ಕರಾವಳಿ

ಮಂಗಳೂರು, ಅ.16: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಒತ್ತಾಯ: ಅ.16ರಂದು ಸಮಾಲೋಚನಾ ಸಭೆ

ಕರಾವಳಿ ಮತ್ತು ಮಲೆನಾಡು ಭಾಗದ ಜನರಿಗೆ ಸುಲಭವಾಗಿ ಹಾಗೂ ಕಡಿಮೆ ವೆಚ್ಚದಲ್ಲಿ ನ್ಯಾಯ ದೊರೆಯುವ ನಿಟ್ಟಿನಲ್ಲಿ ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪಿಸುವ ಕುರಿತು ಅ.16ರಂದು ಸಮಾಲೋಚನಾ ಸಭೆ ಆಯೋಜಿಸಲಾಗಿದೆ ಎಂದು ಹಿರಿಯ ವಕೀಲ ಬಿ. ಇಬ್ರಾಹಿಂ ತಿಳಿಸಿದ್ದಾರೆ.

ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಕ್ಷಿಣ ಕನ್ನಡ ಯುನೈಟೆಡ್ ಲೀಗಲ್ ರಿಸರ್ಚ್ ಅಂಡ್ ಜಸ್ಟಿಸ್ ಟ್ರಸ್ಟ್ ವತಿಯಿಂದ ಅ.16ರಂದು ಸಂಜೆ 4 ಗಂಟೆಗೆ ನಗರದ ಸ್ಟೇಟ್ ಬ್ಯಾಂಕ್‌ನಲ್ಲಿರುವ ಭಾರತೀಯ ರೆಡ್ ಕ್ರಾಸ್ ಕಟ್ಟಡದಲ್ಲಿ ಸಭೆ ನಡೆಯಲಿದೆ ಎಂದು ಮಾಹಿತಿ ನೀಡಿದರು.

ಕರಾವಳಿ ಮತ್ತು ಮಲೆನಾಡು ಭಾಗದ ಜನರು ನ್ಯಾಯಾಲಯದ ಕೆಲಸಗಳಿಗಾಗಿ ಬೆಂಗಳೂರಿಗೆ ತೆರಳಬೇಕಾದ ಪರಿಸ್ಥಿತಿಯಿದೆ. ಇದರಿಂದ ಪ್ರಯಾಣ, ಸಾರಿಗೆ ಮತ್ತು ವಸತಿ ಸೇರಿದಂತೆ ಹಲವು ಖರ್ಚುಗಳನ್ನು ಭರಿಸಬೇಕಾಗುತ್ತದೆ. ವಿಶೇಷವಾಗಿ ಬಡವರು ಹಾಗೂ ಆರ್ಥಿಕವಾಗಿ ಹಿಂದುಳಿದವರಿಗೆ ಇದು ಹೊರೆಯಾಗುತ್ತಿದೆ ಎಂದು ಅವರು ವಿವರಿಸಿದರು.

ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪಿಸುವ ಅಗತ್ಯತೆ, ಅದರ ಪ್ರಯೋಜನಗಳು ಹಾಗೂ ಈ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸಭೆಯಲ್ಲಿ ಚರ್ಚಿಸಲಾಗುವುದು ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಬಿ.ಎ. ಮೊಹಮ್ಮದ್ ಹನೀಫ್, ಸರ್ಫರಾಝ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಮಂಗಳೂರು: ಎಂಆರ್‌ಪಿಎಲ್ ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ: 2,000ಕ್ಕೂ ಅಧಿಕ ಕುಟುಂಬಗಳಿಗೆ ಅನುಕೂಲ

ಮಂಗಳೂರು ರಿಫೈನರಿ ಅಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್‌ (ಎಂಆರ್‌ಪಿಎಲ್)ನಲ್ಲಿ ಕಾರ್ಯನಿರ್ವಹಿಸುತ್ತಿರುವ ಗುತ್ತಿಗೆ ಕಾರ್ಮಿಕರು ಹಾಗೂ ಅವರ ಕುಟುಂಬಗಳಿಗೆ ₹5 ಲಕ್ಷದ ಆರೋಗ್ಯ…

