ಕರಾವಳಿ

ಮಂಗಳೂರು: ಮಂಗಳೂರು ದಸರಾ- ಇಂದು ಸಂಜೆ 4ರಿಂದ ರಾತ್ರಿ 8ರವರೆಗೆ ಸಂಚಾರ ಬದಲಾವಣೆ

ಮಂಗಳೂರು ದಸರಾ ಮಹೋತ್ಸವದ ಅಂಗವಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು (ಅ.15) ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ನಗರದ ಪ್ರಮುಖ ರಸ್ತೆಗಳಲ್ಲಿ ಸಂಜೆ 4ರಿಂದ ರಾತ್ರಿ 8ರವರೆಗೆ ವಾಹನ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ.

ಕೆಪಿಟಿ ವೃತ್ತದಿಂದ ಕೆಎಸ್‌ಆರ್‌ಟಿಸಿ, ಲಾಲ್‌ಬಾಗ್ ಮೂಲಕ ನಾರಾಯಣಗುರು ವೃತ್ತದವರೆಗೆ ಹಾಗೂ ಅಲ್ಲಿಂದ ಮಣ್ಣಗುಡ್ಡೆ, ದುರ್ಗಾಮಹಲ್ ಜಂಕ್ಷನ್, ಕುದ್ರೋಳಿ ದೇವಸ್ಥಾನ, ಅಳಕೆ ಸೇತುವೆ ಮತ್ತು ನ್ಯೂ ಚಿತ್ರಾ ಜಂಕ್ಷನ್ ಕಡೆಗೆ ಸಂಚರಿಸುವ ರಸ್ತೆಗಳಲ್ಲಿ ವಾಹನ ದಟ್ಟಣೆ ಉಂಟಾಗುವ ಸಾಧ್ಯತೆಯಿದೆ.

ಈ ಹಿನ್ನೆಲೆಯಲ್ಲಿ ಸಂಜೆ 4ರಿಂದ ರಾತ್ರಿ 8ರವರೆಗೆ ನ್ಯೂ ಚಿತ್ರಾ ಜಂಕ್ಷನ್‌ನಿಂದ ದುರ್ಗಾಮಹಲ್ ಜಂಕ್ಷನ್‌ವರೆಗೆ ಹಾಗೂ ದುರ್ಗಾಮಹಲ್ ಜಂಕ್ಷನ್‌ನಿಂದ ನ್ಯೂ ಚಿತ್ರಾ ಜಂಕ್ಷನ್‌ವರೆಗೆ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದ್ದು, ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಸೂಚಿಸಿದ್ದಾರೆ.

ಗಣ್ಯರು ಸಂಚರಿಸುವ ರಸ್ತೆಗಳಲ್ಲಿ ವಾಹನ ನಿಲುಗಡೆಗೆ ಅವಕಾಶವಿರುವುದಿಲ್ಲ. ಕುದ್ರೋಳಿ ದೇವಸ್ಥಾನಕ್ಕೆ ಆಗಮಿಸುವ ಭಕ್ತರು ಮಣ್ಣಗುಡ್ಡೆ ಮತ್ತು ಗಾಂಧಿನಗರದ ಅಡ್ಡರಸ್ತೆಗಳಲ್ಲಿ ವಾಹನಗಳನ್ನು ನಿಲುಗಡೆ ಮಾಡಬೇಕು. ಸಾರ್ವಜನಿಕರು ಪೊಲೀಸ್ ಸಿಬ್ಬಂದಿಯ ಸೂಚನೆಗಳನ್ನು ಪಾಲಿಸಿ, ಸುಗಮ ಸಂಚಾರಕ್ಕೆ ಸಹಕರಿಸುವಂತೆ ಪೊಲೀಸ್ ಇಲಾಖೆ ಮನವಿ ಮಾಡಿದೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಮಂಗಳೂರು : ಕಳ್ಳತನ ಪ್ರಕರಣ ಒಂದೂವರೆ ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ…!

