ಕರಾವಳಿ

ಉಡುಪಿ: ಉಚ್ಚಿಲ ದಸರಾ ಸಂಭ್ರಮಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಆಗಮನ: ಮೀನುಗಾರರ ಸಮಸ್ಯೆ ಪ್ರಸ್ತಾಪಕ್ಕೆ ಸಿದ್ಧತೆ

ಕಾಪು ತಾಲೂಕಿನ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ನಡೆಯುತ್ತಿರುವ ಐದನೇ ವರ್ಷದ ಉಚ್ಚಿಲ ದಸರಾ ಮಹೋತ್ಸವಕ್ಕೆ ಲಲಿತ ಪಂಚಮಿಯಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಮಿಸಲಿದ್ದು, ಉತ್ಸವದ ಸಂಭ್ರಮ ಮತ್ತಷ್ಟು ಹೆಚ್ಚಾಗಿದೆ. ಮುಖ್ಯಮಂತ್ರಿಗಳ ಭೇಟಿಯ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಅಗತ್ಯ ಸಿದ್ಧತೆಗಳನ್ನು ಕೈಗೊಂಡಿದೆ.

ಮೊಗವೀರ ಮುಖಂಡ ಹಾಗೂ ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಗೌರವ ಸಲಹೆಗಾರ ನಾಡೋಜ ಡಾ. ಜಿ. ಶಂಕರ್ ನೇತೃತ್ವದಲ್ಲಿ ಐದು ವರ್ಷಗಳ ಹಿಂದೆ ಆರಂಭಗೊಂಡ ಉಚ್ಚಿಲ ದಸರಾ, ಕರಾವಳಿಯ ಪ್ರಮುಖ ನವರಾತ್ರಿ ಉತ್ಸವಗಳಲ್ಲಿ ಒಂದಾಗಿ ಗುರುತಿಸಿಕೊಂಡಿದೆ. ಈ ಬಾರಿ ಒಂಬತ್ತು ದಿನಗಳ ಕಾಲ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನವರಾತ್ರಿ ವೈಭವ ನಡೆಯುತ್ತಿದೆ.

ಇಂದು ಸಂಜೆ 4.40ಕ್ಕೆ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಭೇಟಿ ನೀಡಲಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಹಿಳಾ ದಸರಾ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಬಳಿಕ ದೇವಿಯ ದರ್ಶನ ಪಡೆದು, ಮೊಗವೀರ ಕುಲಗುರು ಮಾಧವ ಮಂಗಲ ಅವರ ಕಂಚಿನ ಪುತ್ಥಳಿಗೆ ಪುಷ್ಪಾರ್ಚನೆ ಸಲ್ಲಿಸಲಿದ್ದಾರೆ. ನಂತರ ವೇದಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಸನ್ಮಾನ ಸ್ವೀಕರಿಸಲಿದ್ದಾರೆ.

ಈ ಸಂದರ್ಭದಲ್ಲಿ ಮೀನುಗಾರರ ವಿವಿಧ ಸಮಸ್ಯೆಗಳು ಹಾಗೂ ಬೇಡಿಕೆಗಳನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರಲು ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ ಸಿದ್ಧತೆ ನಡೆಸಿದೆ. ತುಳು ಭಾಷೆಗೆ ರಾಜ್ಯದ ಎರಡನೇ ಹೆಚ್ಚುವರಿ ಆಡಳಿತ ಭಾಷೆಯ ಸ್ಥಾನಮಾನ ಕಲ್ಪಿಸುವಲ್ಲಿ ಮಹತ್ವದ ಪಾತ್ರ ವಹಿಸಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳಿಗೆ ಅಭಿನಂದನಾ ಸಮಾರಂಭವೂ ನಡೆಯಲಿದೆ ಎಂದು ಸಂಘದ ಗೌರವ ಸಲಹೆಗಾರ ನಾಡೋಜ ಡಾ. ಜಿ. ಶಂಕರ್ ತಿಳಿಸಿದ್ದಾರೆ.

ಉಚ್ಚಿಲ ದಸರಾ ಪ್ರಯುಕ್ತ ಒಂದೇ ಸೂರಿನಡಿ ನವದುರ್ಗೆಯರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ದೇವಸ್ಥಾನ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಾಡಿರುವ ವಿದ್ಯುದ್ದೀಪಾಲಂಕಾರ ಭಕ್ತರ ಗಮನ ಸೆಳೆಯುತ್ತಿದೆ. ಒಂಬತ್ತು ದಿನಗಳ ಕಾಲ ದೇವಿಗೆ ವಿಶೇಷ ಅಲಂಕಾರ, ಪೂಜೆ, ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಸಂಗೀತ ಸಂಭ್ರಮ ನಡೆಯುತ್ತಿದ್ದು, ಸಾವಿರಾರು ಭಕ್ತರು ಕ್ಷೇತ್ರಕ್ಕೆ ಭೇಟಿ ನೀಡುತ್ತಿದ್ದಾರೆ. ಮುಖ್ಯಮಂತ್ರಿಗಳ ಆಗಮನದೊಂದಿಗೆ ಈ ಬಾರಿಯ ಉಚ್ಚಿಲ ದಸರಾ ಸಂಭ್ರಮ ಮತ್ತಷ್ಟು ಕಳೆಗಟ್ಟಲಿದೆ ಎಂದು ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್ ತಿಳಿಸಿದ್ದಾರೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಮಂಗಳೂರು : ಕಳ್ಳತನ ಪ್ರಕರಣ ಒಂದೂವರೆ ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ…!

