11ರಂದು ಬೆಳಿಗ್ಗೆ 10.30ಕ್ಕೆ ಉಡುಪಿ ಬನ್ನಂಜೆಯ ಶ್ರೀನಾರಾಯಣಗುರು ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಜಿಲ್ಲಾಧ್ಯಕ್ಷ ಗಣೇಶ್ ನೆರ್ಗಿ ತಿಳಿಸಿದ್ದಾರೆ.

ಮೈಸೂರಿನ ಉರಿಲಿಂಗ ಪೆದ್ದಿಮಠದ ಜ್ಞಾನಪ್ರಕಾಶ ಸ್ವಾಮೀಜಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ನ್ಯಾಯವಾದಿ ಸುಧೀರ್ ಕುಮಾರ್ ಮುರೋಳಿ, ಎಂ. ಶಿವಣ್ಣ ಕಂದೇಗಾಲ, ಬಹುಜನ ಚಿಂತಕ ನಾರಾಯಣ ಮಣೂರು ಹಾಗೂ ಉಡುಪಿ ವಕೀಲರ ಸಂಘದ ಅಧ್ಯಕ್ಷ ರೆನೋಲ್ಡ್ ಪ್ರವೀಣ್ ಕುಮಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಎಸ್ಸಿ-ಎಸ್ಟಿ ಗುತ್ತಿಗೆದಾರರ ಸಂಘದ ಜಿಲ್ಲಾಧ್ಯಕ್ಷ ಯು. ಪರಮೇಶ್ವರ, ಬೋವಿ ವಡ್ಡರ್ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಶಿವಕುಮಾರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.



