ಸುಮಾರು ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ 2007ರಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳದ ಮಂಚಿ ನಿವಾಸಿ ಇರ್ಷಾದ್ ಅಲಿಯಾಸ್ ಮಹಮ್ಮದ್ ಇರ್ಷಾದ್ ಬಂಧಿತ ಆರೋಪಿ.
ಅಕ್ಟೋಬರ್ 21ರಂದು ಬಂಟ್ವಾಳ ನಗರ ಪೊಲೀಸ್ ಠಾಣೆಯ ಎಎಸ್‌ಐ ಸುಜು ಹಾಗೂ ಸಿಬ್ಬಂದಿಗಳಾದ ಜಗದೀಶ್ ಮತ್ತು ಮಂಜುನಾಥ್ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಬಳಿಕ ಆತನ ಪಾಸ್‌ಪೋರ್ಟ್ ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಪರಿವಾರ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್‌ನ ರಜತ ಮಹೋತ್ಸವದ ಸಂಭ್ರಮ ಹಾಗೂ ನೂತನ ಪ್ರಧಾನ ಕಚೇರಿಯ ಉದ್ಘಾಟನಾ ಸಮಾರಂಭ ಅಕ್ಟೋಬರ್…
ಕರ್ನಾಟಕ ರಾಜ್ಯ ಹಿಂದಿ ಭಾಷಾ ಬೋಧಕರ ಸಂಘ, ಬೆಂಗಳೂರು ಹಾಗೂ ಉಡುಪಿ ಜಿಲ್ಲಾ ಹಿಂದಿ ಭಾಷಾ ಬೋಧಕರ ಸಂಘದ ಸಹಯೋಗದಲ್ಲಿ…
ಕಾರ್ಕಳ: ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಅಂಗಸAಸ್ಥೆಯಾದ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಸಾಂಸ್ಕೃತಿಕ ಸಂಘವಾದ ಕಲಾಸಂಗಮವು…
ಅಗತ್ಯ ಮೂಲಸೌಕರ್ಯ, ವೈದ್ಯಕೀಯ ಉಪಕರಣಗಳು ಹಾಗೂ ವೈದ್ಯರು ಮತ್ತು ಸಿಬ್ಬಂದಿಗಳ ನೇಮಕಾತಿ ಇಲ್ಲದೆ ಅಜ್ಜರಕಾಡಿನ ನೂತನ ಜಿಲ್ಲಾಸ್ಪತ್ರೆ ಕಟ್ಟಡಕ್ಕೆ ತಾಲೂಕು…
ಕರ್ನಾಟಕದಲ್ಲಿ ನಿಷೇಧಕ್ಕೊಳಗಾಗಿರುವ ಕೇರಳ ರಾಜ್ಯದ ಲಾಟರಿ ಟಿಕೆಟ್‌ಗಳನ್ನು ಅಕ್ರಮವಾಗಿ ತಂದು ಪುತ್ತೂರಿನಲ್ಲಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ ಜಾಲದ ವಿರುದ್ಧ…
ರಾಷ್ಟ್ರೀಯ ಹೆದ್ದಾರಿ 275ರ ಸಂಟ್ಯಾರ್ ಸಮೀಪ ಲಾರಿ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಡಿಕ್ಕಿಯ ರಭಸಕ್ಕೆ…