ಗ್ರಾಮೀಣ ಮಹಿಳೆಯರಿಗೆ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದಲ್ಲಿ ಆರಂಭಿಸಲಾದ ಹಲಸು ಸಂಸ್ಕರಣಾ ಘಟಕ ನಿರೀಕ್ಷಿತ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿಲ್ಲ. ಘಟಕ ನಾಮಕಾವಸ್ಥೆಯಲ್ಲಿ ಮುಂದುವರಿದಿದ್ದು, ಸರ್ಕಾರದಿಂದ ಪಡೆದ ಅನುದಾನದ ಬಳಕೆ ಕುರಿತು ಅನುಮಾನಗಳಿವೆ ಎಂದು ಸಾಮಾಜಿಕ ಕಾರ್ಯಕರ್ತ ಬೆಳ್ಳಿಪ್ಪಾಡಿ ನೇಮಿರಾಜ್ ರೈ ಆರೋಪಿಸಿದ್ದಾರೆ.
ಉಡುಪಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಸಾಂಪ್ರದಾಯಿಕ ಕೈಗಾರಿಕೆಗಳ ಪುನಶ್ಚೇತನಕ್ಕಾಗಿ ನಿಧಿ (SFURTI) ಯೋಜನೆಯಡಿ ಈ ಹಲಸು ಸಂಸ್ಕರಣಾ ಘಟಕವನ್ನು ಸ್ಥಾಪಿಸಲಾಗಿದೆ ಎಂದು ತಿಳಿಸಿದರು. ಈ ಉದ್ದೇಶಕ್ಕಾಗಿ ನಿಟ್ಟೆಯಲ್ಲಿ ಪ್ರತ್ಯೇಕವಾಗಿ ಸುಫಲ ಫಾರ್ಮರ್ಸ್ ಪ್ರೊಡ್ಯೂಸರ್ ಕಂಪನಿಯನ್ನು ಆರಂಭಿಸಲಾಗಿದೆ ಎಂದರು.
ಕಂಪನಿಯಲ್ಲಿ 750 ಸದಸ್ಯರಿದ್ದಾರೆ ಎಂದು ಹೇಳಲಾಗುತ್ತಿದ್ದು, ಸುಮಾರು 1,000 ಗ್ರಾಮೀಣ ಮಹಿಳೆಯರಿಗೆ ಉದ್ಯೋಗಾವಕಾಶ ಕಲ್ಪಿಸುವ ಭರವಸೆ ನೀಡಲಾಗಿತ್ತು. ಆದರೆ, ಘಟಕದ ಕಾರ್ಯನಿರ್ವಹಣೆ ಮತ್ತು ಮಹಿಳೆಯರಿಗೆ ಉದ್ಯೋಗ ಒದಗಿಸುವ ವಿಚಾರದಲ್ಲಿ ನಿರೀಕ್ಷಿತ ಪ್ರಗತಿ ಕಂಡುಬರುತ್ತಿಲ್ಲ ಎಂದು ನೇಮಿರಾಜ್ ರೈ ದೂರಿದರು.
ಸರ್ಕಾರದ ಅನುದಾನದಿಂದ ಸ್ಥಾಪಿಸಲಾದ ಘಟಕದ ಉದ್ದೇಶ ಈಡೇರಿದೆಯೇ ಮತ್ತು ಅನುದಾನವನ್ನು ಸಮರ್ಪಕವಾಗಿ ಬಳಸಲಾಗಿದೆಯೇ ಎಂಬ ಬಗ್ಗೆ ಪರಿಶೀಲನೆ ನಡೆಯಬೇಕೆಂದು ಅವರು ಆಗ್ರಹಿಸಿದರು.
ಕರ್ನಾಟಕದ ನೂತನ ರಾಜ್ಯಪಾಲೆಯಾಗಿ ಬಿಜೆಪಿ ಹಿರಿಯ ನಾಯಕಿ ಹಾಗೂ ಮಾಜಿ ಸಂಸದೆ ಡಾ. ಸುಧಾ ಯಾದವ್ ಅವರನ್ನು ನೇಮಕ ಮಾಡಲಾಗಿದೆ…
ಭಾರತದ ವಿರುದ್ಧ ರಾಂಚಿಯಲ್ಲಿ ನಡೆದ ಎರಡನೇ ಟಿ20 ಪಂದ್ಯದಲ್ಲಿ ಐಸಿಸಿ ನೀತಿ ಸಂಹಿತೆ ಉಲ್ಲಂಘಿಸಿದ ವೆಸ್ಟ್ ಇಂಡೀಸ್ ತಂಡದ ಆಟಗಾರರಾದ…
ಭಾರತ ತಂಡದ ಅನುಭವಿ ಆಲ್‌ರೌಂಡರ್ ರವೀಂದ್ರ ಜಡೇಜಾ ದೇಶಿ ಕ್ರಿಕೆಟ್‌ನಲ್ಲಿ ಮತ್ತೊಮ್ಮೆ ತಮ್ಮ ಬ್ಯಾಟಿಂಗ್ ಸಾಮರ್ಥ್ಯ ಪ್ರದರ್ಶಿಸಿದ್ದಾರೆ. ರಾಜ್‌ಕೋಟ್‌ನ ನಿರಂಜನ್…
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಫರೀದ್ ಅವರ…
ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧದ ಹಿನ್ನೆಲೆಯಲ್ಲಿ, ಉಭಯ ದೇಶಗಳು ಪರಸ್ಪರರ ಇಂಧನ ಮೂಲಸೌಕರ್ಯಗಳ ಮೇಲಿನ ದಾಳಿಯನ್ನು ನಿಲ್ಲಿಸಲು ಒಪ್ಪಿಕೊಂಡಿವೆ…
ದೆಹಲಿಯ ಜಂತರ್ ಮಂತರ್‌ನಲ್ಲಿ ಶಾಂತಿಯುತ ಪ್ರತಿಭಟನೆ ನಡೆಸಲು ತಕ್ಷಣ ದಿನಾಂಕ ನಿಗದಿಪಡಿಸುವಂತೆ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪೊಲೀಸರನ್ನು ಒತ್ತಾಯಿಸಿದೆ.…