ಕರಾವಳಿ

ಉಡುಪಿ: 432 ದಿನಗಳ ಹೋರಾಟಕ್ಕೆ ಜಯದ ಭರವಸೆ: ಬೈಂದೂರು ರೈತರ ಬೇಡಿಕೆಗೆ ಸರ್ಕಾರ ಸ್ಪಂದನೆ

ಬೈಂದೂರು ಪಟ್ಟಣ ಪಂಚಾಯತ್ ವ್ಯಾಪ್ತಿಯಿಂದ ಗ್ರಾಮೀಣ ಪ್ರದೇಶಗಳನ್ನು ಕೈಬಿಡಬೇಕೆಂದು ಆಗ್ರಹಿಸಿ ರೈತ ಮುಖಂಡ ದೀಪಕ್ ಕುಮಾರ್ ಶೆಟ್ಟಿ ನೇತೃತ್ವದಲ್ಲಿ ನಡೆದ 432 ದಿನಗಳ ಸುದೀರ್ಘ ಹೋರಾಟಕ್ಕೆ ಕೊನೆಗೂ ಸರ್ಕಾರ ಸ್ಪಂದಿಸಿದೆ. ಪೌರಾಡಳಿತ ಸಚಿವ ಎಚ್.ಸಿ. ಬಾಲಕೃಷ್ಣ ಅವರು 20 ವಾರ್ಡ್‌ಗಳ ಪೈಕಿ ಐದು ವಾರ್ಡ್‌ಗಳನ್ನು ಕೈಬಿಟ್ಟು ನೂತನ ಪಟ್ಟಣ ಪಂಚಾಯತ್ ರಚಿಸುವುದಾಗಿ ಘೋಷಿಸಿದ್ದಾರೆ.

ಬೈಂದೂರು ಪಟ್ಟಣ ಪಂಚಾಯತ್ ವ್ಯಾಪ್ತಿಗೆ ಗ್ರಾಮೀಣ ಪ್ರದೇಶಗಳನ್ನು ಅವೈಜ್ಞಾನಿಕವಾಗಿ ಸೇರ್ಪಡೆಗೊಳಿಸಿರುವುದರಿಂದ ರೈತರಿಗೆ ತೊಂದರೆಯಾಗುತ್ತಿದೆ ಎಂದು ಆರೋಪಿಸಿ ಹೋರಾಟಗಾರರು ಕಳೆದ 432 ದಿನಗಳಿಂದ ಧರಣಿ ನಡೆಸುತ್ತಿದ್ದರು. ಗ್ರಾಮೀಣ ಭಾಗಗಳನ್ನು ಪಟ್ಟಣ ಪಂಚಾಯತ್ ವ್ಯಾಪ್ತಿಯಿಂದ ಕೈಬಿಡಬೇಕೆಂಬುದು ಅವರ ಪ್ರಮುಖ ಬೇಡಿಕೆಯಾಗಿತ್ತು.

ರೈತರ ಹೋರಾಟಕ್ಕೆ ಸ್ಪಂದಿಸಿದ ರಾಜ್ಯ ಸರ್ಕಾರದ ಪರವಾಗಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನಿರ್ದೇಶನದಂತೆ ಬೈಂದೂರಿಗೆ ಆಗಮಿಸಿದ ಸಚಿವ ಎಚ್.ಸಿ. ಬಾಲಕೃಷ್ಣ, ತಾಲೂಕು ಆಡಳಿತ ಸೌಧದ ಎದುರು ಧರಣಿ ನಡೆಸುತ್ತಿದ್ದ ರೈತರೊಂದಿಗೆ ಮಾತುಕತೆ ನಡೆಸಿದರು. ರೈತರ ಬೇಡಿಕೆ ನ್ಯಾಯಯುತವಾಗಿದ್ದು, ಪಟ್ಟಣ ಪಂಚಾಯತ್ ರಚನೆಯಲ್ಲಿನ ಲೋಪಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಭರವಸೆ ನೀಡಿದರು.

ಇದು ಕೇವಲ ರೈತರನ್ನು ಸಮಾಧಾನಪಡಿಸಲು ನೀಡುತ್ತಿರುವ ಭರವಸೆಯಲ್ಲ, ಮುಖ್ಯಮಂತ್ರಿಗಳ ಪರವಾಗಿ ಮಾಡುತ್ತಿರುವ ಅಧಿಕೃತ ಘೋಷಣೆ ಎಂದು ಸ್ಪಷ್ಟಪಡಿಸಿದ ಸಚಿವರು, ಆದೇಶ ಹೊರಡಿಸಲು ಒಂದೆರಡು ದಿನಗಳು ಬೇಕಾಗಬಹುದು ಹಾಗೂ ಸಂಪೂರ್ಣ ಅನುಷ್ಠಾನಕ್ಕೆ ಒಂದರಿಂದ ಎರಡು ತಿಂಗಳ ಕಾಲಾವಕಾಶ ಅಗತ್ಯವಿದೆ ಎಂದರು. ಭರವಸೆ ಈಡೇರಿಸಲು ಸಾಧ್ಯವಾಗದಿದ್ದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ರೈತರೊಂದಿಗೆ ನಿಲ್ಲುವುದಾಗಿಯೂ ತಿಳಿಸಿದರು.

