ಕರಾವಳಿ

ಮಂಗಳೂರು: ಎಸ್‌ಐಆರ್ ವಿರುದ್ಧ ಮಂಗಳೂರಿನಲ್ಲಿ ‘ಜಂತರ್ ಮಂತರ್’ ಧರಣಿ…!

ಎಸ್‌ಐಆರ್ ವಿರುದ್ಧ ದೇಶವ್ಯಾಪಿ ನಡೆಯುತ್ತಿರುವ ‘ಪ್ರಜಾಪ್ರಭುತ್ವ ಮರಳಿ ಪಡೆಯೋಣ, ಅರ್ಹ ಮತದಾರರ ಹಕ್ಕುಗಳನ್ನು ರಕ್ಷಿಸೋಣ’ ಹೋರಾಟದ ಭಾಗವಾಗಿ ಶುಕ್ರವಾರ ನಗರದ ಕ್ಲಾಕ್ ಟವರ್ ಬಳಿ ‘ಜಂತರ್ ಮಂತರ್’ ಹೆಸರಿನಲ್ಲಿ ಧರಣಿ ಸತ್ಯಾಗ್ರಹ ನಡೆಯಿತು.

ಧರಣಿಯನ್ನುದ್ದೇಶಿಸಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಸಂವಿಧಾನದ ರಕ್ಷಕರಾಗಿರುವ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಹಾಗೂ ಚುನಾವಣಾ ಆಯೋಗದ ಆಯುಕ್ತರು ಪ್ರಧಾನಿ ಮತ್ತು ಗೃಹ ಸಚಿವರಿಗೆ ತಲೆಬಾಗುತ್ತಿರುವುದು ದುರಂತದ ಸಂಗತಿ ಎಂದು ಟೀಕಿಸಿದರು. ಇಂತಹ ಸಂದರ್ಭದಲ್ಲಿ ಸಂವಿಧಾನದ ರಕ್ಷಕರಾಗುವ ಜವಾಬ್ದಾರಿ ನಮ್ಮ ಮೇಲಿದೆ. ಆದ್ದರಿಂದ ಎಸ್‌ಐಆರ್ ವಿರುದ್ಧದ ಹೋರಾಟವನ್ನು ಮುಂದುವರಿಸಬೇಕು ಎಂದು ಕರೆ ನೀಡಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಪ್ರಜಾಪ್ರಭುತ್ವ ಉಳಿಸಿ ಆಂದೋಲನದ ದಕ್ಷಿಣ ಕನ್ನಡ ಜಿಲ್ಲಾ ಸಂಚಾಲಕ ಹಾಗೂ ನ್ಯಾಯವಾದಿ ವಿನೋದ್ ಮಸ್ಕರೇನ್ಹಸ್, ಎಸ್‌ಐಆರ್ ವಿರುದ್ಧ ಪ್ರತಿಭಟಿಸಲು ದೆಹಲಿಯ ಜಂತರ್ ಮಂತರ್‌ಗೆ ತೆರಳುವವರನ್ನು ತಡೆಯಲಾಗುತ್ತಿದೆ ಎಂದು ಆರೋಪಿಸಿದರು. ಹೀಗಾಗಿ ಇದೀಗ ಇಡೀ ದೇಶವೇ ಜಂತರ್ ಮಂತರ್ ಆಗುತ್ತಿದೆ ಎಂದು ಹೇಳಿದರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಉಡುಪಿ: ಅ.24ರಂದು ಉಡುಪಿಯಲ್ಲಿ ರಾಜ್ಯಮಟ್ಟದ ಮೊಬೈಲ್ ರಿಟೇಲರ್ಸ್ ಸಮಾವೇಶ

ಉಡುಪಿ ಮೊಬೈಲ್ ರಿಟೇಲರ್ಸ್ ಅಸೋಸಿಯೇಷನ್ ಆಶ್ರಯದಲ್ಲಿ ಅಖಿಲ ಭಾರತ ಮೊಬೈಲ್ ರಿಟೇಲರ್ಸ್ ಅಸೋಸಿಯೇಷನ್‌ನ ರಾಜ್ಯಮಟ್ಟದ ರಿಟೇಲರ್ಸ್ ಸಮಾವೇಶ ಹಾಗೂ ಸಂಘಟನೆಯ…

