ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಅಗತ್ಯ ಸೌಲಭ್ಯಗಳಿಲ್ಲದೆ ಜಿಲ್ಲಾಸ್ಪತ್ರೆ ಸ್ಥಳಾಂತರಕ್ಕೆ ಸಿದ್ಧತೆ: ಶಾಸಕ ಯಶ್ಪಾಲ್ ಸುವರ್ಣ ಆಕ್ರೋಶ

ಅಗತ್ಯ ಮೂಲಸೌಕರ್ಯ, ವೈದ್ಯಕೀಯ ಉಪಕರಣಗಳು ಹಾಗೂ ವೈದ್ಯರು ಮತ್ತು ಸಿಬ್ಬಂದಿಗಳ ನೇಮಕಾತಿ ಇಲ್ಲದೆ ಅಜ್ಜರಕಾಡಿನ ನೂತನ ಜಿಲ್ಲಾಸ್ಪತ್ರೆ ಕಟ್ಟಡಕ್ಕೆ ತಾಲೂಕು ಆಸ್ಪತ್ರೆಯನ್ನು ಸ್ಥಳಾಂತರಿಸಲು ರಾಜ್ಯ ಸರ್ಕಾರ ಮುಂದಾಗಿರುವುದು ಜಿಲ್ಲೆಯ ಜನರ ಆರೋಗ್ಯದೊಂದಿಗೆ ಚೆಲ್ಲಾಟವಾಡಿದಂತಾಗಿದೆ ಎಂದು ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ ಆರೋಪಿಸಿದ್ದಾರೆ.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 250 ಹಾಸಿಗೆಗಳ ಸಾಮರ್ಥ್ಯ ಹೊಂದಿರುವ ಆರು ಮಹಡಿಗಳ ನೂತನ ಜಿಲ್ಲಾಸ್ಪತ್ರೆ ಕಟ್ಟಡವನ್ನು ಮೂಲ ವಿಸ್ತೃತ ಯೋಜನಾ ವರದಿಯ ಪ್ರಕಾರ ಸಜ್ಜುಗೊಳಿಸದೆ, ರಾಜ್ಯದ ಇತರ ಜಿಲ್ಲಾಸ್ಪತ್ರೆಗಳಿಗೆ ಸಮಾನವಾದ ಸೌಲಭ್ಯಗಳನ್ನು ಕಲ್ಪಿಸದೆ ತರಾತುರಿಯಲ್ಲಿ ಸ್ಥಳಾಂತರಕ್ಕೆ ಮುಂದಾಗಿರುವುದು ಖಂಡನೀಯ ಎಂದರು.

ನೂತನ ಜಿಲ್ಲಾಸ್ಪತ್ರೆಗೆ ಅಗತ್ಯವಿರುವ ವೈದ್ಯರು, ಶುಶ್ರೂಷಕರು, ತಾಂತ್ರಿಕ ಸಿಬ್ಬಂದಿ ಹಾಗೂ ಇತರ ಸಿಬ್ಬಂದಿಗಳ ಹುದ್ದೆಗಳನ್ನು ಇನ್ನೂ ಮಂಜೂರು ಮಾಡಿಲ್ಲ. ಸ್ಕ್ಯಾನಿಂಗ್, ಎಕ್ಸ್‌ರೇ ಸೇರಿದಂತೆ ಅಗತ್ಯ ವೈದ್ಯಕೀಯ ಯಂತ್ರೋಪಕರಣಗಳು ಹಾಗೂ ಪೀಠೋಪಕರಣಗಳನ್ನು ಒದಗಿಸಿಲ್ಲ ಎಂದು ದೂರಿದರು.

