ಜಿಲ್ಲೆಯ ಕುಂದಾಪುರ ತಾಲೂಕಿನ ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಹೊಸಾಡು ಗ್ರಾಮದ ಕೆರೆಯಲ್ಲಿ ಮುಳುಗಿ ಇಬ್ಬರು ಶಾಲಾ ವಿದ್ಯಾರ್ಥಿನಿಯರು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಬಟ್ಟೆ ಒಗೆಯಲು ಕೆರೆಗೆ ತೆರಳಿದ್ದ ಬಾಲಕಿಯರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಮೃತರನ್ನು ಸಮೀಪದ ಸರ್ಕಾರಿ ಶಾಲೆಯ 7ನೇ ತರಗತಿಯ ವಿದ್ಯಾರ್ಥಿನಿಯರಾದ ವೈಶಾಲಿ ಹಾಗೂ ಸುನಿತಾ ಎಂದು ಗುರುತಿಸಲಾಗಿದೆ. ಇವರು ಮಲ್ಲಿಕಟ್ಟೆ ಹೆದ್ದಾರಿ ಪಕ್ಕದ ಜೋಪಡಿಯಲ್ಲಿ ವಾಸಿಸುತ್ತಿದ್ದು, ಮೂಲತಃ ಹಾವೇರಿ ಜಿಲ್ಲೆಯವರು ಎಂದು ತಿಳಿದುಬಂದಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಗಂಗೊಳ್ಳಿ ಪೊಲೀಸರು, ಕುಂದಾಪುರ ಅಗ್ನಿಶಾಮಕ ದಳ, ಗಂಗೊಳ್ಳಿ ದಿನೇಶ್ ಖಾರ್ವಿ ತಂಡ ಹಾಗೂ ಟೀಮ್ ಎಚ್‌ಐ ತುರ್ತು ಸ್ಪಂದನಾ ತಂಡ ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ನಡೆಸಿದವು. ಘಟನಾ ಸ್ಥಳಕ್ಕೆ ಆಂಬುಲೆನ್ಸ್ ಹಾಗೂ ರಕ್ಷಣಾ ತಂಡಗಳು ತಲುಪಲು ಹರಸಾಹಸ ಪಡಬೇಕಾಯಿತು. ಸ್ಥಳೀಯರೂ ಕಾರ್ಯಾಚರಣೆಗೆ ಸಹಕರಿಸಿದರು. ದಿನೇಶ್ ಕರಿಯ ಅವರು ಬಾಲಕಿಯರಿಬ್ಬರ ಮೃತದೇಹಗಳನ್ನು ಕೆರೆಯಿಂದ ಹೊರತೆಗೆದರು.
ಮೃತದೇಹಗಳನ್ನು ಕುಂದಾಪುರ ಸರ್ಕಾರಿ ಆಸ್ಪತ್ರೆಯ ಶವಾಗಾರದ ಶೀತಲೀಕರಣ ಘಟಕಕ್ಕೆ ರವಾನಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಕುಂದಾಪುರ ತಾಲೂಕಿನ ಶಾನಾಡಿ ಮದಗದ ಕೊರಗ ಕಾಲೋನಿಯಲ್ಲಿ ವಿಕಲಚೇತನ ಮಗಳನ್ನು ಕೊಲೆಗೈದ ಬಳಿಕ ತಾಯಿಯೂ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ…
ರಾಷ್ಟ್ರೀಯ ಹೆದ್ದಾರಿ 66ರ ಕೋಟ ಜಂಕ್ಷನ್‌ನಲ್ಲಿ ಮುಂಜಾನೆ ಸೈಕಲ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸೈಕಲ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು,…
ಸಜಿಪಮುನ್ನೂರು ಗ್ರಾಮದ ಮಾರ್ನಬೈಲ್–ಕಾನ್ಸಾಲೆ ಸಂಪರ್ಕ ರಸ್ತೆಯನ್ನು ₹20 ಲಕ್ಷ ಅನುದಾನದಲ್ಲಿ ಅಭಿವೃದ್ಧಿಪಡಿಸಲಾಗಿದ್ದು, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು…
ಉಡುಪಿ ಮೊಬೈಲ್ ರಿಟೇಲರ್ಸ್ ಅಸೋಸಿಯೇಷನ್ ಆಶ್ರಯದಲ್ಲಿ ಅಖಿಲ ಭಾರತ ಮೊಬೈಲ್ ರಿಟೇಲರ್ಸ್ ಅಸೋಸಿಯೇಷನ್‌ನ ರಾಜ್ಯಮಟ್ಟದ ರಿಟೇಲರ್ಸ್ ಸಮಾವೇಶ ಹಾಗೂ ಸಂಘಟನೆಯ…
ಕುಳಾಯಿಯ ರಾಯನ್ ಇಂಟರ್‌ನ್ಯಾಷನಲ್ ಶಾಲೆಯ ಬಸ್‌ಗೆ ಖಾಸಗಿ ಟೂರಿಸ್ಟ್ ಬಸ್ ಹಿಂದಿನಿಂದ ಢಿಕ್ಕಿ ಹೊಡೆದ ಪರಿಣಾಮ 13 ವಿದ್ಯಾರ್ಥಿಗಳು ಗಾಯಗೊಂಡ…
ಬನ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪಡ್ನೂರು ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಗ್ರಾಮ ಸ್ವರಾಜ್ಯ ಅಭಿಯಾನದ ಅಂಗವಾಗಿ ‘ಸಮುದಾಯದತ್ತ ಸಾಂತ್ವನ ಸಂವಾದ’…