ನಿಟ್ಟೂರಿನ ಶ್ರೀದೇವಿ ಗ್ಲಾಸ್ ಫ್ಯಾಕ್ಟರಿಯಲ್ಲಿ ಗಾಜಿನ ಬ್ಲಾಕ್ಗಳನ್ನು ಇಳಿಸುತ್ತಿದ್ದ ವೇಳೆ ಸಂಭವಿಸಿದ ಅವಘಡದಲ್ಲಿ ಸಾಮಾಜಿಕ ಕಾರ್ಯಕರ್ತ ಹಾಗೂ ರಿಕ್ಷಾ ಚಾಲಕ ಸುನಿಲ್ ಬೈಲಕೆರೆ ಮೃತಪಟ್ಟಿದ್ದಾರೆ.
ಉಡುಪಿ ಶ್ರೀಕೃಷ್ಣ ಮಠದ ಪರಿಸರದ ನಿವಾಸಿಯಾಗಿದ್ದ ಸುನಿಲ್ ಅವರು ಶಿರೂರು ಮಠದ ದಿವಂಗತ ಲಕ್ಷ್ಮೀವರ ತೀರ್ಥ ಶ್ರೀಪಾದರ ಆಪ್ತರಾಗಿದ್ದರು. ಶ್ರೀಗಳ ಕಾರು ಚಾಲಕರಾಗಿಯೂ ಸೇವೆ ಸಲ್ಲಿಸಿದ್ದರು. ಉಡುಪಿ ನಗರದಲ್ಲಿ ಯಾವುದೇ ಅನಾಹುತ ಸಂಭವಿಸಿದರೂ ಫಲಾಪೇಕ್ಷೆಯಿಲ್ಲದೆ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುತ್ತಿದ್ದ ಅವರು, ಸಾರ್ವಜನಿಕರ ನೆರವಿಗೆ ಸದಾ ಧಾವಿಸುತ್ತಿದ್ದರು.
ಕಲ್ಸಂಕ ಜಂಕ್ಷನ್ನಲ್ಲಿ ವಾಹನ ದಟ್ಟಣೆಯಿಂದ ಸಂಚಾರ ಅಸ್ತವ್ಯಸ್ತಗೊಂಡ ಸಂದರ್ಭ ಪೊಲೀಸರೊಂದಿಗೆ ಕೈಜೋಡಿಸಿ ಸುಗಮ ಸಂಚಾರಕ್ಕೆ ಸಹಕರಿಸುತ್ತಿದ್ದರು. ತಮ್ಮ ಸಾಮಾಜಿಕ ಕಳಕಳಿ ಹಾಗೂ ಸೇವಾ ಮನೋಭಾವದ ಮೂಲಕ ಸಾರ್ವಜನಿಕರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರು.
ಮೃತರು ಪತ್ನಿ, ಓರ್ವ ಪುತ್ರ ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.
ತಾಲೂಕಿನ ಅಮ್ಟಾಡಿ ಗ್ರಾಮದ ಕಾಜಿಪಿಟ್ಲು ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಬೆಕ್ಕುಗಳು ಮತ್ತು ನಾಯಿಗಳು ನಾಪತ್ತೆಯಾಗುತ್ತಿರುವುದು ಸ್ಥಳೀಯ ನಿವಾಸಿಗಳಲ್ಲಿ ಆತಂಕ…
ಬಾಲಿವುಡ್ ನಟ ಟೈಗರ್ ಶ್ರಾಫ್ ಅವರ ಕಾರಿನ ಮೇಲಿನ ಗುಂಡಿನ ದಾಳಿ ಪ್ರಕರಣದ ತನಿಖೆ ವೇಳೆ, ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ನ…
ತಾಲೂಕಿನ ಕುಕ್ಕಿಪಾಡಿ ಗ್ರಾಮದ ಕೆಂತಲೆ ಎಂಬಲ್ಲಿ ಮನೆಯಲ್ಲಿ ಆಟವಾಡುತ್ತಿದ್ದ ಒಂಬತ್ತು ವರ್ಷದ ಬಾಲಕನೊಬ್ಬನ ಕುತ್ತಿಗೆಗೆ ಹಗ್ಗ ಸಿಲುಕಿ ಆಕಸ್ಮಿಕವಾಗಿ ಮೃತಪಟ್ಟ…
ಚುಟುಕು ಸಾಹಿತ್ಯ ಪರಿಷತ್ ಬಂಟ್ವಾಳ ತಾಲೂಕು ಘಟಕದ ಅಧ್ಯಕ್ಷರಾಗಿ ರಮೇಶ್ ನಾಯ್ಕ್ ಮೆಲ್ಕಾರ್ ಅವರನ್ನು ನೇಮಕ ಮಾಡಲಾಗಿದೆ. ಚುಟುಕು ಸಾಹಿತ್ಯದ…
ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ವಿರೋಧಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ…
ಮಂಗಳೂರಿನ ಶ್ರೀ ನಾರಾಯಣ ಗುರು ಪದವಿ ಪೂರ್ವ ಕಾಲೇಜಿನಲ್ಲಿ ಅಕ್ಟೋಬರ್ 9ರಂದು ನಡೆದ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ)…