ಕಳ್ಳತನ ಪ್ರಕರಣವೊಂದರಲ್ಲಿ ಸುಮಾರು ಒಂದೂವರೆ ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕೇರಳದ ಮಲಪ್ಪುರಂ ನಿವಾಸಿ ರಾಮ್‌ಶೀದ್‌ನನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.…

1 hour ago

ಉಡುಪಿ: ಅ.17ರಿಂದ ಬ್ರಹ್ಮಾವರದಲ್ಲಿ ಕೃಷಿ ಮತ್ತು ತೋಟಗಾರಿಕೆ ಮೇಳ–2026

ಕೃಷಿ ಅಭಿವೃದ್ಧಿ, ಆಧುನಿಕ ತಂತ್ರಜ್ಞಾನಗಳ ಪರಿಚಯ ಹಾಗೂ ರೈತರು ಮತ್ತು ವಿಜ್ಞಾನಿಗಳ ನಡುವೆ ನೇರ ಸಂವಾದಕ್ಕೆ ಅವಕಾಶ ಕಲ್ಪಿಸುವ ಉದ್ದೇಶದಿಂದ…

1 hour ago

ಪುತ್ತೂರು: ಸಂಟ್ಯಾರ್ ಬಳಿ ಭೀಕರ ಅಪಘಾತ: ಕಾರಿಗೆ ಡಿಕ್ಕಿಯಾಗಿ ರಸ್ತೆಗೆ ಮಗುಚಿಬಿದ್ದ ಲಾರಿ

ರಾಷ್ಟ್ರೀಯ ಹೆದ್ದಾರಿ 275ರ ಸಂಟ್ಯಾರ್ ಬಳಿ ಇಂದು ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದೆ. ಅತಿವೇಗ ಹಾಗೂ…

1 hour ago

ಬಂಟ್ವಾಳ: 2 ವರ್ಷ 9 ತಿಂಗಳ ಪುಟಾಣಿ ಪ್ರದ್ಯಾಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಎಳೆಯ ವಯಸ್ಸಿನಲ್ಲೇ ಅಪರೂಪದ ಪ್ರತಿಭೆ ಪ್ರದರ್ಶಿಸಿರುವ ದಕ್ಷಿಣ ಕನ್ನಡ ಜಿಲ್ಲೆಯ ಪ್ರದ್ಯಾ ವೈ. ಕುಲಾಲ್ ಅವರು ಇಂಡಿಯಾ ಬುಕ್ ಆಫ್…

1 hour ago

ಉಡುಪಿ: ಉಚ್ಚಿಲ ದಸರಾ ಸಂಭ್ರಮಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಆಗಮನ: ಮೀನುಗಾರರ ಸಮಸ್ಯೆ ಪ್ರಸ್ತಾಪಕ್ಕೆ ಸಿದ್ಧತೆ

ಕಾಪು ತಾಲೂಕಿನ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ನಡೆಯುತ್ತಿರುವ ಐದನೇ ವರ್ಷದ ಉಚ್ಚಿಲ ದಸರಾ ಮಹೋತ್ಸವಕ್ಕೆ ಲಲಿತ ಪಂಚಮಿಯಂದು ಮುಖ್ಯಮಂತ್ರಿ…

1 hour ago

ಪುತ್ತೂರು: ನವೆಂಬರ್ 8ರಂದು ಅಶೋಕ ಜನಮನ: 70 ಸಾವಿರ ಮಂದಿಗೆ ದೋಸೆ ವ್ಯವಸ್ಥೆ

ಶಾಸಕ ಅಶೋಕ್ ಕುಮಾರ್ ರೈ ಅವರ ಮಹತ್ವಾಕಾಂಕ್ಷೆಯ ‘ಅಶೋಕ ಜನಮನ’ ಕಾರ್ಯಕ್ರಮಕ್ಕೆ ಸಿದ್ಧತೆಗಳು ಆರಂಭಗೊಂಡಿವೆ. ರೈ ಎಸ್ಟೇಟ್ ಎಜ್ಯುಕೇಶನಲ್ ಆ್ಯಂಡ್…

1 hour ago