2 hours ago

ಸುರತ್ಕಲ್: ಸುರತ್ಕಲ್‌ನಲ್ಲಿ ಶಾಲಾ ಬಸ್‌ಗೆ ಟೂರಿಸ್ಟ್ ಬಸ್ ಢಿಕ್ಕಿ: 13 ವಿದ್ಯಾರ್ಥಿಗಳಿಗೆ ಗಾಯ

ಕುಳಾಯಿಯ ರಾಯನ್ ಇಂಟರ್‌ನ್ಯಾಷನಲ್ ಶಾಲೆಯ ಬಸ್‌ಗೆ ಖಾಸಗಿ ಟೂರಿಸ್ಟ್ ಬಸ್ ಹಿಂದಿನಿಂದ ಢಿಕ್ಕಿ ಹೊಡೆದ ಪರಿಣಾಮ 13 ವಿದ್ಯಾರ್ಥಿಗಳು ಗಾಯಗೊಂಡ…

2 hours ago

ಪುತ್ತೂರು: ಪಡ್ನೂರು ಅಂಗನವಾಡಿಯಲ್ಲಿ ಗ್ರಾಮ ಸ್ವರಾಜ್ಯ ಅಭಿಯಾನ, ಸಂವಾದ ಕಾರ್ಯಕ್ರಮ

ಬನ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪಡ್ನೂರು ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಗ್ರಾಮ ಸ್ವರಾಜ್ಯ ಅಭಿಯಾನದ ಅಂಗವಾಗಿ ‘ಸಮುದಾಯದತ್ತ ಸಾಂತ್ವನ ಸಂವಾದ’…

2 hours ago

ಮಂಗಳೂರು: ಸುಲ್ತಾನ್ ಬತ್ತೇರಿಯಲ್ಲಿ ದಾಂಡಿಯಾ ಕಾರ್ಯಕ್ರಮದ ವಿರುದ್ಧ ದೂರು

ನಗರದ ಸುಲ್ತಾನ್ ಬತ್ತೇರಿಯ ಎಡ್ಜ್ ವಾಟರ್‌ನಲ್ಲಿ ಅಕ್ಟೋಬರ್ 18ರಂದು ನವರಾತ್ರಿ ಪ್ರಯುಕ್ತ ನಡೆದ ದಾಂಡಿಯಾ ಕಾರ್ಯಕ್ರಮದ ವಿರುದ್ಧ ದುರ್ಗಾವಾಹಿನಿ ವತಿಯಿಂದ…

2 hours ago

ಮಂಗಳೂರಿನಲ್ಲಿ ವಿದ್ಯುತ್ ಶಾಕ್‌ಗೆ ತಾಯಿ ಮಗ ಬಳಿ…!

ಮಂಗಳೂರು: ಪಾಲಡ್ಕ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವರ್ಣಬೆಟ್ಟುವಿನ ಪೊಸಲಾಯಿ ಕೆಳಗಿನ ಮನೆಯಲ್ಲಿ ವಿದ್ಯುತ್ ಶಾಕ್ ತಗುಲಿ ತಾಯಿ ಮರ್ಸಿ ಮಸ್ಕರೇನಸ್…

22 hours ago

ಉಡುಪಿ: ಅ. 24ರಂದು ಪರಿವಾರ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ರಜತ ಮಹೋತ್ಸವ

ಪರಿವಾರ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್‌ನ ರಜತ ಮಹೋತ್ಸವದ ಸಂಭ್ರಮ ಹಾಗೂ ನೂತನ ಪ್ರಧಾನ ಕಚೇರಿಯ ಉದ್ಘಾಟನಾ ಸಮಾರಂಭ ಅಕ್ಟೋಬರ್…

1 day ago