ಕರಾವಳಿ

ಉಡುಪಿ: ಅ.17ರಿಂದ ಬ್ರಹ್ಮಾವರದಲ್ಲಿ ಕೃಷಿ ಮತ್ತು ತೋಟಗಾರಿಕೆ ಮೇಳ–2026

ಕೃಷಿ ಅಭಿವೃದ್ಧಿ, ಆಧುನಿಕ ತಂತ್ರಜ್ಞಾನಗಳ ಪರಿಚಯ ಹಾಗೂ ರೈತರು ಮತ್ತು ವಿಜ್ಞಾನಿಗಳ ನಡುವೆ ನೇರ ಸಂವಾದಕ್ಕೆ ಅವಕಾಶ ಕಲ್ಪಿಸುವ ಉದ್ದೇಶದಿಂದ ಅ.17 ಮತ್ತು 18ರಂದು ಬ್ರಹ್ಮಾವರದ ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರದ ಆವರಣದಲ್ಲಿ ಕೃಷಿ ಮತ್ತು ತೋಟಗಾರಿಕೆ ಮೇಳ–2026 ಆಯೋಜಿಸಲಾಗಿದೆ ಎಂದು ಸಹ ಸಂಶೋಧನಾ ನಿರ್ದೇಶಕ ಎಚ್. ರೇವಣ್ಣ ರೇವಣ್ಣವರ ತಿಳಿಸಿದ್ದಾರೆ.

ಉಡುಪಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿ ಮೇಳ ನಡೆಯಲಿದೆ. ಬರ ಪರಿಸ್ಥಿತಿಯಲ್ಲಿ ಕೃಷಿ ನಿರ್ವಹಣೆ, ಭವಿಷ್ಯದ ತೋಟಗಾರಿಕಾ ಬೆಳೆಗಳು, ಅಡಿಕೆ ಬೆಳೆಯ ಕೀಟ ಮತ್ತು ರೋಗಗಳ ಸಮಗ್ರ ನಿರ್ವಹಣೆ, ಲಾಭದಾಯಕ ಹೈನುಗಾರಿಕೆ ಹಾಗೂ ಮೀನುಗಾರಿಕೆಗೆ ಮೇಳದಲ್ಲಿ ವಿಶೇಷ ಆದ್ಯತೆ ನೀಡಲಾಗಿದೆ ಎಂದರು.

ಮೇಳದಲ್ಲಿ ಕೃಷಿ ಮತ್ತು ತೋಟಗಾರಿಕೆಗೆ ಸಂಬಂಧಿಸಿದ ತಂತ್ರಜ್ಞಾನಗಳು ಹಾಗೂ ಮಾಹಿತಿ ರೈತರಿಗೆ ಲಭ್ಯವಾಗಲಿದ್ದು, ಕೃಷಿ ಕ್ಷೇತ್ರದ ಹೊಸ ಬೆಳವಣಿಗೆಗಳ ಕುರಿತು ಅರಿವು ಮೂಡಿಸುವ ಪ್ರಯತ್ನ ನಡೆಯಲಿದೆ.

ಜಿಲ್ಲಾ ಉಸ್ತುವಾರಿ ಸಚಿವ ರಿಜ್ವಾನ್ ಅರ್ಷದ್ ಮೇಳವನ್ನು ಉದ್ಘಾಟಿಸಲಿದ್ದು, ಸಂಸದ ಕೋಟ ಶ್ರೀನಿವಾಸ ಪೂಜಾರಿ ಪ್ರದರ್ಶನ ಮಳಿಗೆಗಳನ್ನು ಉದ್ಘಾಟಿಸಲಿದ್ದಾರೆ. ಶಾಸಕ ಯಶ್‌ಪಾಲ್ ಸುವರ್ಣ ಅಧ್ಯಕ್ಷತೆ ವಹಿಸಲಿದ್ದು, ವಿಶ್ವವಿದ್ಯಾಲಯದ ಕುಲಪತಿ ಎಂ.ವಿ. ಧನಂಜಯ ಪ್ರಾಸ್ತಾವಿಕವಾಗಿ ಮಾತನಾಡಲಿದ್ದಾರೆ ಎಂದು ಅವರು ತಿಳಿಸಿದರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಮಂಗಳೂರು : ಕಳ್ಳತನ ಪ್ರಕರಣ ಒಂದೂವರೆ ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ…!

