ರಾಷ್ಟ್ರ

ನವದೆಹಲಿ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ 24 ಗಂಟೆಯೊಳಗೆ ದಿನಾಂಕ ನಿಗದಿಪಡಿಸಿ: ಸಿಜೆಪಿ ಆಗ್ರಹ

ದೆಹಲಿಯ ಜಂತರ್ ಮಂತರ್‌ನಲ್ಲಿ ಶಾಂತಿಯುತ ಪ್ರತಿಭಟನೆ ನಡೆಸಲು ತಕ್ಷಣ ದಿನಾಂಕ ನಿಗದಿಪಡಿಸುವಂತೆ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪೊಲೀಸರನ್ನು ಒತ್ತಾಯಿಸಿದೆ. ನಿಗದಿತ ಅವಧಿಯೊಳಗೆ ಅನುಮತಿ ನೀಡದಿದ್ದರೆ ಪಕ್ಷವೇ ಪ್ರತಿಭಟನೆಯ ದಿನಾಂಕ ಘೋಷಿಸಲಿದೆ ಎಂದು ನಾಯಕರು ಎಚ್ಚರಿಸಿದ್ದಾರೆ.

ಸಿಜೆಪಿ ಸಹ ಸಂಚಾಲಕರಾದ ಆಶುತೋಷ್ ರಂಕಾ, ಸೌರವ್ ದಾಸ್ ಹಾಗೂ ಪಕ್ಷದ ಕಾನೂನು ವಿಭಾಗದ ಮುಖ್ಯಸ್ಥೆ ರತ್ನಾ ಸಿಂಗ್ ಸೇರಿದಂತೆ ಇತರ ನಾಯಕರು ಪ್ರತಿಭಟನೆಗೆ ಅನುಮತಿ ಕೋರುವುದಾಗಿ ತಿಳಿಸಿದ್ದಾರೆ. ಈ ಕುರಿತು ಭಾನುವಾರ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಆಶುತೋಷ್ ರಂಕಾ, 24 ಗಂಟೆಗಳೊಳಗೆ ಪ್ರತಿಭಟನೆಗೆ ದಿನಾಂಕ ನಿಗದಿಪಡಿಸಬೇಕು. ಇಲ್ಲದಿದ್ದರೆ ಮತ್ತೊಂದು ಪ್ರತಿಭಟನೆಗೆ ಕರೆ ನೀಡಲಾಗುವುದು ಎಂದು ಹೇಳಿದ್ದಾರೆ.

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಸಿಜೆಪಿ ಶನಿವಾರ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಲು ಯೋಜಿಸಿತ್ತು.

ಆದರೆ, ಮುಂಬೈನಿಂದ ಬಂದ ವಿಮಾನವು ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿದ ಬಳಿಕ ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ, ಆಶುತೋಷ್ ರಂಕಾ ಮತ್ತು ಸೌರವ್ ದಾಸ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಈ ಬೆಳವಣಿಗೆಯ ಬೆನ್ನಲ್ಲೇ ಪ್ರತಿಭಟನೆಗೆ ಅನುಮತಿ ನೀಡುವಂತೆ ಪಕ್ಷ ಪೊಲೀಸರ ಮೇಲೆ ಒತ್ತಡ ಹೇರುತ್ತಿದೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ವಾಷಿಂಗ್ಟನ್: ರಷ್ಯಾ–ಉಕ್ರೇನ್ ಇಂಧನ ಕದನ ವಿರಾಮಕ್ಕೆ ಒಪ್ಪಿಗೆ: ಟ್ರಂಪ್ ಘೋಷಣೆ

ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧದ ಹಿನ್ನೆಲೆಯಲ್ಲಿ, ಉಭಯ ದೇಶಗಳು ಪರಸ್ಪರರ ಇಂಧನ ಮೂಲಸೌಕರ್ಯಗಳ ಮೇಲಿನ ದಾಳಿಯನ್ನು ನಿಲ್ಲಿಸಲು ಒಪ್ಪಿಕೊಂಡಿವೆ…

