ಕರ್ನಾಟಕದಲ್ಲಿ ನಿಷೇಧಕ್ಕೊಳಗಾಗಿರುವ ಕೇರಳ ರಾಜ್ಯದ ಲಾಟರಿ ಟಿಕೆಟ್ಗಳನ್ನು ಅಕ್ರಮವಾಗಿ ತಂದು ಪುತ್ತೂರಿನಲ್ಲಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ ಜಾಲದ ವಿರುದ್ಧ ಪುತ್ತೂರು ನಗರ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ನಗರದ ಎರಡು ಪ್ರತ್ಯೇಕ ಅಂಗಡಿಗಳ ಮೇಲೆ ದಾಳಿ ನಡೆಸಿದ ಪೊಲೀಸರು, ಇಬ್ಬರನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
2026ರ ಅಕ್ಟೋಬರ್ 14ರಂದು ಸಂಜೆ ಲಭಿಸಿದ ಖಚಿತ ಮಾಹಿತಿಯ ಮೇರೆಗೆ ಪುತ್ತೂರು ನಗರ ಠಾಣೆಯ ಪೊಲೀಸರು ಕಾರ್ಯಾಚರಣೆ ಕೈಗೊಂಡಿದ್ದಾರೆ. ಪುತ್ತೂರು ಕಸಬಾ ಗ್ರಾಮದ ಮುಖ್ಯ ರಸ್ತೆಯಲ್ಲಿರುವ ಅಂಗಡಿಯೊಂದರಲ್ಲಿ ನಿಷೇಧಿತ ಕೇರಳ ಲಾಟರಿ ಟಿಕೆಟ್ಗಳನ್ನು ಮಾರಾಟ ಮಾಡಲಾಗುತ್ತಿದೆ ಎಂಬ ಮಾಹಿತಿ ಆಧರಿಸಿ ಎಎಸ್ಐ ವಾಸು ನಾಯ್ಕ್ ಹಾಗೂ ಸಿಬ್ಬಂದಿ ದಾಳಿ ನಡೆಸಿದರು.
ಈ ವೇಳೆ ಅಂಗಡಿ ಮಾಲೀಕ, ಪುತ್ತೂರು ಕಸಬಾ ನಿವಾಸಿ ಶ್ರೀನಿವಾಸ ಪೈ ಅವರನ್ನು ವಿಚಾರಣೆ ನಡೆಸಿದಾಗ, ಕೇರಳದಿಂದ ಲಾಟರಿ ಟಿಕೆಟ್ಗಳನ್ನು ತಂದು ಕಾನೂನುಬಾಹಿರವಾಗಿ ಹೆಚ್ಚಿನ ಬೆಲೆಗೆ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವುದಾಗಿ ತಿಳಿದುಬಂದಿದೆ. ಅವರ ಬಳಿಯಿದ್ದ ಲಾಟರಿ ಟಿಕೆಟ್ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಈ ಸಂಬಂಧ ಕರ್ನಾಟಕ ಲಾಟರಿ ನಿಷೇಧ ಕಾಯ್ದೆ 1998ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಅಕ್ರಮ ಲಾಟರಿ ಮಾರಾಟ ತಡೆಗಟ್ಟುವ ನಿಟ್ಟಿನಲ್ಲಿ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಅಗತ್ಯ ಮೂಲಸೌಕರ್ಯ, ವೈದ್ಯಕೀಯ ಉಪಕರಣಗಳು ಹಾಗೂ ವೈದ್ಯರು ಮತ್ತು ಸಿಬ್ಬಂದಿಗಳ ನೇಮಕಾತಿ ಇಲ್ಲದೆ ಅಜ್ಜರಕಾಡಿನ ನೂತನ ಜಿಲ್ಲಾಸ್ಪತ್ರೆ ಕಟ್ಟಡಕ್ಕೆ ತಾಲೂಕು…
ರಾಷ್ಟ್ರೀಯ ಹೆದ್ದಾರಿ 275ರ ಸಂಟ್ಯಾರ್ ಸಮೀಪ ಲಾರಿ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಡಿಕ್ಕಿಯ ರಭಸಕ್ಕೆ…
ನಾವೂರು ಗ್ರಾಮದಲ್ಲಿರುವ ಡಾ. ಪ್ರದೀಪ್ ಅವರ ಆರೋಗ್ಯ ಕ್ಲಿನಿಕ್ಗೆ ಡೀಸೆಲ್ ಸುರಿದು ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸರು…
ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರ ಹಾಗೂ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ…
ಬಾಂಗ್ಲಾದೇಶದ ಢಾಕಾದಲ್ಲಿರುವ ಜಗನ್ನಾಥ ವಿಶ್ವವಿದ್ಯಾಲಯದ ಆವರಣದಲ್ಲಿ ದುರ್ಗಾಪೂಜೆಯ ಸಂದರ್ಭದಲ್ಲಿ ಗೋಮಾಂಸದ ಖಿಚಡಿ ತಯಾರಿಸುವ ವಿಚಾರವಾಗಿ ವಿವಾದ ಉಂಟಾಗಿದೆ. ದೇವಸ್ಥಾನ ಹಾಗೂ…
ಮೂಡಪಡುಕೋಡಿ ಗ್ರಾಮದ ಸೇವಾ ಎಂಬಲ್ಲಿ ಸಿಡಿಲು ಬಡಿದು ಮನೆಯೊಂದಕ್ಕೆ ಭಾಗಶಃ ಹಾನಿಯಾದ ಘಟನೆ ನಡೆದಿದೆ. ಸೇವಾ ನಿವಾಸಿ ಜೋಹರ ಕೋಂ.…