ಇದಲ್ಲದೆ, ಆಸ್ಪತ್ರೆಯ ಕಾರ್ಯನಿರ್ವಹಣೆಗೆ ಅಗತ್ಯವಿರುವ ಕಂಪ್ಯೂಟರ್‌ಗಳು ಮತ್ತು ಪ್ರಿಂಟರ್‌ಗಳ ವ್ಯವಸ್ಥೆಯೂ ಆಗಿಲ್ಲ. ಆರು ಮಹಡಿಗಳ ಕಟ್ಟಡವನ್ನು ಸ್ವಚ್ಛಗೊಳಿಸಲು ಬೇಕಾದ ಸ್ವಚ್ಛತಾ ಸಿಬ್ಬಂದಿ ಹಾಗೂ ಅಗತ್ಯ ಪರಿಕರಗಳನ್ನೂ ಒದಗಿಸಿಲ್ಲ ಎಂದು ಅವರು ಆರೋಪಿಸಿದರು.

ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸಲು ಅಗತ್ಯವಿರುವ ಎಲ್ಲ ಮೂಲಸೌಕರ್ಯಗಳನ್ನು ಕಲ್ಪಿಸಿದ ಬಳಿಕವೇ ಆಸ್ಪತ್ರೆಯನ್ನು ಸ್ಥಳಾಂತರಿಸಬೇಕು ಎಂದು ಶಾಸಕ ಯಶ್ಪಾಲ್ ಎ. ಸುವರ್ಣ ಆಗ್ರಹಿಸಿದ್ದಾರೆ.

Leave a Reply

Your email address will not be published. Required fields are marked *

ಪುತ್ತೂರು: ಪುತ್ತೂರಿನಲ್ಲಿ ಅಕ್ರಮ ಕೇರಳ ಲಾಟರಿ ಮಾರಾಟ ಜಾಲ ಪತ್ತೆ: ಇಬ್ಬರು ವಶಕ್ಕೆ

ಪುತ್ತೂರು: ಕಾರಿಗೆ ಡಿಕ್ಕಿ ಹೊಡೆದು ಹೆದ್ದಾರಿಯಲ್ಲೇ ಮಗುಚಿಬಿದ್ದ ಲಾರಿ

ಮಂಗಳೂರು: ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ, ಮೂವರು ಆರೋಪಿಗಳ ಬಂಧನ

ಮಂಗಳೂರು: ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣ: ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ

ಢಾಕಾ: ಬಾಂಗ್ಲಾದೇಶದ ವಿಶ್ವವಿದ್ಯಾಲಯದಲ್ಲಿ ಗೋಮಾಂಸದ ಅಡುಗೆ ವಿಚಾರವಾಗಿ ವಿವಾದ

ಬಂಟ್ವಾಳ: ಸಿಡಿಲು ಬಡಿದು ಮನೆಗೆ ಭಾಗಶಃ ಹಾನಿ

ಕರೇನಾಡ ಕಮ್ಮೆನ ಯೂಟ್ಯೂಬ್ ಚಾನೆಲ್‌ನಲ್ಲಿ ‘ಕಟೀಲ ಕಣ್ಮಣಿ’ ವಿಶೇಷ ಕಲಾಕೃತಿ ಬಿಡುಗಡೆ…!

ಮಂಗಳೂರು: ಮಂಗಳೂರಿನ ಚರ್ಚ್ ಫಾದರ್ ವಿರುದ್ಧ ಅಪ್ರಾಪ್ತರಿಗೆ ಲೈಂಗಿಕ ಕಿರುಕುಳ ಆರೋಪ: ಪ್ರಕರಣ ದಾಖಲು

ಬಂಟ್ವಾಳ: ‘ನಮ್ಮ ಕಸ ನಮ್ಮ ಜವಾಬ್ದಾರಿ’ ಅಭಿಯಾನ: ಸಂಪಾಜೆಯಿಂದ ಮಂಗಳೂರಿಗೆ ನಾಗರಾಜ್ ಬಜಾಲ್ ಸ್ವಚ್ಛತಾ ಪಾದಯಾತ್ರೆ

error: Content is protected !!