ನಾವೂರು ಗ್ರಾಮದಲ್ಲಿರುವ ಡಾ. ಪ್ರದೀಪ್ ಅವರ ಆರೋಗ್ಯ ಕ್ಲಿನಿಕ್ಗೆ ಡೀಸೆಲ್ ಸುರಿದು ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತರನ್ನು ನಾವೂರು ನಿವಾಸಿಗಳಾದ ರವಿ ಪೂಜಾರಿ, ಸುರೇಶ್ ಇಂಚರ ಹಾಗೂ ದಿನೇಶ್ ಪ್ರಭು ಎಂದು ಗುರುತಿಸಲಾಗಿದೆ.
ಅಕ್ಟೋಬರ್ 7ರಂದು ತಡರಾತ್ರಿ ನಾವೂರು ಪೇಟೆಯ ಸ್ವಾತಿ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿದ್ದ ಡಾ. ಪ್ರದೀಪ್ ಅವರ ಆರೋಗ್ಯ ಕ್ಲಿನಿಕ್ಗೆ ಡೀಸೆಲ್ ಸುರಿದು ಬೆಂಕಿ ಹಚ್ಚಲಾಗಿತ್ತು. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿದ ಪೊಲೀಸರು, ಘಟನೆ ನಡೆದ ಒಂದು ವಾರದೊಳಗೆ ಆರೋಪಿಗಳನ್ನು ಪತ್ತೆಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮೂವರು ಸೇರಿ ಕೃತ್ಯ ಎಸಗಲು ಸಂಚು ರೂಪಿಸಿದ್ದರು ಹಾಗೂ ರವಿ ಬೆಂಕಿ ಹಚ್ಚಿದ್ದಾನೆ ಎಂಬುದು ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ ಎಂದು ಹೇಳಲಾಗಿದೆ.
ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಪ್ರಮುಖ ಆರೋಪಿ ರವಿಕುಮಾರ್ನನ್ನು ಹೆಚ್ಚಿನ ವಿಚಾರಣೆಗಾಗಿ ಪೊಲೀಸ್ ವಶಕ್ಕೆ ನೀಡಲಾಗಿದೆ. ಉಳಿದ ಇಬ್ಬರು ಆರೋಪಿಗಳಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಬೆಳ್ತಂಗಡಿ ಡಿವೈಎಸ್ಪಿ ರೋಹಿಣಿ ಸಿ.ಕೆ. ಅವರ ಮಾರ್ಗದರ್ಶನದಲ್ಲಿ ಬೆಳ್ತಂಗಡಿ ವೃತ್ತ ನಿರೀಕ್ಷಕ ರವಿ ಬಿ.ಎಸ್. ನೇತೃತ್ವದಲ್ಲಿ ಪೊಲೀಸ್ ಉಪನಿರೀಕ್ಷಕರಾದ ಆನಂದ್ ಹಾಗೂ ಸಿಖಂದರ್ ಪಾಷಾ ಅವರ ತಂಡ ಕಾರ್ಯಾಚರಣೆಯಲ್ಲಿ ಭಾಗವಹಿಸಿತ್ತು.
ಅಗತ್ಯ ಮೂಲಸೌಕರ್ಯ, ವೈದ್ಯಕೀಯ ಉಪಕರಣಗಳು ಹಾಗೂ ವೈದ್ಯರು ಮತ್ತು ಸಿಬ್ಬಂದಿಗಳ ನೇಮಕಾತಿ ಇಲ್ಲದೆ ಅಜ್ಜರಕಾಡಿನ ನೂತನ ಜಿಲ್ಲಾಸ್ಪತ್ರೆ ಕಟ್ಟಡಕ್ಕೆ ತಾಲೂಕು…
ಕರ್ನಾಟಕದಲ್ಲಿ ನಿಷೇಧಕ್ಕೊಳಗಾಗಿರುವ ಕೇರಳ ರಾಜ್ಯದ ಲಾಟರಿ ಟಿಕೆಟ್ಗಳನ್ನು ಅಕ್ರಮವಾಗಿ ತಂದು ಪುತ್ತೂರಿನಲ್ಲಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ ಜಾಲದ ವಿರುದ್ಧ…
ರಾಷ್ಟ್ರೀಯ ಹೆದ್ದಾರಿ 275ರ ಸಂಟ್ಯಾರ್ ಸಮೀಪ ಲಾರಿ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಡಿಕ್ಕಿಯ ರಭಸಕ್ಕೆ…
ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರ ಹಾಗೂ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ…
ಬಾಂಗ್ಲಾದೇಶದ ಢಾಕಾದಲ್ಲಿರುವ ಜಗನ್ನಾಥ ವಿಶ್ವವಿದ್ಯಾಲಯದ ಆವರಣದಲ್ಲಿ ದುರ್ಗಾಪೂಜೆಯ ಸಂದರ್ಭದಲ್ಲಿ ಗೋಮಾಂಸದ ಖಿಚಡಿ ತಯಾರಿಸುವ ವಿಚಾರವಾಗಿ ವಿವಾದ ಉಂಟಾಗಿದೆ. ದೇವಸ್ಥಾನ ಹಾಗೂ…
ಮೂಡಪಡುಕೋಡಿ ಗ್ರಾಮದ ಸೇವಾ ಎಂಬಲ್ಲಿ ಸಿಡಿಲು ಬಡಿದು ಮನೆಯೊಂದಕ್ಕೆ ಭಾಗಶಃ ಹಾನಿಯಾದ ಘಟನೆ ನಡೆದಿದೆ. ಸೇವಾ ನಿವಾಸಿ ಜೋಹರ ಕೋಂ.…