ಕರಾವಳಿ

ಬಂಟ್ವಾಳ: ಪುಟಾಣಿಗಳಿಂದ ‘ಕದಂಬ ಕೌಶಿಕೆ’ ಯಕ್ಷಗಾನ ತಾಳಮದ್ದಳೆ ಪ್ರಸ್ತುತಿ…!

ಬಿ.ಸಿ.ರೋಡಿನ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಪ್ರಯುಕ್ತ ಸ್ವರ್ಣ ಅಕಾಡೆಮಿ ಲರ್ನಿಂಗ್ ಸೆಂಟರ್‌ನ ಪುಟಾಣಿ ಮಕ್ಕಳಿಂದ ಬುಧವಾರ ನಡೆದ ‘ಕದಂಬ ಕೌಶಿಕೆ’ ಯಕ್ಷಗಾನ ತಾಳಮದ್ದಳೆ ಪ್ರಸ್ತುತಿ ಕಲಾಭಿಮಾನಿಗಳ ಮನಸೂರೆಗೊಂಡಿತು.

ಯಕ್ಷಗುರು ನರಸಿಂಹ ಮಯ್ಯ ಅವರ ನಿರ್ದೇಶನದಲ್ಲಿ ಮೂಡಿಬಂದ ಈ ಕಾರ್ಯಕ್ರಮದಲ್ಲಿ ಮಕ್ಕಳ ಆಕರ್ಷಕ ಮಾತುಗಾರಿಕೆ, ಪಾತ್ರಾಭಿವ್ಯಕ್ತಿ ಹಾಗೂ ವಿಚಾರ ಮಂಡನೆ ಗಮನ ಸೆಳೆಯಿತು. ತಾಳಮದ್ದಳೆಯ ಪ್ರಮುಖ ಅಂಗಗಳಾದ ಅರ್ಥಗಾರಿಕೆ ಮತ್ತು ಮಾತುಗಾರಿಕೆಯಲ್ಲಿ ಪುಟಾಣಿಗಳು ತೋರಿದ ಪ್ರತಿಭೆ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಯಿತು.

ವೇದಿಕೆಯಲ್ಲಿ ಪಾತ್ರಗಳಿಗೆ ತಕ್ಕಂತೆ ಭಾವಪ್ರಕಟಣೆ ಮಾಡುತ್ತಾ, ತಮ್ಮದೇ ಶೈಲಿಯಲ್ಲಿ ಸಂಭಾಷಣೆಗಳನ್ನು ಮಂಡಿಸಿದ ಮಕ್ಕಳು ಪಾತ್ರಗಳಿಗೆ ಜೀವ ತುಂಬಿದರು. ಗುರುಗಳ ತರಬೇತಿ, ನಿರಂತರ ಅಭ್ಯಾಸ ಹಾಗೂ ಮಕ್ಕಳ ಪರಿಶ್ರಮ ಪ್ರಸ್ತುತಿಯಲ್ಲಿ ಸ್ಪಷ್ಟವಾಗಿ ಗೋಚರಿಸಿತು.

ಕಾರ್ಯಕ್ರಮದುದ್ದಕ್ಕೂ ಮಕ್ಕಳ ಶಿಸ್ತು, ಸಂಯಮ ಮತ್ತು ಕಲೆಯ ಬಗೆಗಿನ ಗಂಭೀರತೆ ಮೆಚ್ಚುಗೆಗೆ ಪಾತ್ರವಾಯಿತು. ಸಾಲಾಗಿ ಶಿಸ್ತಿನಿಂದ ಸಾಗುವುದು, ವೇದಿಕೆಯಿಂದ ಪ್ರೇಕ್ಷಕರಿಗೆ ನಮಸ್ಕರಿಸುವುದು ಸೇರಿದಂತೆ ಪ್ರತಿಯೊಂದು ಹಂತದಲ್ಲಿಯೂ ಅವರ ಸಂಸ್ಕಾರ ಮತ್ತು ಕಲಾ ಬದ್ಧತೆ ಎದ್ದು ಕಾಣಿಸಿತು. ಪುಟಾಣಿಗಳ ಈ ಯಕ್ಷಗಾನ ತಾಳಮದ್ದಳೆ ಪ್ರಸ್ತುತಿ ಯಕ್ಷಗಾನ ಕಲೆಯ ಮುಂದಿನ ತಲೆಮಾರಿನ ಪ್ರತಿಭೆಗೆ ಸಾಕ್ಷಿಯಾಯಿತು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಮಂಗಳೂರು : ಕಳ್ಳತನ ಪ್ರಕರಣ ಒಂದೂವರೆ ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ…!

