ಯಾವುದೇ ಮುನ್ಸೂಚನೆ ನೀಡದೆ ಕೆಲಸದಿಂದ ವಜಾಗೊಳಿಸಿರುವುದನ್ನು ವಿರೋಧಿಸಿ ಎಚ್‌ಪಿಸಿಎಲ್‌ನ ಮಹಿಳಾ ಗುತ್ತಿಗೆ ಕಾರ್ಮಿಕರು ಕಳೆದ ಒಂದು ತಿಂಗಳು ಏಳು ದಿನಗಳಿಂದ ಕೆಲಸದ ಅವಧಿಯಲ್ಲಿ ಕಂಪನಿಯ ಗೇಟ್ ಮುಂಭಾಗದಲ್ಲಿ ಕುಳಿತು ಪ್ರತಿಭಟನೆ ನಡೆಸುತ್ತಿದ್ದಾರೆ.
ಕಾರ್ಮಿಕರ ಸಮಸ್ಯೆಗೆ ಸಂಬಂಧಿಸಿದಂತೆ ಮನವಿ ಪತ್ರ ಸ್ವೀಕರಿಸಲು ಎಚ್‌ಪಿಸಿಎಲ್ ಅಧಿಕಾರಿಗಳು ನಿರಾಕರಿಸಿದ್ದಾರೆ ಎಂದು ಕಾರ್ಮಿಕ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದ ಒಂದು ವಾರದಿಂದ ಸುರತ್ಕಲ್ ನಾಗರಿಕ ಹೋರಾಟ ಸಮಿತಿಯೂ ಮಹಿಳಾ ಕಾರ್ಮಿಕರ ಪ್ರತಿಭಟನೆಗೆ ಬೆಂಬಲ ನೀಡಿದೆ.
ಕಾರ್ಮಿಕರ ಸಮಸ್ಯೆಯನ್ನು ಏಳು ದಿನಗಳೊಳಗಾಗಿ ಬಗೆಹರಿಸಬೇಕು. ಇಲ್ಲವಾದಲ್ಲಿ ಬೃಹತ್ ಹೋರಾಟ ನಡೆಸಲಾಗುವುದು ಎಂದು ನಾಗರಿಕ ಹೋರಾಟ ಸಮಿತಿ ಮುಖಂಡ ಮುನೀರ್ ಕಾಟಿಪಳ್ಳ ಎಚ್ಚರಿಕೆ ನೀಡಿದ್ದಾರೆ.
ಈ ನಡುವೆ ಸುರತ್ಕಲ್ ಠಾಣೆ ಪೊಲೀಸರು ಮಧ್ಯಪ್ರವೇಶಿಸಿದ ಬಳಿಕ ಎಚ್‌ಪಿಸಿಎಲ್ ಅಧಿಕಾರಿಗಳು ಕಾರ್ಮಿಕರ ಮನವಿ ಪತ್ರವನ್ನು ಸ್ವೀಕರಿಸಿದ್ದಾರೆ.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪಡಿತರ ವಿತರಣೆಗೆ ಸಂಬಂಧಿಸಿದ ತಾಂತ್ರಿಕ ಹಾಗೂ ಆಡಳಿತಾತ್ಮಕ ಸಮಸ್ಯೆಗಳನ್ನು ಕೂಡಲೇ ಪರಿಹರಿಸಬೇಕು ಎಂದು…
ಕರ್ತವ್ಯನಿರತ ಟಿಟಿಇಯ ಸಮಯಪ್ರಜ್ಞೆ ಹಾಗೂ ಎಚ್ಚರಿಕೆಯಿಂದ ರೈಲು ಪ್ರಯಾಣಿಕರೊಬ್ಬರ ಕಾಣೆಯಾಗಿದ್ದ ಲ್ಯಾಪ್‌ಟಾಪ್ ಬ್ಯಾಗ್ ಸೇರಿದಂತೆ ಅಮೂಲ್ಯ ವಸ್ತುಗಳನ್ನು ಪತ್ತೆಹಚ್ಚಿ ವಾರಸುದಾರರಿಗೆ…
ದಕ್ಷಿಣ ಕನ್ನಡ ಜಿಲ್ಲೆಯ ಹೆದ್ದಾರಿ ಕಾಮಗಾರಿಗಳಿಗೆ ವೇಗ ದೊರಕಿದ್ದು, ಮುಂದಿನ 15 ವರ್ಷಗಳ ಅಗತ್ಯವನ್ನು ಗಮನದಲ್ಲಿಟ್ಟುಕೊಂಡು ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು…
ಗ್ಯಾರಂಟಿಗಳ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ನೇತೃತ್ವದ ಸರ್ಕಾರ ಮೂರುವರೆ ವರ್ಷ ಕಳೆದರೂ ಬಡವರಿಗೆ ಮನೆ, ನಿವೇಶನ ಕಲ್ಪಿಸಿಲ್ಲ. ಬೆಳೆ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಿಕೆ ಸೇರಿದಂತೆ ವಿವಿಧ ಬೆಳೆಗಳಿಗೆ ಹವಾಮಾನ ಆಧರಿತ ಬೆಳೆ ವಿಮೆ ಪರಿಹಾರ ನಿರೀಕ್ಷಿತ ಪ್ರಮಾಣಕ್ಕಿಂತ ಕಡಿಮೆಯಾಗಿರುವ…
ಪ್ರಧಾನಿ ನರೇಂದ್ರ ಮೋದಿಯವರ 25ನೇ ವರ್ಷದ ಆಡಳಿತದ ಅಂಗವಾಗಿ ದೇಶಾದ್ಯಂತ ನಡೆಯುತ್ತಿರುವ ‘ಸೇವಾ ಮೇರಾ ಯೋಗದಾನ್’ ಸೇವಾ ಕಾರ್ಯಕ್ರಮದ ಪ್ರಯುಕ್ತ…