ರಾಷ್ಟ್ರೀಯ ಹೆದ್ದಾರಿ 275ರ ಸಂಟ್ಯಾರ್ ಸಮೀಪ ಲಾರಿ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಡಿಕ್ಕಿಯ ರಭಸಕ್ಕೆ ಲಾರಿ ರಸ್ತೆಯಲ್ಲೇ ಮಗುಚಿಬಿದ್ದಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಪ್ರಯಾಣಿಕರಿಗೆ ಗಾಯಗಳಾಗಿವೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಲಾರಿಯು ಮುಂಭಾಗದಲ್ಲಿದ್ದ ಕಾರನ್ನು ಓವರ್ಟೇಕ್ ಮಾಡಲು ಯತ್ನಿಸಿದ ವೇಳೆ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಡಿಕ್ಕಿಯ ತೀವ್ರತೆಗೆ ಚಾಲಕನ ನಿಯಂತ್ರಣ ತಪ್ಪಿದ ಲಾರಿ ಹೆದ್ದಾರಿಗೆ ಅಡ್ಡಲಾಗಿ ಮಗುಚಿಬಿದ್ದಿದೆ. ಅತಿವೇಗ ಹಾಗೂ ಓವರ್ಟೇಕ್ ಮಾಡುವ ಭರದಲ್ಲಿ ಅಪಘಾತ ಸಂಭವಿಸಿರುವ ಶಂಕೆ ವ್ಯಕ್ತವಾಗಿದೆ.
ಅಪಘಾತದ ಬೆನ್ನಲ್ಲೇ ಸ್ಥಳೀಯರು ಹಾಗೂ ಹಾದಿಹೋಕರು ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲು ನೆರವಾಗಿದ್ದಾರೆ. ಲಾರಿ ರಸ್ತೆಗೆ ಅಡ್ಡಲಾಗಿ ಬಿದ್ದಿದ್ದರಿಂದ ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಕೆಲಕಾಲ ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿತು. ಹೆದ್ದಾರಿಯ ಎರಡೂ ಬದಿಗಳಲ್ಲಿ ನೂರಾರು ವಾಹನಗಳು ಸಾಲುಗಟ್ಟಿ ನಿಂತಿದ್ದವು.
ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಪುತ್ತೂರು ಸಂಚಾರಿ ಪೊಲೀಸರು ಪರಿಶೀಲನೆ ನಡೆಸಿದರು. ಬಳಿಕ ಕ್ರೇನ್ ಸಹಾಯದಿಂದ ರಸ್ತೆಯಲ್ಲಿ ಮಗುಚಿಬಿದ್ದಿದ್ದ ಲಾರಿಯನ್ನು ತೆರವುಗೊಳಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು. ಅಪಘಾತಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಅಗತ್ಯ ಮೂಲಸೌಕರ್ಯ, ವೈದ್ಯಕೀಯ ಉಪಕರಣಗಳು ಹಾಗೂ ವೈದ್ಯರು ಮತ್ತು ಸಿಬ್ಬಂದಿಗಳ ನೇಮಕಾತಿ ಇಲ್ಲದೆ ಅಜ್ಜರಕಾಡಿನ ನೂತನ ಜಿಲ್ಲಾಸ್ಪತ್ರೆ ಕಟ್ಟಡಕ್ಕೆ ತಾಲೂಕು…
ಕರ್ನಾಟಕದಲ್ಲಿ ನಿಷೇಧಕ್ಕೊಳಗಾಗಿರುವ ಕೇರಳ ರಾಜ್ಯದ ಲಾಟರಿ ಟಿಕೆಟ್ಗಳನ್ನು ಅಕ್ರಮವಾಗಿ ತಂದು ಪುತ್ತೂರಿನಲ್ಲಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ ಜಾಲದ ವಿರುದ್ಧ…
ನಾವೂರು ಗ್ರಾಮದಲ್ಲಿರುವ ಡಾ. ಪ್ರದೀಪ್ ಅವರ ಆರೋಗ್ಯ ಕ್ಲಿನಿಕ್ಗೆ ಡೀಸೆಲ್ ಸುರಿದು ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸರು…
ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರ ಹಾಗೂ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ…
ಬಾಂಗ್ಲಾದೇಶದ ಢಾಕಾದಲ್ಲಿರುವ ಜಗನ್ನಾಥ ವಿಶ್ವವಿದ್ಯಾಲಯದ ಆವರಣದಲ್ಲಿ ದುರ್ಗಾಪೂಜೆಯ ಸಂದರ್ಭದಲ್ಲಿ ಗೋಮಾಂಸದ ಖಿಚಡಿ ತಯಾರಿಸುವ ವಿಚಾರವಾಗಿ ವಿವಾದ ಉಂಟಾಗಿದೆ. ದೇವಸ್ಥಾನ ಹಾಗೂ…
ಮೂಡಪಡುಕೋಡಿ ಗ್ರಾಮದ ಸೇವಾ ಎಂಬಲ್ಲಿ ಸಿಡಿಲು ಬಡಿದು ಮನೆಯೊಂದಕ್ಕೆ ಭಾಗಶಃ ಹಾನಿಯಾದ ಘಟನೆ ನಡೆದಿದೆ. ಸೇವಾ ನಿವಾಸಿ ಜೋಹರ ಕೋಂ.…