ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರ ಹಾಗೂ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹50,000 ದಂಡ ವಿಧಿಸಿ ಮಂಗಳೂರಿನ ನ್ಯಾಯಾಲಯ ತೀರ್ಪು ನೀಡಿದೆ.
ಕಡಬ ತಾಲೂಕಿನ ರಾಮಕುಂಜ ನಿವಾಸಿ ಶೇಖರ್ ಅಲಿಯಾಸ್ ಸೇಸಪ್ಪ ಶಿಕ್ಷೆಗೆ ಗುರಿಯಾದ ಆರೋಪಿ. 2021ರ ಮೇ 8ರಂದು ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಲ್ಲದೆ, ಘಟನೆಯ ಕುರಿತು ಯಾರಿಗಾದರೂ ತಿಳಿಸಿದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದನು ಎನ್ನಲಾಗಿದೆ. ಈ ಸಂಬಂಧ ಕಡಬ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.
ಅಂದಿನ ಪುತ್ತೂರು ಗ್ರಾಮಾಂತರ ವೃತ್ತ ನಿರೀಕ್ಷಕ ಉಮೇಶ್ ಯು. ಅವರು ಪ್ರಕರಣದ ತನಿಖೆ ನಡೆಸಿ, ವೈಜ್ಞಾನಿಕ ಹಾಗೂ ಅಗತ್ಯ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿದ್ದರು. ಬಳಿಕ ಆರೋಪಿಯ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಮಂಗಳೂರಿನ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಸುದೀರ್ಘ ವಿಚಾರಣೆ ನಡೆದಿದ್ದು, ನ್ಯಾಯಾಧೀಶೆ ಸುಮಂಗಲಾ ಚಕಲಬ್ಬಿ ಅವರು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಶಿಕ್ಷೆ ಪ್ರಕಟಿಸಿದ್ದಾರೆ. ಆರೋಪಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿರುವ ನ್ಯಾಯಾಲಯ, ₹50,000 ದಂಡವನ್ನೂ ಪಾವತಿಸುವಂತೆ ಆದೇಶಿಸಿದೆ.
ಅಗತ್ಯ ಮೂಲಸೌಕರ್ಯ, ವೈದ್ಯಕೀಯ ಉಪಕರಣಗಳು ಹಾಗೂ ವೈದ್ಯರು ಮತ್ತು ಸಿಬ್ಬಂದಿಗಳ ನೇಮಕಾತಿ ಇಲ್ಲದೆ ಅಜ್ಜರಕಾಡಿನ ನೂತನ ಜಿಲ್ಲಾಸ್ಪತ್ರೆ ಕಟ್ಟಡಕ್ಕೆ ತಾಲೂಕು…
ಕರ್ನಾಟಕದಲ್ಲಿ ನಿಷೇಧಕ್ಕೊಳಗಾಗಿರುವ ಕೇರಳ ರಾಜ್ಯದ ಲಾಟರಿ ಟಿಕೆಟ್ಗಳನ್ನು ಅಕ್ರಮವಾಗಿ ತಂದು ಪುತ್ತೂರಿನಲ್ಲಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ ಜಾಲದ ವಿರುದ್ಧ…
ರಾಷ್ಟ್ರೀಯ ಹೆದ್ದಾರಿ 275ರ ಸಂಟ್ಯಾರ್ ಸಮೀಪ ಲಾರಿ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಡಿಕ್ಕಿಯ ರಭಸಕ್ಕೆ…
ನಾವೂರು ಗ್ರಾಮದಲ್ಲಿರುವ ಡಾ. ಪ್ರದೀಪ್ ಅವರ ಆರೋಗ್ಯ ಕ್ಲಿನಿಕ್ಗೆ ಡೀಸೆಲ್ ಸುರಿದು ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸರು…
ಬಾಂಗ್ಲಾದೇಶದ ಢಾಕಾದಲ್ಲಿರುವ ಜಗನ್ನಾಥ ವಿಶ್ವವಿದ್ಯಾಲಯದ ಆವರಣದಲ್ಲಿ ದುರ್ಗಾಪೂಜೆಯ ಸಂದರ್ಭದಲ್ಲಿ ಗೋಮಾಂಸದ ಖಿಚಡಿ ತಯಾರಿಸುವ ವಿಚಾರವಾಗಿ ವಿವಾದ ಉಂಟಾಗಿದೆ. ದೇವಸ್ಥಾನ ಹಾಗೂ…
ಮೂಡಪಡುಕೋಡಿ ಗ್ರಾಮದ ಸೇವಾ ಎಂಬಲ್ಲಿ ಸಿಡಿಲು ಬಡಿದು ಮನೆಯೊಂದಕ್ಕೆ ಭಾಗಶಃ ಹಾನಿಯಾದ ಘಟನೆ ನಡೆದಿದೆ. ಸೇವಾ ನಿವಾಸಿ ಜೋಹರ ಕೋಂ.…