ಕರಾವಳಿ

ಉಡುಪಿ: ಉಚ್ಚಿಲ ದಸರಾ ಸಂಭ್ರಮಕ್ಕೆ ವಿದ್ಯುತ್ ದೀಪಗಳ ಮೆರುಗು; 11 ಕಿ.ಮೀ. ಉದ್ದಕ್ಕೂ ಕಂಗೊಳಿಸಿದ ಹೆದ್ದಾರಿ…!

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ನಡೆಯುತ್ತಿರುವ ಐದನೇ ವರ್ಷದ ಉಡುಪಿ ಉಚ್ಚಿಲ ದಸರಾ–2026ರ ಅಂಗವಾಗಿ ಕೈಗೊಂಡಿರುವ ವಿದ್ಯುತ್ ದೀಪಾಲಂಕಾರ ಭಕ್ತರು ಹಾಗೂ ಸಾರ್ವಜನಿಕರ ಗಮನ ಸೆಳೆಯುತ್ತಿದೆ. ರಾಷ್ಟ್ರೀಯ ಹೆದ್ದಾರಿ 66ರ ಇಕ್ಕೆಲಗಳಲ್ಲಿ ಸುಮಾರು 11 ಕಿ.ಮೀ. ಉದ್ದಕ್ಕೂ ಅಳವಡಿಸಿರುವ ಆಕರ್ಷಕ ದೀಪಗಳು ಕರಾವಳಿಯ ದಸರಾ ಸಂಭ್ರಮಕ್ಕೆ ವಿಶೇಷ ಮೆರುಗು ನೀಡಿವೆ.

ಉಚ್ಚಿಲದಿಂದ ಪಡುಬಿದ್ರಿಯವರೆಗೆ, ಅಲ್ಲಿಂದ ಕಾಪು ಜಂಕ್ಷನ್‌ವರೆಗೆ ಹಾಗೂ ಕೊಪ್ಪಲಂಗಡಿಯಿಂದ ಕಾಪು ಬೀಚ್‌ವರೆಗೆ ರಸ್ತೆಯುದ್ದಕ್ಕೂ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ. ರಾತ್ರಿ ವೇಳೆಯಲ್ಲಿ ಬೆಳಕಿನಿಂದ ಕಂಗೊಳಿಸುವ ಹೆದ್ದಾರಿ ದಸರಾ ಉತ್ಸವದ ಆಕರ್ಷಣೆಯನ್ನು ಹೆಚ್ಚಿಸಿದ್ದು, ದೇವಸ್ಥಾನಕ್ಕೆ ಭೇಟಿ ನೀಡುವ ಭಕ್ತರು ಹಾಗೂ ಈ ಮಾರ್ಗದಲ್ಲಿ ಸಂಚರಿಸುವ ಪ್ರಯಾಣಿಕರನ್ನು ಸೆಳೆಯುತ್ತಿದೆ.

ವಿದ್ಯುತ್ ದೀಪಾಲಂಕಾರಕ್ಕೆ ಉಡುಪಿ–ಉಚ್ಚಿಲ ದಸರಾ ರೂವಾರಿ ಜಿ. ಶಂಕರ್ ಚಾಲನೆ ನೀಡಿದರು. ಕ್ಷೇತ್ರದ ಪ್ರಧಾನ ಅರ್ಚಕ ರಾಘವೇಂದ್ರ ಉಪಾಧ್ಯಾಯ ಪೂಜಾ ವಿಧಿವಿಧಾನ ನೆರವೇರಿಸಿದರು. ಈ ಸಂದರ್ಭದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಯಶಪಾಲ್ ಸುವರ್ಣ, ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್ ಬೆಳ್ಳಂಪಳ್ಳಿ, ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ಗಿರಿಧರ ಸುವರ್ಣ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ವಾಷಿಂಗ್ಟನ್: ರಷ್ಯಾ–ಉಕ್ರೇನ್ ಇಂಧನ ಕದನ ವಿರಾಮಕ್ಕೆ ಒಪ್ಪಿಗೆ: ಟ್ರಂಪ್ ಘೋಷಣೆ

ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧದ ಹಿನ್ನೆಲೆಯಲ್ಲಿ, ಉಭಯ ದೇಶಗಳು ಪರಸ್ಪರರ ಇಂಧನ ಮೂಲಸೌಕರ್ಯಗಳ ಮೇಲಿನ ದಾಳಿಯನ್ನು ನಿಲ್ಲಿಸಲು ಒಪ್ಪಿಕೊಂಡಿವೆ…

