ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಗಾಜಿನ ಬ್ಲಾಕ್ ಇಳಿಸುವ ವೇಳೆ ಅವಘಡ: ಸಾಮಾಜಿಕ ಕಾರ್ಯಕರ್ತ ಸುನಿಲ್ ಬೈಲಕೆರೆ ಸಾವು

ನಿಟ್ಟೂರಿನ ಶ್ರೀದೇವಿ ಗ್ಲಾಸ್ ಫ್ಯಾಕ್ಟರಿಯಲ್ಲಿ ಗಾಜಿನ ಬ್ಲಾಕ್‌ಗಳನ್ನು ಇಳಿಸುತ್ತಿದ್ದ ವೇಳೆ ಸಂಭವಿಸಿದ ಅವಘಡದಲ್ಲಿ ಸಾಮಾಜಿಕ ಕಾರ್ಯಕರ್ತ ಹಾಗೂ ರಿಕ್ಷಾ ಚಾಲಕ ಸುನಿಲ್ ಬೈಲಕೆರೆ ಮೃತಪಟ್ಟಿದ್ದಾರೆ.

ಉಡುಪಿ ಶ್ರೀಕೃಷ್ಣ ಮಠದ ಪರಿಸರದ ನಿವಾಸಿಯಾಗಿದ್ದ ಸುನಿಲ್ ಅವರು ಶಿರೂರು ಮಠದ ದಿವಂಗತ ಲಕ್ಷ್ಮೀವರ ತೀರ್ಥ ಶ್ರೀಪಾದರ ಆಪ್ತರಾಗಿದ್ದರು. ಶ್ರೀಗಳ ಕಾರು ಚಾಲಕರಾಗಿಯೂ ಸೇವೆ ಸಲ್ಲಿಸಿದ್ದರು. ಉಡುಪಿ ನಗರದಲ್ಲಿ ಯಾವುದೇ ಅನಾಹುತ ಸಂಭವಿಸಿದರೂ ಫಲಾಪೇಕ್ಷೆಯಿಲ್ಲದೆ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುತ್ತಿದ್ದ ಅವರು, ಸಾರ್ವಜನಿಕರ ನೆರವಿಗೆ ಸದಾ ಧಾವಿಸುತ್ತಿದ್ದರು.

ಕಲ್ಸಂಕ ಜಂಕ್ಷನ್‌ನಲ್ಲಿ ವಾಹನ ದಟ್ಟಣೆಯಿಂದ ಸಂಚಾರ ಅಸ್ತವ್ಯಸ್ತಗೊಂಡ ಸಂದರ್ಭ ಪೊಲೀಸರೊಂದಿಗೆ ಕೈಜೋಡಿಸಿ ಸುಗಮ ಸಂಚಾರಕ್ಕೆ ಸಹಕರಿಸುತ್ತಿದ್ದರು. ತಮ್ಮ ಸಾಮಾಜಿಕ ಕಳಕಳಿ ಹಾಗೂ ಸೇವಾ ಮನೋಭಾವದ ಮೂಲಕ ಸಾರ್ವಜನಿಕರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರು.

ಮೃತರು ಪತ್ನಿ, ಓರ್ವ ಪುತ್ರ ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಬಂಟ್ವಾಳದಲ್ಲಿ ಹೆಬ್ಬಾವಿನ ಆತಂಕ: ಬೆಕ್ಕನ್ನು ಹಿಡಿದು ಪೊದೆಯೊಳಗೆ ಎಳೆದೊಯ್ದ ಬೃಹತ್ ಹೆಬ್ಬಾವು?

ಮುಂಬೈ: ಟೈಗರ್ ಶ್ರಾಫ್‌ಗೂ ಮುನ್ನ ಆಮಿರ್, ಸಲ್ಮಾನ್ ಖಾನ್ ನಿವಾಸಗಳ ಮೇಲೆ ನಿಗಾ?

ಬಂಟ್ವಾಳ: ಕಿಟಕಿಗೆ ಕಟ್ಟಿದ್ದ ಹಗ್ಗ ಕುತ್ತಿಗೆಗೆ ಸಿಲುಕಿ 9 ವರ್ಷದ ಬಾಲಕ ಸಾವು…!

ಬಂಟ್ವಾಳ: ಬಂಟ್ವಾಳ ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿ ರಮೇಶ್ ನಾಯ್ಕ್ ಮೆಲ್ಕಾರ್ ಆಯ್ಕೆ…!

ಉಡುಪಿ: ಎಸ್ಐಆರ್ ವಿರುದ್ಧ ಬ್ರಹ್ಮಾವರದಲ್ಲಿ ಕಾಂಗ್ರೆಸ್ ಪ್ರತಿಭಟನೆ; ಪ್ರತಿಕೃತಿ ದಹಿಸಿ ಆಕ್ರೋಶ

ಪುತ್ತೂರು: ಜಿಲ್ಲಾ ಮಟ್ಟದ ಈಜು ಸ್ಪರ್ಧೆ: ಸಿಯಾ ಸುಧೀರ್‌ಗೆ ಕಂಚಿನ ಪದಕ

ಪುತ್ತೂರು: ದಿ. ಸರಾಫ್ ಮುಳಿಯ ಶ್ಯಾಮ್ ಭಟ್ ಅವರಿಗೆ ‘ಸಾರ್ಥಕ’ ನಾದ-ನುಡಿ ನಮನ

ಉಡುಪಿ: ಕೆರೆಯಲ್ಲಿ ಮುಳುಗಿ 7ನೇ ತರಗತಿಯ ಇಬ್ಬರು ವಿದ್ಯಾರ್ಥಿನಿಯರು ಸಾವು…!

ಉಡುಪಿ: ಶಾನಾಡಿ ಕೊರಗ ಕಾಲೋನಿಯಲ್ಲಿ ದುರಂತ: ಮಗಳನ್ನು ಕೊಂದು ತಾಯಿ ಆತ್ಮಹತ್ಯೆ…!

error: Content is protected !!