ಜನ ಮನದ ನಾಡಿ ಮಿಡಿತ

Advertisement

ನಂತೂರು – ಪಂಪ್ವೆಲ್ ಮಧ್ಯೆ ಇರುವ ಮಂಗಳ ಜ್ಯೋತಿ ಶಾಂತಿ ಕಿರಣ ಕಟ್ಟದ ಮುಂಭಾಗದ ಯೂ ಟರ್ನ್ ಮುಚ್ಚಿರುವುದನ್ನು ತೆರವುಗೊಳಿಸಲು ಶಾಸಕ ವೇದವ್ಯಾಸ್ ಕಾಮತ್ ಮನವಿ

ರಾಷ್ಟ್ರೀಯ ಹೆದ್ದಾರಿಯಲ್ಲಿ ನಂತೂರು – ಪಂಪ್ವೆಲ್ ಮಧ್ಯೆ ಇರುವ ಮಂಗಳ ಜ್ಯೋತಿ ಶಾಂತಿ ಕಿರಣ ಕಟ್ಟದ ಮುಂಭಾಗದ ಯೂ ಟರ್ನ್ ಮುಚ್ಚಿರುವುದನ್ನು ತೆರವುಗೊಳಿಸುವ ಕುರಿತು ಮಂಗಳೂರು ನಗರ ದಕ್ಷಿಣ ಶಾಸಕರಾದ ವೇದವ್ಯಾಸ್ ಕಾಮತ್ ಅವರು ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಕುಲದೀಪ್ ಜೈನ್ ಅವರೊಂದಿಗೆ ಸಭೆ ನಡೆಸಿ ಮನವಿ ನೀಡಿದರು.

