ದಕ್ಷಿಣ ಕನ್ನಡ : ಜಿಲ್ಲೆಯಾದ್ಯಂತ ಕಂದಾಯ ಸೇರಿದಂತೆ ಜನರ ಸಮಸ್ಯೆ ನಿವಾರಣೆಗೆ ಗ್ರಾಮಾಂತರ ಪ್ರದೇಶಗಳಿಂದ ಜಿಲ್ಲಾಧಿಕಾರಿ ಕಚೇರಿಗೆ ಜನರ ಅಲೆದಾಟವನ್ನು ತಪ್ಪಿಸುವ ನಿಟ್ಟಿನಲ್ಲಿ, ಜಿಲ್ಲಾಧಿಕಾರಿಗಳ ತಂಡ ಒಂದೊಂದು ತಾಲೂಕುಗಳಿಗೆ ವಾರಕ್ಕೊಮ್ಮೆ ಭೇಟಿ ನೀಡಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ. ಎಂದು ವರದಿಯಾಗಿದೆ.
ಮಂಗಳೂರು ಪ್ರೆಸ್‌ಕ್ಲಬ್‌ನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಆಯೋಜಿಸಲಾದ ಸಂವಾದ ಕಾರ್ಯಕ್ರಮದಲ್ಲಿ ಪತ್ರಕರ್ತರಿಂದ ಜಿಲ್ಲೆ ಹಾಗೂ ನಗರ ವ್ಯಾಪ್ತಿಯ ಹಲವು ಸಮಸ್ಯೆಗಳನ್ನು ಅರಿತುಕೊಂಡ ಬಳಿಕ ಅವರು ಈ ವಿಷಯ ತಿಳಿಸಿದರು. ಮಾಧ್ಯಮ ಸಂವಾದದ ವೇದಿಕೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ರವಿರಾಜ್ ಹೆಚ್. ಜಿ, ಪ್ರೆಸ್‌ಕ್ಲಬ್ ಅಧ್ಯಕ್ಷ ಪಿ. ಬಿ ಹರೀಶ್ ರೈ ಉಪಸ್ಥಿತರಿದ್ದರು. ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕೋಶಾಧಿಕಾರಿ ಪುಷ್ಪರಾಜ್ ಬಿ. ಎನ್ ಕಾರ್ಯಕ್ರಮ ನಿರೂಪಿಸಿದರು. ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ವಂದಿಸಿದರು. »ವರದಿ : ಮಂದಾರ ರಾಜೇಶ್ ಭಟ್.
ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…