2 hours ago

ಮಂಗಳೂರು: ದಸರಾ ರಜೆ ವೇಳೆ ಸೆಮಿಸ್ಟರ್ ಪರೀಕ್ಷೆ: ಮಂಗಳೂರಿನ ಸೈಂಟ್ ಆಗ್ನೆಸ್ ಕಾಲೇಜು ಎದುರು ವಿದ್ಯಾರ್ಥಿಗಳ ಪ್ರತಿಭಟನೆ

ದಸರಾ ರಜೆ ನೀಡದೆ ಪದವಿ ಸೆಮಿಸ್ಟರ್ ಪರೀಕ್ಷೆ ಆಯೋಜಿಸಿರುವುದನ್ನು ವಿರೋಧಿಸಿ ಮಂಗಳೂರಿನ ಬೆಂದೂರ್‌ವೆಲ್‌ನಲ್ಲಿರುವ ಸೈಂಟ್ ಆಗ್ನೆಸ್ ಕಾಲೇಜಿನ ವಿದ್ಯಾರ್ಥಿಗಳು ಪ್ರತಿಭಟನೆ…

2 hours ago

ಉಡುಪಿ: ಉಚ್ಚಿಲ ದಸರಾ ಸಂಭ್ರಮಕ್ಕೆ ವಿದ್ಯುತ್ ದೀಪಗಳ ಮೆರುಗು; 11 ಕಿ.ಮೀ. ಉದ್ದಕ್ಕೂ ಕಂಗೊಳಿಸಿದ ಹೆದ್ದಾರಿ…!

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ನಡೆಯುತ್ತಿರುವ ಐದನೇ ವರ್ಷದ ಉಡುಪಿ ಉಚ್ಚಿಲ ದಸರಾ–2026ರ ಅಂಗವಾಗಿ ಕೈಗೊಂಡಿರುವ ವಿದ್ಯುತ್ ದೀಪಾಲಂಕಾರ ಭಕ್ತರು…

2 hours ago

ಉಡುಪಿ: ಉಡುಪಿಯಲ್ಲಿ ಹಾಡಹಗಲೇ ಮೊಬೈಲ್ ಕಳ್ಳತನ; ಸಿಸಿಟಿವಿಯಲ್ಲಿ ಕೃತ್ಯ ಸೆರೆ…!

ನಗರದ ಹೃದಯಭಾಗದಲ್ಲಿರುವ ಮೊಬೈಲ್ ಅಂಗಡಿಯೊಂದರಲ್ಲಿ ಹಾಡಹಗಲೇ ಮೊಬೈಲ್ ಕಳ್ಳತನ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ಗ್ರಾಹಕರೊಬ್ಬರು ತಮ್ಮ ಮೊಬೈಲ್ ಪಡೆಯಲು…

2 hours ago

ಉಡುಪಿ: ಉಡುಪಿಯಲ್ಲಿ ಜಾನುವಾರು ಕಳವು ಪ್ರಕರಣ: ಇಬ್ಬರ ಬಂಧನ, ನಾಲ್ಕು ಜಾನುವಾರುಗಳ ರಕ್ಷಣೆ

ಕಾರ್ಕಳ ತಾಲೂಕಿನ ಕುಕ್ಕುಜೆ ಸಮೀಪದಿಂದ ಜಾನುವಾರುಗಳನ್ನು ಕಳವು ಮಾಡಿ ವಧೆಗಾಗಿ ಸಾಗಿಸುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಹಿರಿಯಡಕ ಪೊಲೀಸರು ಬಂಧಿಸಿದ್ದಾರೆ.…

2 hours ago

ಮಂಗಳೂರು: ಪಡಿತರ ವಿತರಣೆಯ ತಾಂತ್ರಿಕ ಸಮಸ್ಯೆ ಪರಿಹರಿಸಿ; ಮನೆ ಬಾಗಿಲಿಗೆ ಪಡಿತರ ತಲುಪಿಸಲು ಆಗ್ರಹ

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪಡಿತರ ವಿತರಣೆಗೆ ಸಂಬಂಧಿಸಿದ ತಾಂತ್ರಿಕ ಹಾಗೂ ಆಡಳಿತಾತ್ಮಕ ಸಮಸ್ಯೆಗಳನ್ನು ಕೂಡಲೇ ಪರಿಹರಿಸಬೇಕು ಎಂದು…

5 days ago