ಕಳ್ಳತನ ಪ್ರಕರಣವೊಂದರಲ್ಲಿ ಸುಮಾರು ಒಂದೂವರೆ ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕೇರಳದ ಮಲಪ್ಪುರಂ ನಿವಾಸಿ ರಾಮ್‌ಶೀದ್‌ನನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.…

1 hour ago

ಪುತ್ತೂರು: ಸಂಟ್ಯಾರ್ ಬಳಿ ಭೀಕರ ಅಪಘಾತ: ಕಾರಿಗೆ ಡಿಕ್ಕಿಯಾಗಿ ರಸ್ತೆಗೆ ಮಗುಚಿಬಿದ್ದ ಲಾರಿ

ರಾಷ್ಟ್ರೀಯ ಹೆದ್ದಾರಿ 275ರ ಸಂಟ್ಯಾರ್ ಬಳಿ ಇಂದು ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದೆ. ಅತಿವೇಗ ಹಾಗೂ…

2 hours ago

ಬಂಟ್ವಾಳ: 2 ವರ್ಷ 9 ತಿಂಗಳ ಪುಟಾಣಿ ಪ್ರದ್ಯಾಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಎಳೆಯ ವಯಸ್ಸಿನಲ್ಲೇ ಅಪರೂಪದ ಪ್ರತಿಭೆ ಪ್ರದರ್ಶಿಸಿರುವ ದಕ್ಷಿಣ ಕನ್ನಡ ಜಿಲ್ಲೆಯ ಪ್ರದ್ಯಾ ವೈ. ಕುಲಾಲ್ ಅವರು ಇಂಡಿಯಾ ಬುಕ್ ಆಫ್…

2 hours ago

ಉಡುಪಿ: ಉಚ್ಚಿಲ ದಸರಾ ಸಂಭ್ರಮಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಆಗಮನ: ಮೀನುಗಾರರ ಸಮಸ್ಯೆ ಪ್ರಸ್ತಾಪಕ್ಕೆ ಸಿದ್ಧತೆ

ಕಾಪು ತಾಲೂಕಿನ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ನಡೆಯುತ್ತಿರುವ ಐದನೇ ವರ್ಷದ ಉಚ್ಚಿಲ ದಸರಾ ಮಹೋತ್ಸವಕ್ಕೆ ಲಲಿತ ಪಂಚಮಿಯಂದು ಮುಖ್ಯಮಂತ್ರಿ…

2 hours ago

ಪುತ್ತೂರು: ನವೆಂಬರ್ 8ರಂದು ಅಶೋಕ ಜನಮನ: 70 ಸಾವಿರ ಮಂದಿಗೆ ದೋಸೆ ವ್ಯವಸ್ಥೆ

ಶಾಸಕ ಅಶೋಕ್ ಕುಮಾರ್ ರೈ ಅವರ ಮಹತ್ವಾಕಾಂಕ್ಷೆಯ ‘ಅಶೋಕ ಜನಮನ’ ಕಾರ್ಯಕ್ರಮಕ್ಕೆ ಸಿದ್ಧತೆಗಳು ಆರಂಭಗೊಂಡಿವೆ. ರೈ ಎಸ್ಟೇಟ್ ಎಜ್ಯುಕೇಶನಲ್ ಆ್ಯಂಡ್…

2 hours ago

ಉಡುಪಿ: 432 ದಿನಗಳ ಹೋರಾಟಕ್ಕೆ ಜಯದ ಭರವಸೆ: ಬೈಂದೂರು ರೈತರ ಬೇಡಿಕೆಗೆ ಸರ್ಕಾರ ಸ್ಪಂದನೆ

ಬೈಂದೂರು ಪಟ್ಟಣ ಪಂಚಾಯತ್ ವ್ಯಾಪ್ತಿಯಿಂದ ಗ್ರಾಮೀಣ ಪ್ರದೇಶಗಳನ್ನು ಕೈಬಿಡಬೇಕೆಂದು ಆಗ್ರಹಿಸಿ ರೈತ ಮುಖಂಡ ದೀಪಕ್ ಕುಮಾರ್ ಶೆಟ್ಟಿ ನೇತೃತ್ವದಲ್ಲಿ ನಡೆದ…

2 hours ago