ಅಗತ್ಯ ಮೂಲಸೌಕರ್ಯ, ವೈದ್ಯಕೀಯ ಉಪಕರಣಗಳು ಹಾಗೂ ವೈದ್ಯರು ಮತ್ತು ಸಿಬ್ಬಂದಿಗಳ ನೇಮಕಾತಿ ಇಲ್ಲದೆ ಅಜ್ಜರಕಾಡಿನ ನೂತನ ಜಿಲ್ಲಾಸ್ಪತ್ರೆ ಕಟ್ಟಡಕ್ಕೆ ತಾಲೂಕು ಆಸ್ಪತ್ರೆಯನ್ನು ಸ್ಥಳಾಂತರಿಸಲು ರಾಜ್ಯ ಸರ್ಕಾರ ಮುಂದಾಗಿರುವುದು ಜಿಲ್ಲೆಯ ಜನರ ಆರೋಗ್ಯದೊಂದಿಗೆ ಚೆಲ್ಲಾಟವಾಡಿದಂತಾಗಿದೆ ಎಂದು ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ ಆರೋಪಿಸಿದ್ದಾರೆ.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 250 ಹಾಸಿಗೆಗಳ ಸಾಮರ್ಥ್ಯ ಹೊಂದಿರುವ ಆರು ಮಹಡಿಗಳ ನೂತನ ಜಿಲ್ಲಾಸ್ಪತ್ರೆ ಕಟ್ಟಡವನ್ನು ಮೂಲ ವಿಸ್ತೃತ ಯೋಜನಾ ವರದಿಯ ಪ್ರಕಾರ ಸಜ್ಜುಗೊಳಿಸದೆ, ರಾಜ್ಯದ ಇತರ ಜಿಲ್ಲಾಸ್ಪತ್ರೆಗಳಿಗೆ ಸಮಾನವಾದ ಸೌಲಭ್ಯಗಳನ್ನು ಕಲ್ಪಿಸದೆ ತರಾತುರಿಯಲ್ಲಿ ಸ್ಥಳಾಂತರಕ್ಕೆ ಮುಂದಾಗಿರುವುದು ಖಂಡನೀಯ ಎಂದರು.
ನೂತನ ಜಿಲ್ಲಾಸ್ಪತ್ರೆಗೆ ಅಗತ್ಯವಿರುವ ವೈದ್ಯರು, ಶುಶ್ರೂಷಕರು, ತಾಂತ್ರಿಕ ಸಿಬ್ಬಂದಿ ಹಾಗೂ ಇತರ ಸಿಬ್ಬಂದಿಗಳ ಹುದ್ದೆಗಳನ್ನು ಇನ್ನೂ ಮಂಜೂರು ಮಾಡಿಲ್ಲ. ಸ್ಕ್ಯಾನಿಂಗ್, ಎಕ್ಸ್ರೇ ಸೇರಿದಂತೆ ಅಗತ್ಯ ವೈದ್ಯಕೀಯ ಯಂತ್ರೋಪಕರಣಗಳು ಹಾಗೂ ಪೀಠೋಪಕರಣಗಳನ್ನು ಒದಗಿಸಿಲ್ಲ ಎಂದು ದೂರಿದರು.
ಇದಲ್ಲದೆ, ಆಸ್ಪತ್ರೆಯ ಕಾರ್ಯನಿರ್ವಹಣೆಗೆ ಅಗತ್ಯವಿರುವ ಕಂಪ್ಯೂಟರ್ಗಳು ಮತ್ತು ಪ್ರಿಂಟರ್ಗಳ ವ್ಯವಸ್ಥೆಯೂ ಆಗಿಲ್ಲ. ಆರು ಮಹಡಿಗಳ ಕಟ್ಟಡವನ್ನು ಸ್ವಚ್ಛಗೊಳಿಸಲು ಬೇಕಾದ ಸ್ವಚ್ಛತಾ ಸಿಬ್ಬಂದಿ ಹಾಗೂ ಅಗತ್ಯ ಪರಿಕರಗಳನ್ನೂ ಒದಗಿಸಿಲ್ಲ ಎಂದು ಅವರು ಆರೋಪಿಸಿದರು.
ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸಲು ಅಗತ್ಯವಿರುವ ಎಲ್ಲ ಮೂಲಸೌಕರ್ಯಗಳನ್ನು ಕಲ್ಪಿಸಿದ ಬಳಿಕವೇ ಆಸ್ಪತ್ರೆಯನ್ನು ಸ್ಥಳಾಂತರಿಸಬೇಕು ಎಂದು ಶಾಸಕ ಯಶ್ಪಾಲ್ ಎ. ಸುವರ್ಣ ಆಗ್ರಹಿಸಿದ್ದಾರೆ.
ಕರ್ನಾಟಕದಲ್ಲಿ ನಿಷೇಧಕ್ಕೊಳಗಾಗಿರುವ ಕೇರಳ ರಾಜ್ಯದ ಲಾಟರಿ ಟಿಕೆಟ್ಗಳನ್ನು ಅಕ್ರಮವಾಗಿ ತಂದು ಪುತ್ತೂರಿನಲ್ಲಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ ಜಾಲದ ವಿರುದ್ಧ…
ರಾಷ್ಟ್ರೀಯ ಹೆದ್ದಾರಿ 275ರ ಸಂಟ್ಯಾರ್ ಸಮೀಪ ಲಾರಿ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಡಿಕ್ಕಿಯ ರಭಸಕ್ಕೆ…
ನಾವೂರು ಗ್ರಾಮದಲ್ಲಿರುವ ಡಾ. ಪ್ರದೀಪ್ ಅವರ ಆರೋಗ್ಯ ಕ್ಲಿನಿಕ್ಗೆ ಡೀಸೆಲ್ ಸುರಿದು ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸರು…
ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರ ಹಾಗೂ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ…
ಬಾಂಗ್ಲಾದೇಶದ ಢಾಕಾದಲ್ಲಿರುವ ಜಗನ್ನಾಥ ವಿಶ್ವವಿದ್ಯಾಲಯದ ಆವರಣದಲ್ಲಿ ದುರ್ಗಾಪೂಜೆಯ ಸಂದರ್ಭದಲ್ಲಿ ಗೋಮಾಂಸದ ಖಿಚಡಿ ತಯಾರಿಸುವ ವಿಚಾರವಾಗಿ ವಿವಾದ ಉಂಟಾಗಿದೆ. ದೇವಸ್ಥಾನ ಹಾಗೂ…
ಮೂಡಪಡುಕೋಡಿ ಗ್ರಾಮದ ಸೇವಾ ಎಂಬಲ್ಲಿ ಸಿಡಿಲು ಬಡಿದು ಮನೆಯೊಂದಕ್ಕೆ ಭಾಗಶಃ ಹಾನಿಯಾದ ಘಟನೆ ನಡೆದಿದೆ. ಸೇವಾ ನಿವಾಸಿ ಜೋಹರ ಕೋಂ.…