ಕಾರ್ಕಳ ತಾಲೂಕಿನ ಕುಕ್ಕುಜೆ ಸಮೀಪದಿಂದ ಜಾನುವಾರುಗಳನ್ನು ಕಳವು ಮಾಡಿ ವಧೆಗಾಗಿ ಸಾಗಿಸುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಹಿರಿಯಡಕ ಪೊಲೀಸರು ಬಂಧಿಸಿದ್ದಾರೆ. ಸಾಗಾಟಕ್ಕೆ ಬಳಸಿದ್ದ ಗೂಡ್ಸ್ ಟೆಂಪೊವನ್ನು ವಶಪಡಿಸಿಕೊಂಡಿದ್ದು, ನಾಲ್ಕು ಜಾನುವಾರುಗಳನ್ನು ರಕ್ಷಿಸಿದ್ದಾರೆ.
ಅಕ್ಟೋಬರ್ 9ರಂದು ಸಂಜೆ ಹರಿಖಂಡಿಗೆಯಿಂದ ಹಿರಿಯಡಕ ಕಡೆಗೆ ಗೂಡ್ಸ್ ಟೆಂಪೊದಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸಲಾಗುತ್ತಿದೆ ಎಂಬ ಮಾಹಿತಿ ಪೊಲೀಸರಿಗೆ ಲಭಿಸಿತ್ತು. ಬೊಮ್ಮಾರಬೆಟ್ಟು ಗ್ರಾಮದ ಕೊಟ್ನಕಟ್ಟೆ ಬಳಿ ವಾಹನ ನಿಲ್ಲಿಸುವಂತೆ ಸೂಚಿಸಿದರೂ ಚಾಲಕ ನಿಲ್ಲಿಸದೆ ಮುಂದೆ ಸಾಗಿದ್ದ. ಬಳಿಕ ಹಿರಿಯಡಕ ಠಾಣೆಯ ಎದುರಿನ ಅಂಜಾರು ಜಂಕ್ಷನ್‌ನಲ್ಲಿ ಪೊಲೀಸರು ವಾಹನವನ್ನು ತಡೆದು ಪರಿಶೀಲಿಸಿದಾಗ ನಾಲ್ಕು ಜಾನುವಾರುಗಳು ಪತ್ತೆಯಾಗಿವೆ.
ಬಂಧಿತರನ್ನು ಕಾಪು ತಾಲೂಕಿನ ಕುರ್ಕಾಲು ಗ್ರಾಮದ ಸರ್ಕಾರಿಗುಡ್ಡೆ ನಿವಾಸಿ ಅಬ್ದುಲ್ ಸತ್ತರ್ ಹಾಗೂ ಇನ್ನಂಜೆ ಗ್ರಾಮದ ಮಾಳದಬೆಟ್ಟು ನಿವಾಸಿ ಯೋಗೀಶ ನಾಯ್ಕ್ ಎಂದು ಗುರುತಿಸಲಾಗಿದೆ. ವಿಚಾರಣೆ ವೇಳೆ ಕಾರ್ಕಳ ತಾಲೂಕಿನ ಕುಕ್ಕುಜೆ ಗ್ರಾಮದ ಪಲಬೆಟ್ಟು ನಿವಾಸಿ ಕೃಷ್ಣ ಪೂಜಾರಿ ಅವರ ಮನೆಯ ಸಮೀಪ ಮೇಯುತ್ತಿದ್ದ ಜಾನುವಾರುಗಳನ್ನು ಕಳವು ಮಾಡಿ, ಕಸಾಯಿಖಾನೆಗೆ ಮಾರಾಟ ಮಾಡುವ ಉದ್ದೇಶದಿಂದ ಸಾಗಿಸುತ್ತಿದ್ದುದಾಗಿ ಆರೋಪಿಗಳು ತಿಳಿಸಿರುವುದಾಗಿ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧದ ಹಿನ್ನೆಲೆಯಲ್ಲಿ, ಉಭಯ ದೇಶಗಳು ಪರಸ್ಪರರ ಇಂಧನ ಮೂಲಸೌಕರ್ಯಗಳ ಮೇಲಿನ ದಾಳಿಯನ್ನು ನಿಲ್ಲಿಸಲು ಒಪ್ಪಿಕೊಂಡಿವೆ…
ದೆಹಲಿಯ ಜಂತರ್ ಮಂತರ್‌ನಲ್ಲಿ ಶಾಂತಿಯುತ ಪ್ರತಿಭಟನೆ ನಡೆಸಲು ತಕ್ಷಣ ದಿನಾಂಕ ನಿಗದಿಪಡಿಸುವಂತೆ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪೊಲೀಸರನ್ನು ಒತ್ತಾಯಿಸಿದೆ.…
ದಸರಾ ರಜೆ ನೀಡದೆ ಪದವಿ ಸೆಮಿಸ್ಟರ್ ಪರೀಕ್ಷೆ ಆಯೋಜಿಸಿರುವುದನ್ನು ವಿರೋಧಿಸಿ ಮಂಗಳೂರಿನ ಬೆಂದೂರ್‌ವೆಲ್‌ನಲ್ಲಿರುವ ಸೈಂಟ್ ಆಗ್ನೆಸ್ ಕಾಲೇಜಿನ ವಿದ್ಯಾರ್ಥಿಗಳು ಪ್ರತಿಭಟನೆ…
ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ನಡೆಯುತ್ತಿರುವ ಐದನೇ ವರ್ಷದ ಉಡುಪಿ ಉಚ್ಚಿಲ ದಸರಾ–2026ರ ಅಂಗವಾಗಿ ಕೈಗೊಂಡಿರುವ ವಿದ್ಯುತ್ ದೀಪಾಲಂಕಾರ ಭಕ್ತರು…
ನಗರದ ಹೃದಯಭಾಗದಲ್ಲಿರುವ ಮೊಬೈಲ್ ಅಂಗಡಿಯೊಂದರಲ್ಲಿ ಹಾಡಹಗಲೇ ಮೊಬೈಲ್ ಕಳ್ಳತನ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ಗ್ರಾಹಕರೊಬ್ಬರು ತಮ್ಮ ಮೊಬೈಲ್ ಪಡೆಯಲು…
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪಡಿತರ ವಿತರಣೆಗೆ ಸಂಬಂಧಿಸಿದ ತಾಂತ್ರಿಕ ಹಾಗೂ ಆಡಳಿತಾತ್ಮಕ ಸಮಸ್ಯೆಗಳನ್ನು ಕೂಡಲೇ ಪರಿಹರಿಸಬೇಕು ಎಂದು…