ರಾಜ್ಯ

ಬೆಂಗಳೂರು: ಜ್ಯೋತಿಷ್ಯದ ನೆಪದಲ್ಲಿ ₹40 ಲಕ್ಷ ವಂಚನೆ: ಎಐ ವಿಡಿಯೋ ಮೂಲಕ ಅಪಘಾತದ ನಾಟಕ!

ಜ್ಯೋತಿಷ್ಯ ಹೇಳುವ ನೆಪದಲ್ಲಿ 62 ವರ್ಷದ ಶಾಂತಮ್ಮ ಅವರನ್ನು ನಂಬಿಸಿ ಸುಮಾರು ₹40 ಲಕ್ಷ ಮೌಲ್ಯದ ಚಿನ್ನಾಭರಣ ಪಡೆದು ವಂಚಿಸಿದ ಆರೋಪದ ಮೇಲೆ ವೆಂಕಟೇಶ್ ಎಂಬಾತನನ್ನು ಬ್ಯಾಟರಾಯನಪುರ ಪೊಲೀಸರು ಬಂಧಿಸಿದ್ದಾರೆ. ವಂಚನೆ ಬಳಿಕ ಅಪಘಾತದ ನಾಟಕವಾಡಿ, ಕೃತಕ ಬುದ್ಧಿಮತ್ತೆ (ಎಐ) ಮೂಲಕ ಸಿದ್ಧಪಡಿಸಿದ ವಿಡಿಯೋ ಕಳುಹಿಸಿ ಆಂಧ್ರಪ್ರದೇಶಕ್ಕೆ ಪರಾರಿಯಾಗಿದ್ದ ಎನ್ನಲಾಗಿದೆ.

ಅನಾರೋಗ್ಯದ ಸಮಸ್ಯೆಯಿಂದ ಆಗಾಗ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ತೆರಳುತ್ತಿದ್ದ ಶಾಂತಮ್ಮ ಅವರಿಗೆ ಈ ವೇಳೆ ವೆಂಕಟೇಶ್ ಪರಿಚಯವಾಗಿದ್ದ. ಜ್ಯೋತಿಷ್ಯ ಹೇಳುತ್ತಿದ್ದ ಆತನ ಮಾತುಗಳನ್ನು ನಂಬಿದ್ದ ಶಾಂತಮ್ಮ, ಬಳಿಕ ಮಗನ ಕುಡಿತದ ಚಟ ಹಾಗೂ ಮಗಳ ಮದುವೆ ವಿಚಾರವಾಗಿ ಸಲಹೆ ಪಡೆಯಲು ಆತನನ್ನು ಸಂಪರ್ಕಿಸಿದ್ದರು.

ನಂತರ ಶಾಂತಮ್ಮ ಅವರ ಮನೆಗೆ ಬಂದಿದ್ದ ವೆಂಕಟೇಶ್, ನಿಂಬೆಹಣ್ಣು ನೀಡಿ ಚೌಡೇಶ್ವರಿ ಪೂಜೆ ಮಾಡಬೇಕು. ಮನೆಯಲ್ಲಿರುವ ಚಿನ್ನಾಭರಣಗಳಿಗೆ ಪೂಜೆ ಮಾಡಿದರೆ ಒಳ್ಳೆಯದಾಗುತ್ತದೆ ಎಂದು ನಂಬಿಸಿದ್ದ ಎನ್ನಲಾಗಿದೆ. ಇದೇ ನೆಪದಲ್ಲಿ ಪ್ರತಿ ಅಮಾವಾಸ್ಯೆಯಂದು ಮನೆಗೆ ಬರುತ್ತಿದ್ದ ಆತ, ಒಡವೆಗಳನ್ನು ಪಡೆದುಕೊಂಡು ಹೋಗುತ್ತಿದ್ದ. ಹೀಗೆ ಸುಮಾರು ಒಂದು ವರ್ಷದಲ್ಲಿ 300 ಗ್ರಾಂ ಚಿನ್ನಾಭರಣಗಳನ್ನು ಪಡೆದಿದ್ದಾನೆ ಎಂದು ಆರೋಪಿಸಲಾಗಿದೆ.

ಆಗಸ್ಟ್ 19ರಂದು ವರಮಹಾಲಕ್ಷ್ಮೀ ಹಬ್ಬದ ಹಿನ್ನೆಲೆಯಲ್ಲಿ ಶಾಂತಮ್ಮ ಒಡವೆಗಳನ್ನು ವಾಪಸ್ ಕೇಳಿದಾಗ, ತನಗೆ ಅಪಘಾತವಾಗಿದ್ದು ಬದುಕುಳಿಯುವ ಸಾಧ್ಯತೆ ಕಡಿಮೆ ಎಂಬಂತೆ ಬಿಂಬಿಸುವ ಎಐ ವಿಡಿಯೋವನ್ನು ಕಳುಹಿಸಿದ್ದ ಎನ್ನಲಾಗಿದೆ. ಬಳಿಕ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ಪರಾರಿಯಾಗಿದ್ದ. ವಿಡಿಯೋ ಪರಿಶೀಲಿಸಿದಾಗ ಅದು ಕೃತಕವಾಗಿ ಸಿದ್ಧಪಡಿಸಿರುವುದು ಗೊತ್ತಾಗಿದ್ದು, ಶಾಂತಮ್ಮ ಪೊಲೀಸರಿಗೆ ದೂರು ನೀಡಿದ್ದರು.