ಕಳ್ಳತನ ಪ್ರಕರಣವೊಂದರಲ್ಲಿ ಸುಮಾರು ಒಂದೂವರೆ ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕೇರಳದ ಮಲಪ್ಪುರಂ ನಿವಾಸಿ ರಾಮ್‌ಶೀದ್‌ನನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.…

1 hour ago

ಉಡುಪಿ: ಅ.17ರಿಂದ ಬ್ರಹ್ಮಾವರದಲ್ಲಿ ಕೃಷಿ ಮತ್ತು ತೋಟಗಾರಿಕೆ ಮೇಳ–2026

ಕೃಷಿ ಅಭಿವೃದ್ಧಿ, ಆಧುನಿಕ ತಂತ್ರಜ್ಞಾನಗಳ ಪರಿಚಯ ಹಾಗೂ ರೈತರು ಮತ್ತು ವಿಜ್ಞಾನಿಗಳ ನಡುವೆ ನೇರ ಸಂವಾದಕ್ಕೆ ಅವಕಾಶ ಕಲ್ಪಿಸುವ ಉದ್ದೇಶದಿಂದ…

1 hour ago

ಪುತ್ತೂರು: ಸಂಟ್ಯಾರ್ ಬಳಿ ಭೀಕರ ಅಪಘಾತ: ಕಾರಿಗೆ ಡಿಕ್ಕಿಯಾಗಿ ರಸ್ತೆಗೆ ಮಗುಚಿಬಿದ್ದ ಲಾರಿ

ರಾಷ್ಟ್ರೀಯ ಹೆದ್ದಾರಿ 275ರ ಸಂಟ್ಯಾರ್ ಬಳಿ ಇಂದು ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದೆ. ಅತಿವೇಗ ಹಾಗೂ…

1 hour ago

ಬಂಟ್ವಾಳ: 2 ವರ್ಷ 9 ತಿಂಗಳ ಪುಟಾಣಿ ಪ್ರದ್ಯಾಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಎಳೆಯ ವಯಸ್ಸಿನಲ್ಲೇ ಅಪರೂಪದ ಪ್ರತಿಭೆ ಪ್ರದರ್ಶಿಸಿರುವ ದಕ್ಷಿಣ ಕನ್ನಡ ಜಿಲ್ಲೆಯ ಪ್ರದ್ಯಾ ವೈ. ಕುಲಾಲ್ ಅವರು ಇಂಡಿಯಾ ಬುಕ್ ಆಫ್…

1 hour ago

ಪುತ್ತೂರು: ನವೆಂಬರ್ 8ರಂದು ಅಶೋಕ ಜನಮನ: 70 ಸಾವಿರ ಮಂದಿಗೆ ದೋಸೆ ವ್ಯವಸ್ಥೆ

ಶಾಸಕ ಅಶೋಕ್ ಕುಮಾರ್ ರೈ ಅವರ ಮಹತ್ವಾಕಾಂಕ್ಷೆಯ ‘ಅಶೋಕ ಜನಮನ’ ಕಾರ್ಯಕ್ರಮಕ್ಕೆ ಸಿದ್ಧತೆಗಳು ಆರಂಭಗೊಂಡಿವೆ. ರೈ ಎಸ್ಟೇಟ್ ಎಜ್ಯುಕೇಶನಲ್ ಆ್ಯಂಡ್…

1 hour ago

ಉಡುಪಿ: 432 ದಿನಗಳ ಹೋರಾಟಕ್ಕೆ ಜಯದ ಭರವಸೆ: ಬೈಂದೂರು ರೈತರ ಬೇಡಿಕೆಗೆ ಸರ್ಕಾರ ಸ್ಪಂದನೆ

ಬೈಂದೂರು ಪಟ್ಟಣ ಪಂಚಾಯತ್ ವ್ಯಾಪ್ತಿಯಿಂದ ಗ್ರಾಮೀಣ ಪ್ರದೇಶಗಳನ್ನು ಕೈಬಿಡಬೇಕೆಂದು ಆಗ್ರಹಿಸಿ ರೈತ ಮುಖಂಡ ದೀಪಕ್ ಕುಮಾರ್ ಶೆಟ್ಟಿ ನೇತೃತ್ವದಲ್ಲಿ ನಡೆದ…

2 hours ago