ರಾಷ್ಟ್ರೀಯ ಹೆದ್ದಾರಿ 66ರ ಕೋಟ ಜಂಕ್ಷನ್ನಲ್ಲಿ ಮುಂಜಾನೆ ಸೈಕಲ್ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸೈಕಲ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಕಾರು ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತರನ್ನು ಕೋಟ ಮಣೂರು ನಿವಾಸಿ, ಆರ್ಎಸ್ಎಸ್ ಮುಖಂಡ ಗುರುದಾಸ್ ಶೆಣೈ ಎಂದು ಗುರುತಿಸಲಾಗಿದೆ. ಅವರು ಕೋಟ ಜಂಕ್ಷನ್ನಲ್ಲಿ ಸೈಕಲ್ನಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಉಡುಪಿ ಕಡೆಯಿಂದ ಕುಂದಾಪುರದತ್ತ ವೇಗವಾಗಿ ಬರುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಡಿಕ್ಕಿಯ ರಭಸಕ್ಕೆ ಕಾರು ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಸೈಕಲ್ ಸವಾರ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರು ಚಾಲಕ ಕೋಟೇಶ್ವರದ ಬೀಜಾಡಿ ನಿವಾಸಿ ಪ್ರದೀಪ್ ಕಾಂಚನ್ ಅವರಿಗೂ ಗಂಭೀರ ಗಾಯಗಳಾಗಿವೆ.
ಅಪಘಾತದ ಬಳಿಕ ಸ್ಥಳಕ್ಕೆ ಧಾವಿಸಿದ ಕೋಟದ ಜೀವನ್ ಮಿತ್ರ ನಾಗರಾಜ್ ಪುತ್ರನ್ ಅವರು ಗಾಯಾಳು ಕಾರು ಚಾಲಕನನ್ನು ಆಂಬುಲೆನ್ಸ್ ಮೂಲಕ ಬ್ರಹ್ಮಾವರದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲು ನೆರವಾದರು. ಕೋಟ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಜಿಲ್ಲೆಯ ಕುಂದಾಪುರ ತಾಲೂಕಿನ ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಹೊಸಾಡು ಗ್ರಾಮದ ಕೆರೆಯಲ್ಲಿ ಮುಳುಗಿ ಇಬ್ಬರು ಶಾಲಾ ವಿದ್ಯಾರ್ಥಿನಿಯರು ಮೃತಪಟ್ಟಿರುವ…
ಕುಂದಾಪುರ ತಾಲೂಕಿನ ಶಾನಾಡಿ ಮದಗದ ಕೊರಗ ಕಾಲೋನಿಯಲ್ಲಿ ವಿಕಲಚೇತನ ಮಗಳನ್ನು ಕೊಲೆಗೈದ ಬಳಿಕ ತಾಯಿಯೂ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ…
ಸಜಿಪಮುನ್ನೂರು ಗ್ರಾಮದ ಮಾರ್ನಬೈಲ್–ಕಾನ್ಸಾಲೆ ಸಂಪರ್ಕ ರಸ್ತೆಯನ್ನು ₹20 ಲಕ್ಷ ಅನುದಾನದಲ್ಲಿ ಅಭಿವೃದ್ಧಿಪಡಿಸಲಾಗಿದ್ದು, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು…
ಉಡುಪಿ ಮೊಬೈಲ್ ರಿಟೇಲರ್ಸ್ ಅಸೋಸಿಯೇಷನ್ ಆಶ್ರಯದಲ್ಲಿ ಅಖಿಲ ಭಾರತ ಮೊಬೈಲ್ ರಿಟೇಲರ್ಸ್ ಅಸೋಸಿಯೇಷನ್ನ ರಾಜ್ಯಮಟ್ಟದ ರಿಟೇಲರ್ಸ್ ಸಮಾವೇಶ ಹಾಗೂ ಸಂಘಟನೆಯ…
ಕುಳಾಯಿಯ ರಾಯನ್ ಇಂಟರ್ನ್ಯಾಷನಲ್ ಶಾಲೆಯ ಬಸ್ಗೆ ಖಾಸಗಿ ಟೂರಿಸ್ಟ್ ಬಸ್ ಹಿಂದಿನಿಂದ ಢಿಕ್ಕಿ ಹೊಡೆದ ಪರಿಣಾಮ 13 ವಿದ್ಯಾರ್ಥಿಗಳು ಗಾಯಗೊಂಡ…
ಬನ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪಡ್ನೂರು ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಗ್ರಾಮ ಸ್ವರಾಜ್ಯ ಅಭಿಯಾನದ ಅಂಗವಾಗಿ ‘ಸಮುದಾಯದತ್ತ ಸಾಂತ್ವನ ಸಂವಾದ’…