1 hour ago

ಮಂಗಳೂರು, ಅ.16: ಸ್ಟಿಂಗ್ ಆಪರೇಷನ್ ಬಂಧನದ ಬಗ್ಗೆ ಮಾಹಿತಿ ಇಲ್ಲ: ಮಂಗಳೂರಲ್ಲಿ ಡಿಕೆಶಿ ಪ್ರತಿಕ್ರಿಯೆ

ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದ ಬಂಧನದ ಕುರಿತು ಪ್ರತಿಕ್ರಿಯಿಸಲು ನಿರಾಕರಿಸಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಈ ಬಗ್ಗೆ ತನಗೆ ಯಾವುದೇ…

1 hour ago

ಕಾರವಾರ: ಭಾರತೀಯ ನೌಕಾಪಡೆಗೆ ಬಲ: ಕಾರವಾರದಲ್ಲಿ ‘ಐಎನ್‌ಎಸ್ ಸಮರ್ಥಕ್’ ಲೋಕಾರ್ಪಣೆ

ಭಾರತೀಯ ನೌಕಾಪಡೆಯ ಕಾರ್ಯಾಚರಣಾ ಸಾಮರ್ಥ್ಯವನ್ನು ಹೆಚ್ಚಿಸುವ ಉದ್ದೇಶದಿಂದ ನಿರ್ಮಿಸಲಾಗಿರುವ ಬಹುಪಯೋಗಿ ನೌಕೆ ‘ಐಎನ್‌ಎಸ್ ಸಮರ್ಥಕ್’ ಕಾರವಾರ ನೌಕಾನೆಲೆಯಲ್ಲಿ ಲೋಕಾರ್ಪಣೆಗೊಂಡಿದೆ. ಕೇಂದ್ರ…

3 hours ago

ಮಂಗಳೂರು : ಕಳ್ಳತನ ಪ್ರಕರಣ ಒಂದೂವರೆ ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ…!

ಕಳ್ಳತನ ಪ್ರಕರಣವೊಂದರಲ್ಲಿ ಸುಮಾರು ಒಂದೂವರೆ ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕೇರಳದ ಮಲಪ್ಪುರಂ ನಿವಾಸಿ ರಾಮ್‌ಶೀದ್‌ನನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.…

20 hours ago

ಉಡುಪಿ: ಅ.17ರಿಂದ ಬ್ರಹ್ಮಾವರದಲ್ಲಿ ಕೃಷಿ ಮತ್ತು ತೋಟಗಾರಿಕೆ ಮೇಳ–2026

ಕೃಷಿ ಅಭಿವೃದ್ಧಿ, ಆಧುನಿಕ ತಂತ್ರಜ್ಞಾನಗಳ ಪರಿಚಯ ಹಾಗೂ ರೈತರು ಮತ್ತು ವಿಜ್ಞಾನಿಗಳ ನಡುವೆ ನೇರ ಸಂವಾದಕ್ಕೆ ಅವಕಾಶ ಕಲ್ಪಿಸುವ ಉದ್ದೇಶದಿಂದ…

21 hours ago

ಪುತ್ತೂರು: ಸಂಟ್ಯಾರ್ ಬಳಿ ಭೀಕರ ಅಪಘಾತ: ಕಾರಿಗೆ ಡಿಕ್ಕಿಯಾಗಿ ರಸ್ತೆಗೆ ಮಗುಚಿಬಿದ್ದ ಲಾರಿ

ರಾಷ್ಟ್ರೀಯ ಹೆದ್ದಾರಿ 275ರ ಸಂಟ್ಯಾರ್ ಬಳಿ ಇಂದು ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದೆ. ಅತಿವೇಗ ಹಾಗೂ…

21 hours ago