ಕರಾವಳಿ

ಬಂಟ್ವಾಳ: ‘ನಮ್ಮ ಕಸ ನಮ್ಮ ಜವಾಬ್ದಾರಿ’ ಅಭಿಯಾನ: ಸಂಪಾಜೆಯಿಂದ ಮಂಗಳೂರಿಗೆ ನಾಗರಾಜ್ ಬಜಾಲ್ ಸ್ವಚ್ಛತಾ ಪಾದಯಾತ್ರೆ

ರಸ್ತೆ ಬದಿಗಳಲ್ಲಿ ರಾಶಿ ಬೀಳುವ ತ್ಯಾಜ್ಯ, ಎಲ್ಲೆಂದರಲ್ಲಿ ಎಸೆಯುವ ಪ್ಲಾಸ್ಟಿಕ್ ಹಾಗೂ ಕಸ ವಿಲೇವಾರಿಯಲ್ಲಿನ ಲೋಪಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಮಂಗಳೂರಿನ ಪರಿಸರಾಸಕ್ತ ನಾಗರಾಜ್ ಬಜಾಲ್ ಅವರು ವಿನೂತನ ಸ್ವಚ್ಛತಾ ಅಭಿಯಾನ ಕೈಗೊಂಡಿದ್ದಾರೆ.

‘ನಮ್ಮ ಕಸ ನಮ್ಮ ಜವಾಬ್ದಾರಿ’ ಎಂಬ ಸಂದೇಶದೊಂದಿಗೆ ಅವರು ಸುಳ್ಯ ತಾಲೂಕಿನ ಸಂಪಾಜೆಯಿಂದ ಮಂಗಳೂರಿನವರೆಗೆ ಸ್ವಚ್ಛತಾ ಪಾದಯಾತ್ರೆ ನಡೆಸುತ್ತಿದ್ದಾರೆ. ಅ.9ರಂದು ಆರಂಭಗೊಂಡಿರುವ ಈ ಏಕಾಂಗಿ ನಡಿಗೆ ಅ.17ರಂದು ಮಂಗಳೂರು ತಲುಪುವ ನಿರೀಕ್ಷೆಯಿದೆ.

ಸಂಪಾಜೆಯಿಂದ ಮಂಗಳೂರಿನವರೆಗೆ ಸುಮಾರು 120 ಕಿ.ಮೀ. ದೂರದ ಪ್ರಯಾಣ ಕೈಗೊಂಡಿರುವ ನಾಗರಾಜ್, ಹೆದ್ದಾರಿಯ ಎರಡೂ ಬದಿಗಳಲ್ಲಿ ಸಂಚರಿಸಿ ಅಲ್ಲಲ್ಲಿ ಬಿದ್ದಿರುವ ತ್ಯಾಜ್ಯವನ್ನು ಸಂಗ್ರಹಿಸುತ್ತಿದ್ದಾರೆ. ಈ ಕಾರಣದಿಂದ ಅವರ ಒಟ್ಟು ನಡಿಗೆಯ ದೂರ 250 ಕಿ.ಮೀ.ಗೂ ಅಧಿಕವಾಗಲಿದೆ.

ಸ್ವಚ್ಛತೆಯ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದರ ಜತೆಗೆ ಸ್ಥಳೀಯ ಆಡಳಿತ ಸಂಸ್ಥೆಗಳ ಕಸ ವಿಲೇವಾರಿ ವ್ಯವಸ್ಥೆಯನ್ನು ಹತ್ತಿರದಿಂದ ಅರಿಯುವುದು ಈ ಅಭಿಯಾನದ ಮತ್ತೊಂದು ಉದ್ದೇಶವಾಗಿದೆ. ರಸ್ತೆ ಬದಿಗಳಲ್ಲಿ ಕಸ ಎಸೆಯುವ ಪ್ರವೃತ್ತಿಗೆ ಕಡಿವಾಣ ಹಾಕುವ ಮೂಲಕ ಪರಿಸರ ಸಂರಕ್ಷಣೆಯಲ್ಲಿ ಪ್ರತಿಯೊಬ್ಬರೂ ಜವಾಬ್ದಾರಿ ವಹಿಸಬೇಕು ಎಂಬ ಸಂದೇಶವನ್ನು ಅವರು ಸಾರುತ್ತಿದ್ದಾರೆ.