ಕಳ್ಳತನ ಪ್ರಕರಣವೊಂದರಲ್ಲಿ ಸುಮಾರು ಒಂದೂವರೆ ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕೇರಳದ ಮಲಪ್ಪುರಂ ನಿವಾಸಿ ರಾಮ್‌ಶೀದ್‌ನನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.…

43 mins ago

ಉಡುಪಿ: ಅ.17ರಿಂದ ಬ್ರಹ್ಮಾವರದಲ್ಲಿ ಕೃಷಿ ಮತ್ತು ತೋಟಗಾರಿಕೆ ಮೇಳ–2026

ಕೃಷಿ ಅಭಿವೃದ್ಧಿ, ಆಧುನಿಕ ತಂತ್ರಜ್ಞಾನಗಳ ಪರಿಚಯ ಹಾಗೂ ರೈತರು ಮತ್ತು ವಿಜ್ಞಾನಿಗಳ ನಡುವೆ ನೇರ ಸಂವಾದಕ್ಕೆ ಅವಕಾಶ ಕಲ್ಪಿಸುವ ಉದ್ದೇಶದಿಂದ…

59 mins ago

ಪುತ್ತೂರು: ಸಂಟ್ಯಾರ್ ಬಳಿ ಭೀಕರ ಅಪಘಾತ: ಕಾರಿಗೆ ಡಿಕ್ಕಿಯಾಗಿ ರಸ್ತೆಗೆ ಮಗುಚಿಬಿದ್ದ ಲಾರಿ

ರಾಷ್ಟ್ರೀಯ ಹೆದ್ದಾರಿ 275ರ ಸಂಟ್ಯಾರ್ ಬಳಿ ಇಂದು ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದೆ. ಅತಿವೇಗ ಹಾಗೂ…

1 hour ago

ಬಂಟ್ವಾಳ: 2 ವರ್ಷ 9 ತಿಂಗಳ ಪುಟಾಣಿ ಪ್ರದ್ಯಾಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಎಳೆಯ ವಯಸ್ಸಿನಲ್ಲೇ ಅಪರೂಪದ ಪ್ರತಿಭೆ ಪ್ರದರ್ಶಿಸಿರುವ ದಕ್ಷಿಣ ಕನ್ನಡ ಜಿಲ್ಲೆಯ ಪ್ರದ್ಯಾ ವೈ. ಕುಲಾಲ್ ಅವರು ಇಂಡಿಯಾ ಬುಕ್ ಆಫ್…

1 hour ago

ಉಡುಪಿ: ಉಚ್ಚಿಲ ದಸರಾ ಸಂಭ್ರಮಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಆಗಮನ: ಮೀನುಗಾರರ ಸಮಸ್ಯೆ ಪ್ರಸ್ತಾಪಕ್ಕೆ ಸಿದ್ಧತೆ

ಕಾಪು ತಾಲೂಕಿನ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ನಡೆಯುತ್ತಿರುವ ಐದನೇ ವರ್ಷದ ಉಚ್ಚಿಲ ದಸರಾ ಮಹೋತ್ಸವಕ್ಕೆ ಲಲಿತ ಪಂಚಮಿಯಂದು ಮುಖ್ಯಮಂತ್ರಿ…

1 hour ago

ಪುತ್ತೂರು: ನವೆಂಬರ್ 8ರಂದು ಅಶೋಕ ಜನಮನ: 70 ಸಾವಿರ ಮಂದಿಗೆ ದೋಸೆ ವ್ಯವಸ್ಥೆ

ಶಾಸಕ ಅಶೋಕ್ ಕುಮಾರ್ ರೈ ಅವರ ಮಹತ್ವಾಕಾಂಕ್ಷೆಯ ‘ಅಶೋಕ ಜನಮನ’ ಕಾರ್ಯಕ್ರಮಕ್ಕೆ ಸಿದ್ಧತೆಗಳು ಆರಂಭಗೊಂಡಿವೆ. ರೈ ಎಸ್ಟೇಟ್ ಎಜ್ಯುಕೇಶನಲ್ ಆ್ಯಂಡ್…

1 hour ago