ಪ್ರಕರಣದ ತನಿಖೆ ಕೈಗೊಂಡ ಬ್ಯಾಟರಾಯನಪುರ ಪೊಲೀಸರು ಆರೋಪಿ ವೆಂಕಟೇಶ್‌ನನ್ನು ಬಂಧಿಸಿ, ವಂಚನೆಗೆ ಸಂಬಂಧಿಸಿದಂತೆ 200 ಗ್ರಾಂ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಉಡುಪಿ: ನಿಟ್ಟೆ ಹಲಸು ಸಂಸ್ಕರಣಾ ಘಟಕ ನಾಮಕಾವಸ್ಥೆ: ಅನುದಾನದ ಬಳಕೆ ಬಗ್ಗೆ ಅನುಮಾನ…!

ಗ್ರಾಮೀಣ ಮಹಿಳೆಯರಿಗೆ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದಲ್ಲಿ ಆರಂಭಿಸಲಾದ ಹಲಸು ಸಂಸ್ಕರಣಾ ಘಟಕ ನಿರೀಕ್ಷಿತ ರೀತಿಯಲ್ಲಿ…

20 hours ago

ಬೆಂಗಳೂರು: ಕರ್ನಾಟಕದ ನೂತನ ರಾಜ್ಯಪಾಲೆಯಾಗಿ ಡಾ. ಸುಧಾ ಯಾದವ್ ನೇಮಕ?

ಕರ್ನಾಟಕದ ನೂತನ ರಾಜ್ಯಪಾಲೆಯಾಗಿ ಬಿಜೆಪಿ ಹಿರಿಯ ನಾಯಕಿ ಹಾಗೂ ಮಾಜಿ ಸಂಸದೆ ಡಾ. ಸುಧಾ ಯಾದವ್ ಅವರನ್ನು ನೇಮಕ ಮಾಡಲಾಗಿದೆ…

1 day ago

ರಾಂಚಿ: ಮೈದಾನದಲ್ಲಿ ಅನುಚಿತ ವರ್ತನೆ: ವೆಸ್ಟ್ ಇಂಡೀಸ್‌ನ ಪೊವೆಲ್, ರದರ್‌ಫೋರ್ಡ್‌ಗೆ ಐಸಿಸಿ ಎಚ್ಚರಿಕೆ

ಭಾರತದ ವಿರುದ್ಧ ರಾಂಚಿಯಲ್ಲಿ ನಡೆದ ಎರಡನೇ ಟಿ20 ಪಂದ್ಯದಲ್ಲಿ ಐಸಿಸಿ ನೀತಿ ಸಂಹಿತೆ ಉಲ್ಲಂಘಿಸಿದ ವೆಸ್ಟ್ ಇಂಡೀಸ್ ತಂಡದ ಆಟಗಾರರಾದ…

1 day ago

ರಾಜ್‌ಕೋಟ್: ರಣಜಿ ಟ್ರೋಫಿಯಲ್ಲಿ ರವೀಂದ್ರ ಜಡೇಜಾ ಶತಕದ ಅಬ್ಬರ; ನ್ಯೂಜಿಲೆಂಡ್ ಸರಣಿಗೆ ಭರ್ಜರಿ ತಾಲೀಮು

ಭಾರತ ತಂಡದ ಅನುಭವಿ ಆಲ್‌ರೌಂಡರ್ ರವೀಂದ್ರ ಜಡೇಜಾ ದೇಶಿ ಕ್ರಿಕೆಟ್‌ನಲ್ಲಿ ಮತ್ತೊಮ್ಮೆ ತಮ್ಮ ಬ್ಯಾಟಿಂಗ್ ಸಾಮರ್ಥ್ಯ ಪ್ರದರ್ಶಿಸಿದ್ದಾರೆ. ರಾಜ್‌ಕೋಟ್‌ನ ನಿರಂಜನ್…

1 day ago

ಬಂಟ್ವಾಳ: ಯು.ಟಿ. ಖಾದರ್ ಜನ್ಮದಿನ: ಬಂಟ್ವಾಳ ಸರ್ಕಾರಿ ಆಸ್ಪತ್ರೆ ರೋಗಿಗಳಿಗೆ ಹಣ್ಣುಹಂಪಲು ವಿತರಣೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಫರೀದ್ ಅವರ…

1 day ago

ವಾಷಿಂಗ್ಟನ್: ರಷ್ಯಾ–ಉಕ್ರೇನ್ ಇಂಧನ ಕದನ ವಿರಾಮಕ್ಕೆ ಒಪ್ಪಿಗೆ: ಟ್ರಂಪ್ ಘೋಷಣೆ

ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧದ ಹಿನ್ನೆಲೆಯಲ್ಲಿ, ಉಭಯ ದೇಶಗಳು ಪರಸ್ಪರರ ಇಂಧನ ಮೂಲಸೌಕರ್ಯಗಳ ಮೇಲಿನ ದಾಳಿಯನ್ನು ನಿಲ್ಲಿಸಲು ಒಪ್ಪಿಕೊಂಡಿವೆ…

2 days ago