ವೈಯಕ್ತಿಕ ಪ್ರಯತ್ನದ ಮೂಲಕ ಸಾರ್ವಜನಿಕರಲ್ಲಿ ಪರಿಸರ ಪ್ರಜ್ಞೆ ಬೆಳೆಸುವ ಈ ಪಾದಯಾತ್ರೆ, ಸ್ವಚ್ಛತೆಯ ಜವಾಬ್ದಾರಿ ಕೇವಲ ಆಡಳಿತ ವ್ಯವಸ್ಥೆಗೆ ಸೀಮಿತವಲ್ಲ; ಪ್ರತಿಯೊಬ್ಬ ನಾಗರಿಕನ ಕರ್ತವ್ಯವೂ ಹೌದು ಎಂಬುದನ್ನು ನೆನಪಿಸುತ್ತಿದೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಮಂಗಳೂರು: ಮಂಗಳೂರಿನ ಚರ್ಚ್ ಫಾದರ್ ವಿರುದ್ಧ ಅಪ್ರಾಪ್ತರಿಗೆ ಲೈಂಗಿಕ ಕಿರುಕುಳ ಆರೋಪ: ಪ್ರಕರಣ ದಾಖಲು

ಪ್ರಾರ್ಥನೆಗಾಗಿ ಚರ್ಚ್‌ಗೆ ಬರುತ್ತಿದ್ದ ಅಪ್ರಾಪ್ತ ಬಾಲಕರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮಂಗಳೂರಿನ ವೆಲೆನ್ಸಿಯಾದ ಸೇಂಟ್ ವಿನ್ಸೆಂಟ್ ಫೆರರ್…

57 mins ago

ಬಂಟ್ವಾಳ: ಸಜೀಪ ಶಾರದಾ ಮಹೋತ್ಸವಕ್ಕೆ ಶತಮಾನೋತ್ಸವದ ಸಂಭ್ರಮ: ಅ.17ರಿಂದ 22ರವರೆಗೆ ವೈಭವದ ಆಚರಣೆ

ಭಕ್ತಿ, ಸಂಸ್ಕೃತಿ ಮತ್ತು ಪರಂಪರೆಯ ಸಮ್ಮಿಲನಕ್ಕೆ ಸಾಕ್ಷಿಯಾಗಲಿರುವ ಸಜೀಪದ ಶಾರದಾ ಮಹೋತ್ಸವಕ್ಕೆ ಈ ಬಾರಿ ಶತಮಾನೋತ್ಸವದ ಸಂಭ್ರಮದ ಮೆರುಗು ದೊರೆತಿದೆ.…

1 hour ago

ಬಂಟ್ವಾಳ: ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಸಂಪ್ರದಾಯಬದ್ಧ ಪುದ್ದಾರ್ ಅಗೆಲು ಸೇವೆ…!

ತುಳುನಾಡಿನ ಪ್ರಸಿದ್ಧ ಕಾರಣಿಕ ಕ್ಷೇತ್ರಗಳಲ್ಲಿ ಒಂದಾದ ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಕಾವೇರಿ ಸಂಕ್ರಮಣದ…

1 hour ago

ಮಂಗಳೂರು: ಎಂಆರ್‌ಪಿಎಲ್ ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ: 2,000ಕ್ಕೂ ಅಧಿಕ ಕುಟುಂಬಗಳಿಗೆ ಅನುಕೂಲ

ಮಂಗಳೂರು ರಿಫೈನರಿ ಅಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್‌ (ಎಂಆರ್‌ಪಿಎಲ್)ನಲ್ಲಿ ಕಾರ್ಯನಿರ್ವಹಿಸುತ್ತಿರುವ ಗುತ್ತಿಗೆ ಕಾರ್ಮಿಕರು ಹಾಗೂ ಅವರ ಕುಟುಂಬಗಳಿಗೆ ₹5 ಲಕ್ಷದ ಆರೋಗ್ಯ…

6 hours ago

ಮಂಗಳೂರು, ಅ.16: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಒತ್ತಾಯ: ಅ.16ರಂದು ಸಮಾಲೋಚನಾ ಸಭೆ

ಕರಾವಳಿ ಮತ್ತು ಮಲೆನಾಡು ಭಾಗದ ಜನರಿಗೆ ಸುಲಭವಾಗಿ ಹಾಗೂ ಕಡಿಮೆ ವೆಚ್ಚದಲ್ಲಿ ನ್ಯಾಯ ದೊರೆಯುವ ನಿಟ್ಟಿನಲ್ಲಿ ಮಂಗಳೂರಿನಲ್ಲಿ ಹೈಕೋರ್ಟ್ ಪೀಠ…

6 hours ago

ಮಂಗಳೂರು, ಅ.16: ಸ್ಟಿಂಗ್ ಆಪರೇಷನ್ ಬಂಧನದ ಬಗ್ಗೆ ಮಾಹಿತಿ ಇಲ್ಲ: ಮಂಗಳೂರಲ್ಲಿ ಡಿಕೆಶಿ ಪ್ರತಿಕ್ರಿಯೆ

ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದ ಬಂಧನದ ಕುರಿತು ಪ್ರತಿಕ್ರಿಯಿಸಲು ನಿರಾಕರಿಸಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಈ ಬಗ್ಗೆ ತನಗೆ ಯಾವುದೇ…

6 hours ago