ಕರಾವಳಿ

ಮಂಗಳೂರು: ಪಡಿತರ ವಿತರಣೆಯ ತಾಂತ್ರಿಕ ಸಮಸ್ಯೆ ಪರಿಹರಿಸಿ; ಮನೆ ಬಾಗಿಲಿಗೆ ಪಡಿತರ ತಲುಪಿಸಲು ಆಗ್ರಹ

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪಡಿತರ ವಿತರಣೆಗೆ ಸಂಬಂಧಿಸಿದ ತಾಂತ್ರಿಕ ಹಾಗೂ ಆಡಳಿತಾತ್ಮಕ ಸಮಸ್ಯೆಗಳನ್ನು ಕೂಡಲೇ ಪರಿಹರಿಸಬೇಕು ಎಂದು ಆಮ್ ಆದ್ಮಿ ಪಾರ್ಟಿ ಆಗ್ರಹಿಸಿದೆ. ಅರ್ಹ ಫಲಾನುಭವಿಗಳಿಗೆ ಮನೆ ಬಾಗಿಲಿಗೆ ಪಡಿತರ ತಲುಪಿಸುವ ವ್ಯವಸ್ಥೆ ಜಾರಿಗೊಳಿಸಬೇಕು ಎಂದು ಪಕ್ಷದ ರಾಜ್ಯ ಉಪಾಧ್ಯಕ್ಷ ವಿವೇಕಾನಂದ ಸಾಲಿನ್ಸ್ ಒತ್ತಾಯಿಸಿದ್ದಾರೆ.

ಮಂಗಳೂರಿನ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಕ್ಷಿಣ ಕನ್ನಡದಲ್ಲಿ 2,58,910 ಹಾಗೂ ಉಡುಪಿಯಲ್ಲಿ 1,98,265 ಪಡಿತರ ಚೀಟಿದಾರರಿದ್ದಾರೆ. ಸರ್ವರ್ ಸಮಸ್ಯೆ, ಇ-ಕೆವೈಸಿ ವಿಳಂಬ ಸೇರಿದಂತೆ ವಿವಿಧ ತಾಂತ್ರಿಕ ತೊಂದರೆಗಳಿಂದ ಬಡವರು ನ್ಯಾಯಬೆಲೆ ಅಂಗಡಿಗಳ ಮುಂದೆ ಗಂಟೆಗಟ್ಟಲೆ ಸರತಿ ಸಾಲಿನಲ್ಲಿ ನಿಲ್ಲುವಂತಾಗಿದೆ. ಇದರಿಂದ ಕೂಲಿ ಕಾರ್ಮಿಕರು ದಿನಗೂಲಿ ಕಳೆದುಕೊಳ್ಳುತ್ತಿದ್ದಾರೆ ಎಂದು ಹೇಳಿದರು.

ಪಡಿತರ ವಿತರಣಾ ವ್ಯವಸ್ಥೆಯನ್ನು ಸರಳಗೊಳಿಸಿ, ಅರ್ಹ ಫಲಾನುಭವಿಗಳಿಗೆ ತ್ವರಿತವಾಗಿ ಪಡಿತರ ದೊರೆಯುವಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಎಸ್.ಎಲ್. ಪಿಂಟೊ, ದ.ಕ. ಮಹಿಳಾ ಘಟಕ ಅಧ್ಯಕ್ಷೆ ಸೀಮಾ ಮಡಿವಾಳ, ಜಿಲ್ಲಾ ಕಾರ್ಯದರ್ಶಿ ಕಾಟಿಪಳ್ಳ, ಗ್ಲಾವಿನ್ ಡಿಸೋಜ ಹಾಗೂ ಲೆಸ್ಲಿ ಫೆರ್ನಾಂಡಿಸ್ ಉಪಸ್ಥಿತರಿದ್ದರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಮಂಗಳೂರು: ಎಚ್‌ಪಿಸಿಎಲ್‌ನಿಂದ ಮಹಿಳಾ ಗುತ್ತಿಗೆ ಕಾರ್ಮಿಕರ ವಜಾ ಆರೋಪ; ವಾರದೊಳಗೆ ಸಮಸ್ಯೆ ಪರಿಹರಿಸಲು ಆಗ್ರಹ

ಯಾವುದೇ ಮುನ್ಸೂಚನೆ ನೀಡದೆ ಕೆಲಸದಿಂದ ವಜಾಗೊಳಿಸಿರುವುದನ್ನು ವಿರೋಧಿಸಿ ಎಚ್‌ಪಿಸಿಎಲ್‌ನ ಮಹಿಳಾ ಗುತ್ತಿಗೆ ಕಾರ್ಮಿಕರು ಕಳೆದ ಒಂದು ತಿಂಗಳು ಏಳು ದಿನಗಳಿಂದ…