1 hour ago

ನವದೆಹಲಿ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ 24 ಗಂಟೆಯೊಳಗೆ ದಿನಾಂಕ ನಿಗದಿಪಡಿಸಿ: ಸಿಜೆಪಿ ಆಗ್ರಹ

ದೆಹಲಿಯ ಜಂತರ್ ಮಂತರ್‌ನಲ್ಲಿ ಶಾಂತಿಯುತ ಪ್ರತಿಭಟನೆ ನಡೆಸಲು ತಕ್ಷಣ ದಿನಾಂಕ ನಿಗದಿಪಡಿಸುವಂತೆ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪೊಲೀಸರನ್ನು ಒತ್ತಾಯಿಸಿದೆ.…

1 hour ago

ಮಂಗಳೂರು: ದಸರಾ ರಜೆ ವೇಳೆ ಸೆಮಿಸ್ಟರ್ ಪರೀಕ್ಷೆ: ಮಂಗಳೂರಿನ ಸೈಂಟ್ ಆಗ್ನೆಸ್ ಕಾಲೇಜು ಎದುರು ವಿದ್ಯಾರ್ಥಿಗಳ ಪ್ರತಿಭಟನೆ

ದಸರಾ ರಜೆ ನೀಡದೆ ಪದವಿ ಸೆಮಿಸ್ಟರ್ ಪರೀಕ್ಷೆ ಆಯೋಜಿಸಿರುವುದನ್ನು ವಿರೋಧಿಸಿ ಮಂಗಳೂರಿನ ಬೆಂದೂರ್‌ವೆಲ್‌ನಲ್ಲಿರುವ ಸೈಂಟ್ ಆಗ್ನೆಸ್ ಕಾಲೇಜಿನ ವಿದ್ಯಾರ್ಥಿಗಳು ಪ್ರತಿಭಟನೆ…

1 hour ago

ಉಡುಪಿ: ಉಡುಪಿಯಲ್ಲಿ ಹಾಡಹಗಲೇ ಮೊಬೈಲ್ ಕಳ್ಳತನ; ಸಿಸಿಟಿವಿಯಲ್ಲಿ ಕೃತ್ಯ ಸೆರೆ…!

ನಗರದ ಹೃದಯಭಾಗದಲ್ಲಿರುವ ಮೊಬೈಲ್ ಅಂಗಡಿಯೊಂದರಲ್ಲಿ ಹಾಡಹಗಲೇ ಮೊಬೈಲ್ ಕಳ್ಳತನ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ಗ್ರಾಹಕರೊಬ್ಬರು ತಮ್ಮ ಮೊಬೈಲ್ ಪಡೆಯಲು…

1 hour ago

ಉಡುಪಿ: ಉಡುಪಿಯಲ್ಲಿ ಜಾನುವಾರು ಕಳವು ಪ್ರಕರಣ: ಇಬ್ಬರ ಬಂಧನ, ನಾಲ್ಕು ಜಾನುವಾರುಗಳ ರಕ್ಷಣೆ

ಕಾರ್ಕಳ ತಾಲೂಕಿನ ಕುಕ್ಕುಜೆ ಸಮೀಪದಿಂದ ಜಾನುವಾರುಗಳನ್ನು ಕಳವು ಮಾಡಿ ವಧೆಗಾಗಿ ಸಾಗಿಸುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಹಿರಿಯಡಕ ಪೊಲೀಸರು ಬಂಧಿಸಿದ್ದಾರೆ.…

1 hour ago

ಮಂಗಳೂರು: ಪಡಿತರ ವಿತರಣೆಯ ತಾಂತ್ರಿಕ ಸಮಸ್ಯೆ ಪರಿಹರಿಸಿ; ಮನೆ ಬಾಗಿಲಿಗೆ ಪಡಿತರ ತಲುಪಿಸಲು ಆಗ್ರಹ

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪಡಿತರ ವಿತರಣೆಗೆ ಸಂಬಂಧಿಸಿದ ತಾಂತ್ರಿಕ ಹಾಗೂ ಆಡಳಿತಾತ್ಮಕ ಸಮಸ್ಯೆಗಳನ್ನು ಕೂಡಲೇ ಪರಿಹರಿಸಬೇಕು ಎಂದು…

5 days ago