ಬಾಂಗ್ಲಾದೇಶದ ಢಾಕಾದಲ್ಲಿರುವ ಜಗನ್ನಾಥ ವಿಶ್ವವಿದ್ಯಾಲಯದ ಆವರಣದಲ್ಲಿ ದುರ್ಗಾಪೂಜೆಯ ಸಂದರ್ಭದಲ್ಲಿ ಗೋಮಾಂಸದ ಖಿಚಡಿ ತಯಾರಿಸುವ ವಿಚಾರವಾಗಿ ವಿವಾದ ಉಂಟಾಗಿದೆ. ದೇವಸ್ಥಾನ ಹಾಗೂ ದುರ್ಗಾಪೂಜೆಯ ಪೆಂಡಾಲ್ ಸಮೀಪ ಅಡುಗೆ ಮಾಡಲು ಮುಂದಾಗಿದ್ದಕ್ಕೆ ಹಿಂದೂ ವಿದ್ಯಾರ್ಥಿಗಳು ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಕ್ಯಾಂಪಸ್ನಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು.
ವಿಶ್ವವಿದ್ಯಾಲಯದ ಇಸ್ಲಾಮಿಕ್ ಇತಿಹಾಸ ಮತ್ತು ಸಂಸ್ಕೃತಿ ವಿಭಾಗದ ವಿದ್ಯಾರ್ಥಿಗಳು ಗೋಮಾಂಸದ ಖಿಚಡಿ ತಯಾರಿಸಲು ಮುಂದಾಗಿದ್ದರು ಎನ್ನಲಾಗಿದೆ. ಈ ಬೆಳವಣಿಗೆಗೆ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ವಿಶ್ವವಿದ್ಯಾಲಯದ ಆಡಳಿತ ಮಂಡಳಿ ಕ್ಯಾಂಪಸ್ನಲ್ಲಿ ಪ್ರಾಣಿ ಬಲಿ ಹಾಗೂ ಮುಕ್ತವಾಗಿ ಅಡುಗೆ ಮಾಡುವುದನ್ನು ನಿಷೇಧಿಸಿತು.
ಆಡಳಿತ ಮಂಡಳಿಯ ನಿರ್ಧಾರವನ್ನು ವಿರೋಧಿಸಿದ ಮತ್ತೊಂದು ವಿದ್ಯಾರ್ಥಿ ಸಂಘಟನೆ ಗೋಹತ್ಯೆ ನಡೆಸಿ ಗೋಮಾಂಸದ ಔತಣಕೂಟ ಆಯೋಜಿಸಲು ನಿರ್ಧರಿಸಿತ್ತು. ಇದರಿಂದ ವಿವಾದ ಮತ್ತಷ್ಟು ತೀವ್ರಗೊಂಡಿತ್ತು.
ಬಳಿಕ ವಿಶ್ವವಿದ್ಯಾಲಯದ ಪ್ರಾಕ್ಟರ್ ಹಾಗೂ ದೇವಸ್ಥಾನ ಸಮಿತಿಯೊಂದಿಗೆ ನಡೆದ ಮಾತುಕತೆಯ ನಂತರ ವಿದ್ಯಾರ್ಥಿಗಳು ಪ್ರತಿಭಟನಾತ್ಮಕ ಕಾರ್ಯಕ್ರಮವನ್ನು ಸ್ಥಳಾಂತರಿಸಲು ಒಪ್ಪಿಕೊಂಡಿದ್ದಾರೆ. ದೇವಸ್ಥಾನ ಮತ್ತು ಪೂಜಾ ಸ್ಥಳದಿಂದ ದೂರದಲ್ಲಿರುವ ಕಲಾ ವಿಭಾಗದ ಸಮೀಪದ ಮೈದಾನದಲ್ಲಿ ಕಾರ್ಯಕ್ರಮ ನಡೆಸಲು ನಿರ್ಧರಿಸಲಾಗಿದೆ ಎಂದು ತಿಳಿದುಬಂದಿದೆ.
ಅಗತ್ಯ ಮೂಲಸೌಕರ್ಯ, ವೈದ್ಯಕೀಯ ಉಪಕರಣಗಳು ಹಾಗೂ ವೈದ್ಯರು ಮತ್ತು ಸಿಬ್ಬಂದಿಗಳ ನೇಮಕಾತಿ ಇಲ್ಲದೆ ಅಜ್ಜರಕಾಡಿನ ನೂತನ ಜಿಲ್ಲಾಸ್ಪತ್ರೆ ಕಟ್ಟಡಕ್ಕೆ ತಾಲೂಕು…
ಕರ್ನಾಟಕದಲ್ಲಿ ನಿಷೇಧಕ್ಕೊಳಗಾಗಿರುವ ಕೇರಳ ರಾಜ್ಯದ ಲಾಟರಿ ಟಿಕೆಟ್ಗಳನ್ನು ಅಕ್ರಮವಾಗಿ ತಂದು ಪುತ್ತೂರಿನಲ್ಲಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ ಜಾಲದ ವಿರುದ್ಧ…
ರಾಷ್ಟ್ರೀಯ ಹೆದ್ದಾರಿ 275ರ ಸಂಟ್ಯಾರ್ ಸಮೀಪ ಲಾರಿ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಡಿಕ್ಕಿಯ ರಭಸಕ್ಕೆ…
ನಾವೂರು ಗ್ರಾಮದಲ್ಲಿರುವ ಡಾ. ಪ್ರದೀಪ್ ಅವರ ಆರೋಗ್ಯ ಕ್ಲಿನಿಕ್ಗೆ ಡೀಸೆಲ್ ಸುರಿದು ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸರು…
ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರ ಹಾಗೂ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ…
ಮೂಡಪಡುಕೋಡಿ ಗ್ರಾಮದ ಸೇವಾ ಎಂಬಲ್ಲಿ ಸಿಡಿಲು ಬಡಿದು ಮನೆಯೊಂದಕ್ಕೆ ಭಾಗಶಃ ಹಾನಿಯಾದ ಘಟನೆ ನಡೆದಿದೆ. ಸೇವಾ ನಿವಾಸಿ ಜೋಹರ ಕೋಂ.…