ಅಮೃತ್ ಭಾರತ್ ಯೋಜನೆಯಡಿ ಮಂಗಳೂರು ಜಂಕ್ಷನ್ ಅಂತಾರಾಷ್ಟ್ರೀಯ ಮಟ್ಟದ ರೈಲ್ವೆ ನಿಲ್ದಾಣ ಅಭಿವೃದ್ಧಿ ಕಾಮಗಾರಿಗೆ ಆಗಸ್ಟ್ 6 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಜೀ ಹಾಗೂ ಕೇಂದ್ರ ರೈಲ್ವೇ ಸಚಿವರಾದ ಅಶ್ವಿನ್ ವೈಷ್ಣವ್ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಸುವ ಶಿಲಾನ್ಯಾಸ ಕಾರ್ಯಕ್ರಮದ ಪೂರ್ವ ತಯಾರಿಯ ಕುರಿತು ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ ಪ್ರಮುಖರ ಸಭೆ ಶಾಸಕ ವೇದವ್ಯಾಸ್ ಕಾಮತ್ ಅವರ ನೇತೃತ್ವದಲ್ಲಿ ನಡೆಯಿತು.
19.32 ಕೋಟಿ ರೂಪಾಯಿ ವೆಚ್ಚದಲ್ಲಿ ಯೋಜನೆ ರೂಪಿಸಲಾಗಿದ್ದು. ಪಾದಾಚಾರಿ ಮೇಲ್ಸೇತುವೆ, ಹೊಸ ಎಸಿ ವೈಟಿಂಗ್ ಹಾಲ್, ಹೊಸ ಪಾರ್ಸೆಲ್ ಕಚೇರಿ, ಪ್ರವೇಶ ದ್ವಾರ, ಸುಗಮ ಸಂಚಾರಕ್ಕೆ ಅನುಕೂಲವಾಗುವಂತೆ ಪರಿಸರದ ಅಭಿವೃದ್ಧಿ, ಬಸ್ ಬೇ ನಿರ್ಮಾಣ, ವಾಹನ ನಿಲುಗಡೆಗೆ ಹೊಸ ಪಾರ್ಕಿಂಗ್ ವ್ಯವಸ್ಥೆ ಸೇರಿದಂತೆ ಸಮಗ್ರ ಅಭಿವೃದ್ಧಿಗೆ ಯೋಜನೆ ರೂಪಿಸಲಾಗಿದೆ. ದಕ್ಷಿಣ ಕನ್ನಡ ಲೋಕಸಭಾ ಸದಸ್ಯರಾದ ನಳಿನ್ ಕುಮಾರ್ ಅವರ ಪ್ರಯತ್ನದ ಫಲವಾಗಿ ಮಂಗಳೂರು ರೈಲ್ವೆ ನಿಲ್ದಾಣಕ್ಕೆ ಆಧುನಿಕ ಸ್ಪರ್ಷ ಸಿಕ್ಕಂತಾಗಿದೆ ಎಂದು ಶಾಸಕ ಕಾಮತ್ ಹೇಳಿದ್ದಾರೆ. ಆಗಸ್ಟ್ 6 ರಂದು ಬೆಳಗ್ಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಶಿಲಾನ್ಯಾಸ ನೆರವೇರಲಿದೆ. ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಶಾಸಕ ಕಾಮತ್ ಮನವಿ ಮಾಡಿಕೊಂಡಿದ್ದಾರೆ.
ಈ ನಿಟ್ಟಿನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ, ರೈಲ್ವೇ ಸಚಿವ ಅಶ್ವಿನ್ ವೈಷ್ಣವ್ ಹಾಗೂ ರೈಲ್ವೆ ನಿಲ್ದಾಣದ ಅಭಿವೃದ್ಧಿಗೆ ಕಾರಣಕರ್ತರಾದ ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ಶಾಸಕ ಕಾಮತ್ ಅಭಿನಂದನೆ ಸಲ್ಲಿಸಿದ್ದಾರೆ. ಸಭೆಯಲ್ಲಿ ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ ಅಧ್ಯಕ್ಷ ವಿಜಯ್ ಕುಮಾರ್ ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಧೀರ್ ಶೆಟ್ಟಿ ಕಣ್ಣೂರು, ಮಂಡಲ ಪ್ರಧಾನ ಕಾರ್ಯದರ್ಶಿ ಸುರೇಂದ್ರ ಜಪ್ಪಿನಮೊಗರು, ಪಾಲಿಕೆ ಸದಸ್ಯರು, ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.
ಬಿಸಿಯೂಟದ ಸಿಬ್ಬಂದಿಯೊಬ್ಬರ ಕೈ ವಿದ್ಯುತ್ ಚಾಲಿತ ತುರಿಮಣೆಯಲ್ಲಿ ಸಿಲುಕಿಕೊಂಡ ಸಂದರ್ಭದಲ್ಲಿ ಸಮಯಪ್ರಜ್ಞೆ ಮೆರೆದ ನರಿಕೊಂಬು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ…
ನಗರದ ಕೆಪಿಟಿ ಸಿಗ್ನಲ್ ಸಮೀಪ ರಸ್ತೆಯ ಮಧ್ಯಭಾಗದಲ್ಲೇ ಭಾರೀ ಗುಂಡಿಯೊಂದು ನಿರ್ಮಾಣವಾಗಿದ್ದು, ವಾಹನ ಸವಾರರಿಗೆ ಅಪಾಯ ಎದುರಾಗಿದೆ. ಈ ಮಾರ್ಗದಲ್ಲಿ…
ಆಟಿ ಅಮಾವಾಸ್ಯೆಯ ಪವಿತ್ರ ದಿನದಂದು ಬಂಟ್ವಾಳ ತಾಲೂಕಿನ ಐತಿಹಾಸಿಕ ಹಾಗೂ ಪೌರಾಣಿಕ ಪ್ರಸಿದ್ಧಿಯ ನರಹರಿ ಪರ್ವತ ಶ್ರೀ ಸದಾಶಿವ ದೇವಸ್ಥಾನದಲ್ಲಿ…
ತುಳುಕೂಟ ಬಂಟ್ವಾಳ ಹಾಗೂ ಶ್ರೀ ರಕ್ತೇಶ್ವರಿ ದೇವಿ ದೇವಸ್ಥಾನ, ಬಿ.ಸಿ.ರೋಡು ಇದರ ಆಡಳಿತ ಮಂಡಳಿಯ ಆಶ್ರಯದಲ್ಲಿ ವರ್ಷಂಪ್ರತಿ ನಡೆಯುವ ಆಟಿ…
ಲೋಕಾಯುಕ್ತದಲ್ಲಿ ದಾಖಲಾಗಿರುವ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಮೇಲಾಧಿಕಾರಿಗಳ ನಿರ್ದೇಶನದ ಮೇರೆಗೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ತಾಲೂಕು ಕಚೇರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು…
ಆಟಿ ಅಮಾವಾಸ್ಯೆಯ ಪ್ರಯುಕ್ತ ತಾಲೂಕಿನ ಪ್ರಸಿದ್ಧ ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಬುಧವಾರ ಶ್ರದ್ಧಾಭಕ್ತಿ ಹಾಗೂ ಸಂಭ್ರಮದಿಂದ ವಿವಿಧ ಧಾರ್ಮಿಕ…