2 hours ago

ಬಂಟ್ವಾಳ: ಟಿಟಿಇ ಸಮಯಪ್ರಜ್ಞೆಯಿಂದ ರೈಲಿನಲ್ಲಿ ಕಾಣೆಯಾಗಿದ್ದ ₹80 ಸಾವಿರ ಮೌಲ್ಯದ ಲ್ಯಾಪ್‌ಟಾಪ್ ಬ್ಯಾಗ್ ಪತ್ತೆ

ಕರ್ತವ್ಯನಿರತ ಟಿಟಿಇಯ ಸಮಯಪ್ರಜ್ಞೆ ಹಾಗೂ ಎಚ್ಚರಿಕೆಯಿಂದ ರೈಲು ಪ್ರಯಾಣಿಕರೊಬ್ಬರ ಕಾಣೆಯಾಗಿದ್ದ ಲ್ಯಾಪ್‌ಟಾಪ್ ಬ್ಯಾಗ್ ಸೇರಿದಂತೆ ಅಮೂಲ್ಯ ವಸ್ತುಗಳನ್ನು ಪತ್ತೆಹಚ್ಚಿ ವಾರಸುದಾರರಿಗೆ…

2 hours ago

ಬಂಟ್ವಾಳ: ದಕ್ಷಿಣ ಕನ್ನಡ ಹೆದ್ದಾರಿ ಅಭಿವೃದ್ಧಿಗೆ ವೇಗ; ₹22.59 ಕೋಟಿ ವೆಚ್ಚದಲ್ಲಿ ಚತುಷ್ಪಥ ರಸ್ತೆ ಕಾಮಗಾರಿಗೆ ಚಾಲನೆ

ದಕ್ಷಿಣ ಕನ್ನಡ ಜಿಲ್ಲೆಯ ಹೆದ್ದಾರಿ ಕಾಮಗಾರಿಗಳಿಗೆ ವೇಗ ದೊರಕಿದ್ದು, ಮುಂದಿನ 15 ವರ್ಷಗಳ ಅಗತ್ಯವನ್ನು ಗಮನದಲ್ಲಿಟ್ಟುಕೊಂಡು ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು…

2 hours ago

ಬಂಟ್ವಾಳ: ಬಡವರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸುತ್ತಿಲ್ಲ ಆರೋಪ; ಗ್ರಾಮ ಮಟ್ಟದಲ್ಲಿ ಬೃಹತ್ ಆಂದೋಲನಕ್ಕೆ ನಾಗರಿಕ ಹಿತರಕ್ಷಣಾ ಸಮಿತಿ ಕರೆ

ಗ್ಯಾರಂಟಿಗಳ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ನೇತೃತ್ವದ ಸರ್ಕಾರ ಮೂರುವರೆ ವರ್ಷ ಕಳೆದರೂ ಬಡವರಿಗೆ ಮನೆ, ನಿವೇಶನ ಕಲ್ಪಿಸಿಲ್ಲ. ಬೆಳೆ…

3 hours ago

ಮಂಗಳೂರು: ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರೈತರ ಅನುಮಾನಗಳಿಗೆ ಸರ್ಕಾರ ಸ್ಪಷ್ಟನೆ ನೀಡಲಿ–ಅರುಣ್ ಕುಮಾರ್ ಪುತ್ತಿಲ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಿಕೆ ಸೇರಿದಂತೆ ವಿವಿಧ ಬೆಳೆಗಳಿಗೆ ಹವಾಮಾನ ಆಧರಿತ ಬೆಳೆ ವಿಮೆ ಪರಿಹಾರ ನಿರೀಕ್ಷಿತ ಪ್ರಮಾಣಕ್ಕಿಂತ ಕಡಿಮೆಯಾಗಿರುವ…

1 day ago

ಪುತ್ತೂರು: ‘ಸೇವಾ ಮೇರಾ ಯೋಗದಾನ್’: ಪ್ರಜ್ಞಾ ಆಶ್ರಮದ ದಿವ್ಯಾಂಗ ಮಕ್ಕಳಿಗೆ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದಿಂದ ಅನ್ನದಾನ..!

ಪ್ರಧಾನಿ ನರೇಂದ್ರ ಮೋದಿಯವರ 25ನೇ ವರ್ಷದ ಆಡಳಿತದ ಅಂಗವಾಗಿ ದೇಶಾದ್ಯಂತ ನಡೆಯುತ್ತಿರುವ ‘ಸೇವಾ ಮೇರಾ ಯೋಗದಾನ್’ ಸೇವಾ ಕಾರ್ಯಕ್ರಮದ ಪ್ರಯುಕ್ತ…

1 day ago