ಜನ ಮನದ ನಾಡಿ ಮಿಡಿತ

Advertisement

ಪುತ್ತೂರು: ಕಾರಿಗೆ ಡಿಕ್ಕಿ ಹೊಡೆದು ಹೆದ್ದಾರಿಯಲ್ಲೇ ಮಗುಚಿಬಿದ್ದ ಲಾರಿ

ರಾಷ್ಟ್ರೀಯ ಹೆದ್ದಾರಿ 275ರ ಸಂಟ್ಯಾರ್ ಸಮೀಪ ಲಾರಿ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಡಿಕ್ಕಿಯ ರಭಸಕ್ಕೆ ಲಾರಿ ರಸ್ತೆಯಲ್ಲೇ ಮಗುಚಿಬಿದ್ದಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಪ್ರಯಾಣಿಕರಿಗೆ ಗಾಯಗಳಾಗಿವೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಲಾರಿಯು ಮುಂಭಾಗದಲ್ಲಿದ್ದ ಕಾರನ್ನು ಓವರ್‌ಟೇಕ್ ಮಾಡಲು ಯತ್ನಿಸಿದ ವೇಳೆ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಡಿಕ್ಕಿಯ ತೀವ್ರತೆಗೆ ಚಾಲಕನ ನಿಯಂತ್ರಣ ತಪ್ಪಿದ ಲಾರಿ ಹೆದ್ದಾರಿಗೆ ಅಡ್ಡಲಾಗಿ ಮಗುಚಿಬಿದ್ದಿದೆ. ಅತಿವೇಗ ಹಾಗೂ ಓವರ್‌ಟೇಕ್ ಮಾಡುವ ಭರದಲ್ಲಿ ಅಪಘಾತ ಸಂಭವಿಸಿರುವ ಶಂಕೆ ವ್ಯಕ್ತವಾಗಿದೆ.

ಅಪಘಾತದ ಬೆನ್ನಲ್ಲೇ ಸ್ಥಳೀಯರು ಹಾಗೂ ಹಾದಿಹೋಕರು ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲು ನೆರವಾಗಿದ್ದಾರೆ. ಲಾರಿ ರಸ್ತೆಗೆ ಅಡ್ಡಲಾಗಿ ಬಿದ್ದಿದ್ದರಿಂದ ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಕೆಲಕಾಲ ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿತು. ಹೆದ್ದಾರಿಯ ಎರಡೂ ಬದಿಗಳಲ್ಲಿ ನೂರಾರು ವಾಹನಗಳು ಸಾಲುಗಟ್ಟಿ ನಿಂತಿದ್ದವು.

ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಪುತ್ತೂರು ಸಂಚಾರಿ ಪೊಲೀಸರು ಪರಿಶೀಲನೆ ನಡೆಸಿದರು. ಬಳಿಕ ಕ್ರೇನ್ ಸಹಾಯದಿಂದ ರಸ್ತೆಯಲ್ಲಿ ಮಗುಚಿಬಿದ್ದಿದ್ದ ಲಾರಿಯನ್ನು ತೆರವುಗೊಳಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು. ಅಪಘಾತಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಅಗತ್ಯ ಸೌಲಭ್ಯಗಳಿಲ್ಲದೆ ಜಿಲ್ಲಾಸ್ಪತ್ರೆ ಸ್ಥಳಾಂತರಕ್ಕೆ ಸಿದ್ಧತೆ: ಶಾಸಕ ಯಶ್ಪಾಲ್ ಸುವರ್ಣ ಆಕ್ರೋಶ

ಪುತ್ತೂರು: ಪುತ್ತೂರಿನಲ್ಲಿ ಅಕ್ರಮ ಕೇರಳ ಲಾಟರಿ ಮಾರಾಟ ಜಾಲ ಪತ್ತೆ: ಇಬ್ಬರು ವಶಕ್ಕೆ

ಮಂಗಳೂರು: ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ, ಮೂವರು ಆರೋಪಿಗಳ ಬಂಧನ

ಮಂಗಳೂರು: ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣ: ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ

ಢಾಕಾ: ಬಾಂಗ್ಲಾದೇಶದ ವಿಶ್ವವಿದ್ಯಾಲಯದಲ್ಲಿ ಗೋಮಾಂಸದ ಅಡುಗೆ ವಿಚಾರವಾಗಿ ವಿವಾದ

ಬಂಟ್ವಾಳ: ಸಿಡಿಲು ಬಡಿದು ಮನೆಗೆ ಭಾಗಶಃ ಹಾನಿ

ಕರೇನಾಡ ಕಮ್ಮೆನ ಯೂಟ್ಯೂಬ್ ಚಾನೆಲ್‌ನಲ್ಲಿ ‘ಕಟೀಲ ಕಣ್ಮಣಿ’ ವಿಶೇಷ ಕಲಾಕೃತಿ ಬಿಡುಗಡೆ…!

ಮಂಗಳೂರು: ಮಂಗಳೂರಿನ ಚರ್ಚ್ ಫಾದರ್ ವಿರುದ್ಧ ಅಪ್ರಾಪ್ತರಿಗೆ ಲೈಂಗಿಕ ಕಿರುಕುಳ ಆರೋಪ: ಪ್ರಕರಣ ದಾಖಲು

ಬಂಟ್ವಾಳ: ‘ನಮ್ಮ ಕಸ ನಮ್ಮ ಜವಾಬ್ದಾರಿ’ ಅಭಿಯಾನ: ಸಂಪಾಜೆಯಿಂದ ಮಂಗಳೂರಿಗೆ ನಾಗರಾಜ್ ಬಜಾಲ್ ಸ್ವಚ್ಛತಾ ಪಾದಯಾತ್ರೆ

error: Content is protected !!