ಮಂಗಳೂರು:
ಪಾಲಡ್ಕ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವರ್ಣಬೆಟ್ಟುವಿನ ಪೊಸಲಾಯಿ ಕೆಳಗಿನ ಮನೆಯಲ್ಲಿ ವಿದ್ಯುತ್ ಶಾಕ್ ತಗುಲಿ ತಾಯಿ ಮರ್ಸಿ ಮಸ್ಕರೇನಸ್ (45) ಮತ್ತು ಮಗ ಶೋನ್ ಮಸ್ಕರೇನಸ್ (18) ಮೃತಪಟ್ಟಿದ್ದಾರೆ.
ಬುಧವಾರ ಸಂಜೆ ಘಟನೆ ಸಂಭವಿಸಿರಬಹುದು ಎಂದು ಸ್ಥಳೀಯರು ತಿಳಿಸಿದ್ದಾರೆ. ಗುರುವಾರ ಬೆಳಗ್ಗೆ ಘಟನೆ ಬೆಳಕಿಗೆ ಬಂದಿದೆ. ತೋಟದ ಕೆಲಸಕ್ಕೆ ಕಾರ್ಮಿಕ ಸುಂದರ ಪೂಜಾರಿ ಸ್ಥಳಕ್ಕೆ ಬಂದಾಗ ದುರಂತ ಗಮನಕ್ಕೆ ಬಂದಿದೆ.
ಮೂಡುಬಿದಿರೆಯ ಹೋಲಿ ರೋಸರಿ ಪಿಯು ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಯಾಗಿದ್ದ ಶೋನ್ ಸ್ನಾನ ಮಾಡಿ ಬಂದ ಬಳಿಕ ಮನೆಯ ಹೊರಭಾಗದಲ್ಲಿದ್ದ ತಂತಿಗೆ ಒದ್ದೆ ಬಟ್ಟೆಗಳನ್ನು ಒಣಗಿಸಲು ಹಾಕುವ ಸಂದರ್ಭ ವಿದ್ಯುತ್ ಶಾಕ್ ತಗುಲಿರಬಹುದು ಎಂದು ಶಂಕಿಸಲಾಗಿದೆ. ಮಗನನ್ನು ರಕ್ಷಿಸಲು ಧಾವಿಸಿದ ತಾಯಿಗೂ ವಿದ್ಯುತ್ ಪ್ರವಹಿಸಿ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಹೆಂಚಿನ ಮನೆಗೆ ಮರದ ಬದಲಾಗಿ ಕಬ್ಬಿಣದ ಪಕ್ಕಾಸು ಅಳವಡಿಸಲಾಗಿತ್ತು. ವಿದ್ಯುತ್ ಕಂಬದಿಂದ ಕಬ್ಬಿಣದ ಪಕ್ಕಾಸಿಗೆ ನೇರ ಸಂಪರ್ಕ ಕಲ್ಪಿಸಲಾಗಿತ್ತು ಎನ್ನಲಾಗಿದೆ. ವಿದ್ಯುತ್ ತಂತಿಯ ಸಂಪರ್ಕದಿಂದ ಕಬ್ಬಿಣದ ಭಾಗಕ್ಕೆ ವಿದ್ಯುತ್ ಪ್ರವಹಿಸಿ, ಬಟ್ಟೆ ಒಣಗಿಸಲು ಹಾಕುವ ವೇಳೆ ಶೋನ್‌ಗೆ ವಿದ್ಯುತ್ ಶಾಕ್ ತಗುಲಿರಬಹುದು ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.
ಮರ್ಸಿ ಅವರ ಪತಿ ಸೈಮನ್ ಮಸ್ಕರೇನಸ್ 15 ವಷರ್ಗಳ ಹಿಂದೆ ಮೃತಪಟ್ಟಿದ್ದರು. ತಾಯಿ ಮತ್ತು ಮಗ ಮನೆಯಲ್ಲಿ ವಾಸವಿದ್ದು, ಕೃಷಿ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು.
ಉಡುಪಿ ಮೊಬೈಲ್ ರಿಟೇಲರ್ಸ್ ಅಸೋಸಿಯೇಷನ್ ಆಶ್ರಯದಲ್ಲಿ ಅಖಿಲ ಭಾರತ ಮೊಬೈಲ್ ರಿಟೇಲರ್ಸ್ ಅಸೋಸಿಯೇಷನ್‌ನ ರಾಜ್ಯಮಟ್ಟದ ರಿಟೇಲರ್ಸ್ ಸಮಾವೇಶ ಹಾಗೂ ಸಂಘಟನೆಯ…
ಕುಳಾಯಿಯ ರಾಯನ್ ಇಂಟರ್‌ನ್ಯಾಷನಲ್ ಶಾಲೆಯ ಬಸ್‌ಗೆ ಖಾಸಗಿ ಟೂರಿಸ್ಟ್ ಬಸ್ ಹಿಂದಿನಿಂದ ಢಿಕ್ಕಿ ಹೊಡೆದ ಪರಿಣಾಮ 13 ವಿದ್ಯಾರ್ಥಿಗಳು ಗಾಯಗೊಂಡ…
ಬನ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪಡ್ನೂರು ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಗ್ರಾಮ ಸ್ವರಾಜ್ಯ ಅಭಿಯಾನದ ಅಂಗವಾಗಿ ‘ಸಮುದಾಯದತ್ತ ಸಾಂತ್ವನ ಸಂವಾದ’…
ಎಸ್‌ಐಆರ್ ವಿರುದ್ಧ ದೇಶವ್ಯಾಪಿ ನಡೆಯುತ್ತಿರುವ ‘ಪ್ರಜಾಪ್ರಭುತ್ವ ಮರಳಿ ಪಡೆಯೋಣ, ಅರ್ಹ ಮತದಾರರ ಹಕ್ಕುಗಳನ್ನು ರಕ್ಷಿಸೋಣ’ ಹೋರಾಟದ ಭಾಗವಾಗಿ ಶುಕ್ರವಾರ ನಗರದ…
ನಗರದ ಸುಲ್ತಾನ್ ಬತ್ತೇರಿಯ ಎಡ್ಜ್ ವಾಟರ್‌ನಲ್ಲಿ ಅಕ್ಟೋಬರ್ 18ರಂದು ನವರಾತ್ರಿ ಪ್ರಯುಕ್ತ ನಡೆದ ದಾಂಡಿಯಾ ಕಾರ್ಯಕ್ರಮದ ವಿರುದ್ಧ ದುರ್ಗಾವಾಹಿನಿ ವತಿಯಿಂದ…
ಪರಿವಾರ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್‌ನ ರಜತ ಮಹೋತ್ಸವದ ಸಂಭ್ರಮ ಹಾಗೂ ನೂತನ ಪ್ರಧಾನ ಕಚೇರಿಯ ಉದ್ಘಾಟನಾ ಸಮಾರಂಭ ಅಕ್ಟೋಬರ್…