ಒಂದು ವರ್ಷಕ್ಕೂ ಅಧಿಕ ಕಾಲ ನಡೆದ ಹೋರಾಟಕ್ಕೆ ಸರ್ಕಾರದ ಸ್ಪಂದನೆ ದೊರೆತಿರುವುದು ರೈತರಲ್ಲಿ ಆಶಾಭಾವನೆ ಮೂಡಿಸಿದೆ. ಆದರೆ, ಐದು ವಾರ್ಡ್‌ಗಳನ್ನು ಕೈಬಿಡುವ ಘೋಷಣೆ ಅಧಿಕೃತ ಆದೇಶವಾಗಿ ಜಾರಿಗೊಂಡು ಅನುಷ್ಠಾನಕ್ಕೆ ಬಂದಾಗಲೇ ಹೋರಾಟದ ನಿಜವಾದ ಜಯ ಸಿಕ್ಕಂತಾಗಲಿದೆ. ಇದೀಗ ರೈತರ ಗಮನ ಸರ್ಕಾರದ ಮುಂದಿನ ಕ್ರಮಗಳತ್ತ ನೆಟ್ಟಿದೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಮಂಗಳೂರು : ಕಳ್ಳತನ ಪ್ರಕರಣ ಒಂದೂವರೆ ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ…!

ಕಳ್ಳತನ ಪ್ರಕರಣವೊಂದರಲ್ಲಿ ಸುಮಾರು ಒಂದೂವರೆ ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕೇರಳದ ಮಲಪ್ಪುರಂ ನಿವಾಸಿ ರಾಮ್‌ಶೀದ್‌ನನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.…

1 hour ago

ಉಡುಪಿ: ಅ.17ರಿಂದ ಬ್ರಹ್ಮಾವರದಲ್ಲಿ ಕೃಷಿ ಮತ್ತು ತೋಟಗಾರಿಕೆ ಮೇಳ–2026

ಕೃಷಿ ಅಭಿವೃದ್ಧಿ, ಆಧುನಿಕ ತಂತ್ರಜ್ಞಾನಗಳ ಪರಿಚಯ ಹಾಗೂ ರೈತರು ಮತ್ತು ವಿಜ್ಞಾನಿಗಳ ನಡುವೆ ನೇರ ಸಂವಾದಕ್ಕೆ ಅವಕಾಶ ಕಲ್ಪಿಸುವ ಉದ್ದೇಶದಿಂದ…

1 hour ago

ಪುತ್ತೂರು: ಸಂಟ್ಯಾರ್ ಬಳಿ ಭೀಕರ ಅಪಘಾತ: ಕಾರಿಗೆ ಡಿಕ್ಕಿಯಾಗಿ ರಸ್ತೆಗೆ ಮಗುಚಿಬಿದ್ದ ಲಾರಿ

ರಾಷ್ಟ್ರೀಯ ಹೆದ್ದಾರಿ 275ರ ಸಂಟ್ಯಾರ್ ಬಳಿ ಇಂದು ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದೆ. ಅತಿವೇಗ ಹಾಗೂ…

1 hour ago

ಬಂಟ್ವಾಳ: 2 ವರ್ಷ 9 ತಿಂಗಳ ಪುಟಾಣಿ ಪ್ರದ್ಯಾಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಎಳೆಯ ವಯಸ್ಸಿನಲ್ಲೇ ಅಪರೂಪದ ಪ್ರತಿಭೆ ಪ್ರದರ್ಶಿಸಿರುವ ದಕ್ಷಿಣ ಕನ್ನಡ ಜಿಲ್ಲೆಯ ಪ್ರದ್ಯಾ ವೈ. ಕುಲಾಲ್ ಅವರು ಇಂಡಿಯಾ ಬುಕ್ ಆಫ್…

1 hour ago

ಉಡುಪಿ: ಉಚ್ಚಿಲ ದಸರಾ ಸಂಭ್ರಮಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಆಗಮನ: ಮೀನುಗಾರರ ಸಮಸ್ಯೆ ಪ್ರಸ್ತಾಪಕ್ಕೆ ಸಿದ್ಧತೆ

ಕಾಪು ತಾಲೂಕಿನ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ನಡೆಯುತ್ತಿರುವ ಐದನೇ ವರ್ಷದ ಉಚ್ಚಿಲ ದಸರಾ ಮಹೋತ್ಸವಕ್ಕೆ ಲಲಿತ ಪಂಚಮಿಯಂದು ಮುಖ್ಯಮಂತ್ರಿ…

1 hour ago

ಪುತ್ತೂರು: ನವೆಂಬರ್ 8ರಂದು ಅಶೋಕ ಜನಮನ: 70 ಸಾವಿರ ಮಂದಿಗೆ ದೋಸೆ ವ್ಯವಸ್ಥೆ

ಶಾಸಕ ಅಶೋಕ್ ಕುಮಾರ್ ರೈ ಅವರ ಮಹತ್ವಾಕಾಂಕ್ಷೆಯ ‘ಅಶೋಕ ಜನಮನ’ ಕಾರ್ಯಕ್ರಮಕ್ಕೆ ಸಿದ್ಧತೆಗಳು ಆರಂಭಗೊಂಡಿವೆ. ರೈ ಎಸ್ಟೇಟ್ ಎಜ್ಯುಕೇಶನಲ್ ಆ್ಯಂಡ್…

1 hour ago