ಜರ್ಮನಿಯ ಬೋಚಮ್ನ ಹಾಫ್ಸ್ಟೆಡೆ ಪ್ರದೇಶದ ವಸತಿ ಕಟ್ಟಡವೊಂದರಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಮೂವರು ಭಾರತೀಯರು ಮೃತಪಟ್ಟಿದ್ದು, ಐವರು ಗಾಯಗೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಅದೇ ಕಟ್ಟಡದಲ್ಲಿ ವಾಸಿಸುತ್ತಿದ್ದ 41 ವರ್ಷದ ರೊಮೇನಿಯಾ ಪ್ರಜೆಯನ್ನು ಪೊಲೀಸರು ಬಂಧಿಸಿದ್ದಾರೆ.
ಮಂಗಳವಾರ ಮುಂಜಾನೆ ಸುಮಾರು 4.15ಕ್ಕೆ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಮೃತರಲ್ಲಿ 25 ಮತ್ತು 27 ವರ್ಷದ ಇಬ್ಬರು ಮಹಿಳೆಯರು ಹಾಗೂ 26 ವರ್ಷದ ಪುರುಷ ಸೇರಿದ್ದಾರೆ. ಗಾಯಗೊಂಡ ಐವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಬೆಂಕಿಯನ್ನು ಉದ್ದೇಶಪೂರ್ವಕವಾಗಿ ಹಚ್ಚಿರುವ ಶಂಕೆ ವ್ಯಕ್ತವಾಗಿದ್ದು, ತಾಂತ್ರಿಕ ದೋಷದಿಂದ ಬೆಂಕಿ ಕಾಣಿಸಿಕೊಂಡಿರುವ ಸಾಧ್ಯತೆಯನ್ನು ತನಿಖಾಧಿಕಾರಿಗಳು ತಳ್ಳಿಹಾಕಿದ್ದಾರೆ. ಬಂಧಿತ ವ್ಯಕ್ತಿಯ ಪಾತ್ರದ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಮೃತರ ಗುರುತು ಹಾಗೂ ಅವರು ಭಾರತದ ಯಾವ ರಾಜ್ಯಕ್ಕೆ ಸೇರಿದವರು ಎಂಬ ಮಾಹಿತಿ ಇನ್ನೂ ಬಹಿರಂಗವಾಗಿಲ್ಲ. ಘಟನೆಯ ನಿಖರ ಕಾರಣ ತಿಳಿಯಲು ತನಿಖೆ ನಡೆಯುತ್ತಿದೆ.
ಕಳ್ಳತನ ಪ್ರಕರಣವೊಂದರಲ್ಲಿ ಸುಮಾರು ಒಂದೂವರೆ ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕೇರಳದ ಮಲಪ್ಪುರಂ ನಿವಾಸಿ ರಾಮ್ಶೀದ್ನನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.…
ಕೃಷಿ ಅಭಿವೃದ್ಧಿ, ಆಧುನಿಕ ತಂತ್ರಜ್ಞಾನಗಳ ಪರಿಚಯ ಹಾಗೂ ರೈತರು ಮತ್ತು ವಿಜ್ಞಾನಿಗಳ ನಡುವೆ ನೇರ ಸಂವಾದಕ್ಕೆ ಅವಕಾಶ ಕಲ್ಪಿಸುವ ಉದ್ದೇಶದಿಂದ…
ರಾಷ್ಟ್ರೀಯ ಹೆದ್ದಾರಿ 275ರ ಸಂಟ್ಯಾರ್ ಬಳಿ ಇಂದು ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದೆ. ಅತಿವೇಗ ಹಾಗೂ…
ಎಳೆಯ ವಯಸ್ಸಿನಲ್ಲೇ ಅಪರೂಪದ ಪ್ರತಿಭೆ ಪ್ರದರ್ಶಿಸಿರುವ ದಕ್ಷಿಣ ಕನ್ನಡ ಜಿಲ್ಲೆಯ ಪ್ರದ್ಯಾ ವೈ. ಕುಲಾಲ್ ಅವರು ಇಂಡಿಯಾ ಬುಕ್ ಆಫ್…
ಕಾಪು ತಾಲೂಕಿನ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ನಡೆಯುತ್ತಿರುವ ಐದನೇ ವರ್ಷದ ಉಚ್ಚಿಲ ದಸರಾ ಮಹೋತ್ಸವಕ್ಕೆ ಲಲಿತ ಪಂಚಮಿಯಂದು ಮುಖ್ಯಮಂತ್ರಿ…
ಶಾಸಕ ಅಶೋಕ್ ಕುಮಾರ್ ರೈ ಅವರ ಮಹತ್ವಾಕಾಂಕ್ಷೆಯ ‘ಅಶೋಕ ಜನಮನ’ ಕಾರ್ಯಕ್ರಮಕ್ಕೆ ಸಿದ್ಧತೆಗಳು ಆರಂಭಗೊಂಡಿವೆ. ರೈ ಎಸ್ಟೇಟ್ ಎಜ್ಯುಕೇಶನಲ್ ಆ್ಯಂಡ್…