ಕರಾವಳಿ

ಪುತ್ತೂರು: ನವೆಂಬರ್ 8ರಂದು ಅಶೋಕ ಜನಮನ: 70 ಸಾವಿರ ಮಂದಿಗೆ ದೋಸೆ ವ್ಯವಸ್ಥೆ

ಶಾಸಕ ಅಶೋಕ್ ಕುಮಾರ್ ರೈ ಅವರ ಮಹತ್ವಾಕಾಂಕ್ಷೆಯ ‘ಅಶೋಕ ಜನಮನ’ ಕಾರ್ಯಕ್ರಮಕ್ಕೆ ಸಿದ್ಧತೆಗಳು ಆರಂಭಗೊಂಡಿವೆ. ರೈ ಎಸ್ಟೇಟ್ ಎಜ್ಯುಕೇಶನಲ್ ಆ್ಯಂಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ದೀಪಾವಳಿ ಸಂಭ್ರಮದ ಅಂಗವಾಗಿ ನವೆಂಬರ್ 8ರಂದು ಪುತ್ತೂರಿನ ಕೊಂಬೆಟ್ಟು ಕ್ರೀಡಾಂಗಣದಲ್ಲಿ ವಸ್ತ್ರ ವಿತರಣೆ ಹಾಗೂ ಫಲಾನುಭವಿಗಳ ವಾರ್ಷಿಕ ಸಮಾವೇಶ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಸೋಮವಾರ ಕ್ರೀಡಾಂಗಣದಲ್ಲಿ ಚಪ್ಪರ ಮುಹೂರ್ತ ನೆರವೇರಿತು.

ಚಪ್ಪರ ಮುಹೂರ್ತದ ಬಳಿಕ ಮಾತನಾಡಿದ ಶಾಸಕ ಅಶೋಕ್ ಕುಮಾರ್ ರೈ, ಇದು 14ನೇ ವರ್ಷದ ಅಶೋಕ ಜನಮನ ಕಾರ್ಯಕ್ರಮವಾಗಿದೆ. ಕಳೆದ ವರ್ಷ ಮಳೆಯಿಂದಾಗಿ ತೊಂದರೆಯಾಗಿದ್ದು, ಈ ಬಾರಿ ಕ್ರೀಡಾಂಗಣದಲ್ಲಿ ನೀರು ನಿಲ್ಲದಂತೆ ವ್ಯವಸ್ಥೆ ಮಾಡಿ ಶೀಟ್ ಅಳವಡಿಸಲಾಗುವುದು ಎಂದರು.

ಬೆಳಗ್ಗೆ 9.30ಕ್ಕೆ ವಸ್ತ್ರ ವಿತರಣೆ ಆರಂಭವಾಗಲಿದ್ದು, ಮೂರು ಪ್ರತ್ಯೇಕ ಕೌಂಟರ್‌ಗಳ ಮೂಲಕ ಬಟ್ಟಲು-ತಟ್ಟೆ, ಮಹಿಳೆಯರಿಗೆ ಗುಣಮಟ್ಟದ ಸೀರೆ ಹಾಗೂ ಬೆಡ್‌ಶೀಟ್‌ಗಳನ್ನು ವಿತರಿಸಲಾಗುವುದು. ಪುತ್ತೂರು ಕ್ಷೇತ್ರದ ಪ್ರತಿಯೊಂದು ಮನೆಗೂ ಆಮಂತ್ರಣ ತಲುಪಿಸುವ ವ್ಯವಸ್ಥೆ ಮಾಡಲಾಗಿದ್ದು, ಯಾವುದೇ ಗೊಂದಲ ಉಂಟಾಗದಂತೆ ಸಿದ್ಧತೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.

ಕಾರ್ಯಕ್ರಮಕ್ಕೆ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಭಾಗಗಳಿಂದ ಜನರು ಆಗಮಿಸುವ ನಿರೀಕ್ಷೆಯಿದೆ. ಸುಮಾರು 70 ಸಾವಿರ ಮಂದಿಗೆ ದೋಸೆ ವ್ಯವಸ್ಥೆ ಮಾಡಲಾಗಿದ್ದು, ಬೆಳಗ್ಗಿನಿಂದ ಉಪಾಹಾರ, ಮಧ್ಯಾಹ್ನ ಭೋಜನ ಹಾಗೂ ಸಂಜೆ 3 ಗಂಟೆಯ ಬಳಿಕ ದೋಸೆ ಮೇಳ ಆಯೋಜಿಸಲಾಗುವುದು. ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳು ಹಾಗೂ ರಾಜ್ಯದ ವಿವಿಧ ಸಚಿವರು, ಗಣ್ಯರನ್ನು ಆಹ್ವಾನಿಸುವ ಉದ್ದೇಶವಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.