ಪಂಪ್ವೆಲ್ ಭಾಗದಿಂದ ಮರೋಳಿ, ಅಳಪೆ, ಕುಲಶೇಖರ ಭಾಗಕ್ಕೆ ತೆರಳುವ ವಾಹನ ಸವಾರರು, ನಂತೂರು – ಪಂಪ್ವೆಲ್ ರಾಷ್ಟ್ರೀಯ ಹೆದ್ದಾರಿಯ ಶಾಂತಿ ಕಿರಣದ ಬಳಿಯಿರುವ ಯೂಟರ್ನ್ ಮೂಲಕ ಸಂಚರಿಸುತಿದ್ದು, ಅಪಘಾತ ತಡೆಗಟ್ಟುವ ದೃಷ್ಟಿಯಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಕೆಲವು ದಿನಗಳಿಂದ ಯೂ ಟರ್ನ್ ಮುಚ್ಚಿದೆ. ಇದರಿಂದಾಗಿ ಪಂಪ್ವೆಲ್ ಭಾಗದಿಂದ ಮರೋಳಿ, ಕುಲಶೇಖರ ತೆರಳುವ ವಾಹನಗಳು ನಂತೂರು ಜಂಕ್ಷನಿಗೆ ಬಂದು ಯೂ ಟರ್ನ್ ಮಾಡಬೇಕಾದ ಅನಿವಾರ್ಯತೆ ಉಂಟಾಗಿದೆ. ನಂತೂರು ಜಂಕ್ಷನ್‌ ನಲ್ಲಿ ವಾಹನ ದಟ್ಟಣೆಯಿಂದ ಸಾರ್ವಜನಿಕರಿಗೆ ಉಂಟಾಗುವ‌ ಸಮಸ್ಯೆಯನ್ನು ಸ್ಥಳೀಯರು ಶಾಸಕರ ಗಮನಕ್ಕೆ ತಂದಿದ್ದು, ಶಾಸಕ ಕಾಮತ್ ಅವರು ಆಯುಕ್ತರೊಂದಿಗೆ ಸುಧೀರ್ಘ ಚರ್ಚೆ ನಡೆಸಿ ಸಮಸ್ಯೆಯ ಬಗ್ಗೆ ಮಾಹಿತಿ ನೀಡಿದರು. ಪೊಲೀಸ್ ಆಯುಕ್ತರು ಶಾಸಕರ ಮನವಿಯಂತೆ ಬೆಳಗಿನ ಹಾಗೂ ಸಂಜೆಯ ಸಮಯ ಯೂ ಟರ್ನ್ ತೆಗೆದು ವಾಹನ ಸಂಚಾರಕ್ಕೆ ಅನುವು ಮಾಡಿಕೊಡುವ ಕುರಿತು ಒಪ್ಪಿಕೊಂಡಿದ್ದಾರೆ. ಮರೋಳಿ ಮಾರಿಕಾಂಬ ದೇವಸ್ಥಾನದ ಭಾಗದಿಂದ ನಂತೂರು ಭಾಗಕ್ಕೆ ತೆರಳುವವರು ಪಂಪ್ವೆಲ್ ಮೂಲಕವೇ ಯೂ ಟರ್ನ್ ತೆಗೆದು ಬರಬೇಕು. ಆಡುಮರೋಳಿ ರಸ್ತೆಯಿಂದ ನಂತೂರು ಭಾಗಕ್ಕೆ ವಿರುದ್ಧ ದಿಕ್ಕಿನಲ್ಲಿ ಸಾಗುವುದರಿಂದ ಅಪಘಾತಗಳು ನಡೆಯುತ್ತಿದ್ದು, ಇಂತಹ ಪ್ರಕರಣಗಳಲ್ಲಿ ಅಪಘಾತಕ್ಕೊಳಗಾದವರಿಗೆ ಯಾವುದೇ ವಿಮೆ ಸೌಲಭ್ಯ, ಪರಿಹಾರ ನೀಡಲು ಸಾಧ್ಯವಾಗದಿರುವ ಘಟನೆಗಳು ನಡೆದಿವೆ. ಹಾಗಾಗಿ ಯೂ ಟರ್ನ್ ಮುಚ್ಚುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಆಯುಕ್ತರು ಶಾಸಕರಿಗೆ ತಿಳಿಸಿದ್ದಾರೆ. ಆಡುಮರೋಳಿ ಪರಿಸರದಿಂದ ನಂತೂರಿಗೆ ತೆರಳುವ ವಾಹನ ಸವಾರರು ವಿರುದ್ಧ ದಿಕ್ಕಿನಲ್ಲಿ ಸಾಗದಂತೆ ತಡೆಯಲು ಯೂ ಟರ್ನ್ ಇರುವ ಸ್ಥಳದ ಬಳಿ ಪೊಲೀಸ್ ಸಿಬ್ಬಂದಿ ನೇಮಿಸಬೇಕು ಎಂದು ಶಾಸಕರ ಸಲಹೆಯಂತೆ ಬೆಳಗಿನ ಹಾಗೂ ಸಂಜೆಯ ವೇಳೆ ಸಿಬ್ಬಂದಿ ನೇಮಿಸಿ ಸಂಚಾರಕ್ಕೆ ಅನುವು ಮಾಡಿಕೊಡಲು ಆಯುಕ್ತರು ಒಪ್ಪಿಗೆ ನೀಡಿದ್ದಾರೆ. ಈ ಕುರಿತು ಸಾರ್ವಕರಲ್ಲಿ ಮನವಿ ಮಾಡಿಕೊಂಡಿರುವ ಶಾಸಕರು, ಸಂಚಾರಿ ನಿಯಮಗಳನ್ನು ಪಾಲಿಸಬೇಕು ಹಾಗೂ ವಿರುದ್ಧ ದಿಕ್ಕಿನಲ್ಲಿ ವಾಹನ ಚಲಾಯಿಸದಿರಲು ಕೇಳಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿ ಅನಿರುದ್ಧ್ ಕಾಮತ್, ಪಾಲಿಕೆ ಸದಸ್ಯರಾದ‌ ಸುಧೀರ್ ಶೆಟ್ಟಿ ಕಣ್ಣೂರು, ಪಾಲಿಕೆ ನಾಮನಿರ್ದೇಶಿತ‌ ಸದಸ್ಯರಾದ ಭಾಸ್ಕರ್ ಚಂದ್ರ ಶೆಟ್ಟಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!