ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಫರೀದ್ ಅವರ ಜನ್ಮದಿನದ ಪ್ರಯುಕ್ತ ಯು.ಟಿ. ಖಾದರ್ ಅಭಿಮಾನಿ ಬಳಗ ಫರಂಗಿಪೇಟೆ–ಪುದು ವತಿಯಿಂದ ಬಂಟ್ವಾಳ ಸರ್ಕಾರಿ ಆಸ್ಪತ್ರೆಯಲ್ಲಿ ಸೇವಾ ಕಾರ್ಯಕ್ರಮ ಆಯೋಜಿಸಲಾಯಿತು.
ಸರ್ವಧರ್ಮದವರ ಸಹಭಾಗಿತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣುಹಂಪಲು ಹಾಗೂ ಸಿಹಿತಿಂಡಿಗಳನ್ನು ವಿತರಿಸಿ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಉಮ್ಮರ್ ಫಾರೂಕ್ ಫರಂಗಿಪೇಟೆ ಹಾಗೂ ಪುದು ಗ್ರಾಮ ಪಂಚಾಯಿತಿ ಅಧ್ಯಕ್ಷ ರಮ್ಲಾನ್ ಮಾರಿಪಳ್ಳ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿವಿಧ ಸಮುದಾಯಗಳ ಮುಖಂಡರು ಮತ್ತು ಕಾರ್ಯಕರ್ತರು ಪಾಲ್ಗೊಂಡರು.
ಈ ಸಂದರ್ಭದಲ್ಲಿ ಮಾತನಾಡಿದ ಉಮ್ಮರ್ ಫಾರೂಕ್, ಸಚಿವ ಯು.ಟಿ. ಖಾದರ್ ಅವರು ಆರೋಗ್ಯ ಕ್ಷೇತ್ರದ ಅಭಿವೃದ್ಧಿ ಹಾಗೂ ಜನರ ಕಲ್ಯಾಣಕ್ಕಾಗಿ ನಿರಂತರವಾಗಿ ಶ್ರಮಿಸುತ್ತಿದ್ದಾರೆ. ಜಾತಿ, ಮತದ ಭೇದವಿಲ್ಲದೆ ಎಲ್ಲರಿಗೂ ಸಮಾನವಾಗಿ ಸ್ಪಂದಿಸುವ ಅವರ ಗುಣ ಮಾದರಿಯಾಗಿದೆ. ಅವರು ಇನ್ನಷ್ಟು ವರ್ಷಗಳ ಕಾಲ ಜನಸೇವೆ ಮಾಡಲು ಭಗವಂತ ಆರೋಗ್ಯ ಮತ್ತು ಶಕ್ತಿಯನ್ನು ಕರುಣಿಸಲಿ ಎಂದು ಹಾರೈಸಿದರು.
ಕರ್ನಾಟಕದ ನೂತನ ರಾಜ್ಯಪಾಲೆಯಾಗಿ ಬಿಜೆಪಿ ಹಿರಿಯ ನಾಯಕಿ ಹಾಗೂ ಮಾಜಿ ಸಂಸದೆ ಡಾ. ಸುಧಾ ಯಾದವ್ ಅವರನ್ನು ನೇಮಕ ಮಾಡಲಾಗಿದೆ…
ಭಾರತದ ವಿರುದ್ಧ ರಾಂಚಿಯಲ್ಲಿ ನಡೆದ ಎರಡನೇ ಟಿ20 ಪಂದ್ಯದಲ್ಲಿ ಐಸಿಸಿ ನೀತಿ ಸಂಹಿತೆ ಉಲ್ಲಂಘಿಸಿದ ವೆಸ್ಟ್ ಇಂಡೀಸ್ ತಂಡದ ಆಟಗಾರರಾದ…
ಭಾರತ ತಂಡದ ಅನುಭವಿ ಆಲ್‌ರೌಂಡರ್ ರವೀಂದ್ರ ಜಡೇಜಾ ದೇಶಿ ಕ್ರಿಕೆಟ್‌ನಲ್ಲಿ ಮತ್ತೊಮ್ಮೆ ತಮ್ಮ ಬ್ಯಾಟಿಂಗ್ ಸಾಮರ್ಥ್ಯ ಪ್ರದರ್ಶಿಸಿದ್ದಾರೆ. ರಾಜ್‌ಕೋಟ್‌ನ ನಿರಂಜನ್…
ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧದ ಹಿನ್ನೆಲೆಯಲ್ಲಿ, ಉಭಯ ದೇಶಗಳು ಪರಸ್ಪರರ ಇಂಧನ ಮೂಲಸೌಕರ್ಯಗಳ ಮೇಲಿನ ದಾಳಿಯನ್ನು ನಿಲ್ಲಿಸಲು ಒಪ್ಪಿಕೊಂಡಿವೆ…
ದೆಹಲಿಯ ಜಂತರ್ ಮಂತರ್‌ನಲ್ಲಿ ಶಾಂತಿಯುತ ಪ್ರತಿಭಟನೆ ನಡೆಸಲು ತಕ್ಷಣ ದಿನಾಂಕ ನಿಗದಿಪಡಿಸುವಂತೆ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪೊಲೀಸರನ್ನು ಒತ್ತಾಯಿಸಿದೆ.…
ದಸರಾ ರಜೆ ನೀಡದೆ ಪದವಿ ಸೆಮಿಸ್ಟರ್ ಪರೀಕ್ಷೆ ಆಯೋಜಿಸಿರುವುದನ್ನು ವಿರೋಧಿಸಿ ಮಂಗಳೂರಿನ ಬೆಂದೂರ್‌ವೆಲ್‌ನಲ್ಲಿರುವ ಸೈಂಟ್ ಆಗ್ನೆಸ್ ಕಾಲೇಜಿನ ವಿದ್ಯಾರ್ಥಿಗಳು ಪ್ರತಿಭಟನೆ…