ಕಾರ್ಯಕ್ರಮದಲ್ಲಿ ಟ್ರಸ್ಟ್ ಕಾರ್ಯಾಧ್ಯಕ್ಷ ಸುದೇಶ್ ಶೆಟ್ಟಿ, ಸುಮಾ ಎ. ರೈ, ಪುತ್ತೂರು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಮಂಗಳೂರು : ಕಳ್ಳತನ ಪ್ರಕರಣ ಒಂದೂವರೆ ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ…!

ಕಳ್ಳತನ ಪ್ರಕರಣವೊಂದರಲ್ಲಿ ಸುಮಾರು ಒಂದೂವರೆ ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕೇರಳದ ಮಲಪ್ಪುರಂ ನಿವಾಸಿ ರಾಮ್‌ಶೀದ್‌ನನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.…

1 hour ago

ಉಡುಪಿ: ಅ.17ರಿಂದ ಬ್ರಹ್ಮಾವರದಲ್ಲಿ ಕೃಷಿ ಮತ್ತು ತೋಟಗಾರಿಕೆ ಮೇಳ–2026

ಕೃಷಿ ಅಭಿವೃದ್ಧಿ, ಆಧುನಿಕ ತಂತ್ರಜ್ಞಾನಗಳ ಪರಿಚಯ ಹಾಗೂ ರೈತರು ಮತ್ತು ವಿಜ್ಞಾನಿಗಳ ನಡುವೆ ನೇರ ಸಂವಾದಕ್ಕೆ ಅವಕಾಶ ಕಲ್ಪಿಸುವ ಉದ್ದೇಶದಿಂದ…

1 hour ago

ಪುತ್ತೂರು: ಸಂಟ್ಯಾರ್ ಬಳಿ ಭೀಕರ ಅಪಘಾತ: ಕಾರಿಗೆ ಡಿಕ್ಕಿಯಾಗಿ ರಸ್ತೆಗೆ ಮಗುಚಿಬಿದ್ದ ಲಾರಿ

ರಾಷ್ಟ್ರೀಯ ಹೆದ್ದಾರಿ 275ರ ಸಂಟ್ಯಾರ್ ಬಳಿ ಇಂದು ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದೆ. ಅತಿವೇಗ ಹಾಗೂ…

1 hour ago

ಬಂಟ್ವಾಳ: 2 ವರ್ಷ 9 ತಿಂಗಳ ಪುಟಾಣಿ ಪ್ರದ್ಯಾಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಎಳೆಯ ವಯಸ್ಸಿನಲ್ಲೇ ಅಪರೂಪದ ಪ್ರತಿಭೆ ಪ್ರದರ್ಶಿಸಿರುವ ದಕ್ಷಿಣ ಕನ್ನಡ ಜಿಲ್ಲೆಯ ಪ್ರದ್ಯಾ ವೈ. ಕುಲಾಲ್ ಅವರು ಇಂಡಿಯಾ ಬುಕ್ ಆಫ್…

1 hour ago

ಉಡುಪಿ: ಉಚ್ಚಿಲ ದಸರಾ ಸಂಭ್ರಮಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಆಗಮನ: ಮೀನುಗಾರರ ಸಮಸ್ಯೆ ಪ್ರಸ್ತಾಪಕ್ಕೆ ಸಿದ್ಧತೆ

ಕಾಪು ತಾಲೂಕಿನ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ನಡೆಯುತ್ತಿರುವ ಐದನೇ ವರ್ಷದ ಉಚ್ಚಿಲ ದಸರಾ ಮಹೋತ್ಸವಕ್ಕೆ ಲಲಿತ ಪಂಚಮಿಯಂದು ಮುಖ್ಯಮಂತ್ರಿ…

1 hour ago

ಉಡುಪಿ: 432 ದಿನಗಳ ಹೋರಾಟಕ್ಕೆ ಜಯದ ಭರವಸೆ: ಬೈಂದೂರು ರೈತರ ಬೇಡಿಕೆಗೆ ಸರ್ಕಾರ ಸ್ಪಂದನೆ

ಬೈಂದೂರು ಪಟ್ಟಣ ಪಂಚಾಯತ್ ವ್ಯಾಪ್ತಿಯಿಂದ ಗ್ರಾಮೀಣ ಪ್ರದೇಶಗಳನ್ನು ಕೈಬಿಡಬೇಕೆಂದು ಆಗ್ರಹಿಸಿ ರೈತ ಮುಖಂಡ ದೀಪಕ್ ಕುಮಾರ್ ಶೆಟ್ಟಿ ನೇತೃತ್ವದಲ್ಲಿ ನಡೆದ…

2 hours ago