ಪ್ರಾರ್ಥನೆಗಾಗಿ ಚರ್ಚ್ಗೆ ಬರುತ್ತಿದ್ದ ಅಪ್ರಾಪ್ತ ಬಾಲಕರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮಂಗಳೂರಿನ ವೆಲೆನ್ಸಿಯಾದ ಸೇಂಟ್ ವಿನ್ಸೆಂಟ್ ಫೆರರ್ ಚರ್ಚ್ನ ಫಾದರ್ ಸಿಪ್ರಿಯನ್ ಪಿಂಟೋ ವಿರುದ್ಧ ಪ್ರಕರಣ ದಾಖಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಆರಂಭಿಸಿದ್ದು, ಆರೋಪಗಳ ಕುರಿತು ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದಾರೆ.
ದೂರಿನಲ್ಲಿ ಉಲ್ಲೇಖಿಸಿರುವ ಪ್ರಕಾರ, ಚರ್ಚ್ಗೆ ಪ್ರಾರ್ಥನೆಗಾಗಿ ಬರುತ್ತಿದ್ದ ಅಪ್ರಾಪ್ತ ಬಾಲಕನಿಗೆ ಚಾಕೊಲೇಟ್ ನೀಡಿ ಆಮಿಷವೊಡ್ಡಿ, ಬಳಿಕ ಸಾಕ್ರಿಸ್ಟಿ ಸಮೀಪದ ಕೊಠಡಿಗೆ ಕರೆಸಿಕೊಂಡು ಲೈಂಗಿಕ ದುರುದ್ದೇಶದಿಂದ ಅಸಭ್ಯವಾಗಿ ವರ್ತಿಸಿರುವ ಆರೋಪ ಕೇಳಿಬಂದಿದೆ. ಆಗಸ್ಟ್ 14ರಂದು ಸಂಜೆ ಸುಮಾರು 6.30ರ ವೇಳೆಗೆ ಬಾಲಕನನ್ನು ರಿಸೆಪ್ಷನಿಸ್ಟ್ ಕೊಠಡಿಗೆ ಕರೆಸಿಕೊಂಡು ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಘಟನೆಯ ಕುರಿತು ಬಾಲಕ ತನ್ನ ಸ್ನೇಹಿತರೊಂದಿಗೆ ಮಾತನಾಡಿದಾಗ, ಚರ್ಚ್ಗೆ ಬರುತ್ತಿದ್ದ ಇತರ ಅಪ್ರಾಪ್ತ ಬಾಲಕರೂ ಇದೇ ರೀತಿಯ ಕಿರುಕುಳಕ್ಕೆ ಒಳಗಾಗಿರುವುದಾಗಿ ತಿಳಿದುಬಂದಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಇತರ ಬಾಲಕರಿಗೂ ಕಿರುಕುಳ ನಡೆದಿದೆಯೇ ಎಂಬ ಕುರಿತು ಪ್ರಶ್ನೆಗಳು ಎದ್ದಿವೆ. ಪ್ರಕರಣದ ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ, ಸಂತ್ರಸ್ತ ಮಕ್ಕಳಿಗೆ ನ್ಯಾಯ ಒದಗಿಸಬೇಕು ಎಂಬ ಒತ್ತಾಯ ವ್ಯಕ್ತವಾಗಿದೆ. ಆರೋಪಗಳ ಸತ್ಯಾಸತ್ಯತೆಯನ್ನು ಪೊಲೀಸರು ತನಿಖೆಯ ಮೂಲಕ ದೃಢಪಡಿಸಬೇಕಿದೆ.
ರಸ್ತೆ ಬದಿಗಳಲ್ಲಿ ರಾಶಿ ಬೀಳುವ ತ್ಯಾಜ್ಯ, ಎಲ್ಲೆಂದರಲ್ಲಿ ಎಸೆಯುವ ಪ್ಲಾಸ್ಟಿಕ್ ಹಾಗೂ ಕಸ ವಿಲೇವಾರಿಯಲ್ಲಿನ ಲೋಪಗಳ ಕುರಿತು ಜನರಲ್ಲಿ ಜಾಗೃತಿ…
ಭಕ್ತಿ, ಸಂಸ್ಕೃತಿ ಮತ್ತು ಪರಂಪರೆಯ ಸಮ್ಮಿಲನಕ್ಕೆ ಸಾಕ್ಷಿಯಾಗಲಿರುವ ಸಜೀಪದ ಶಾರದಾ ಮಹೋತ್ಸವಕ್ಕೆ ಈ ಬಾರಿ ಶತಮಾನೋತ್ಸವದ ಸಂಭ್ರಮದ ಮೆರುಗು ದೊರೆತಿದೆ.…
ತುಳುನಾಡಿನ ಪ್ರಸಿದ್ಧ ಕಾರಣಿಕ ಕ್ಷೇತ್ರಗಳಲ್ಲಿ ಒಂದಾದ ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಕಾವೇರಿ ಸಂಕ್ರಮಣದ…
ಮಂಗಳೂರು ರಿಫೈನರಿ ಅಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (ಎಂಆರ್ಪಿಎಲ್)ನಲ್ಲಿ ಕಾರ್ಯನಿರ್ವಹಿಸುತ್ತಿರುವ ಗುತ್ತಿಗೆ ಕಾರ್ಮಿಕರು ಹಾಗೂ ಅವರ ಕುಟುಂಬಗಳಿಗೆ ₹5 ಲಕ್ಷದ ಆರೋಗ್ಯ…
ಕರಾವಳಿ ಮತ್ತು ಮಲೆನಾಡು ಭಾಗದ ಜನರಿಗೆ ಸುಲಭವಾಗಿ ಹಾಗೂ ಕಡಿಮೆ ವೆಚ್ಚದಲ್ಲಿ ನ್ಯಾಯ ದೊರೆಯುವ ನಿಟ್ಟಿನಲ್ಲಿ ಮಂಗಳೂರಿನಲ್ಲಿ ಹೈಕೋರ್ಟ್ ಪೀಠ…
ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದ ಬಂಧನದ ಕುರಿತು ಪ್ರತಿಕ್ರಿಯಿಸಲು ನಿರಾಕರಿಸಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಈ ಬಗ್ಗೆ ತನಗೆ ಯಾವುದೇ…