ಮಂಗಳೂರಿನ ಶ್ರೀ ನಾರಾಯಣ ಗುರು ಪದವಿ ಪೂರ್ವ ಕಾಲೇಜಿನಲ್ಲಿ ಅಕ್ಟೋಬರ್ 9ರಂದು ನಡೆದ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಈಜು ಸ್ಪರ್ಧೆ 2026-27ರಲ್ಲಿ ಪುತ್ತೂರಿನ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಸಿಯಾ ಸುಧೀರ್ ಕಂಚಿನ ಪದಕ ಗೆದ್ದಿದ್ದಾರೆ.

ಸ್ಪರ್ಧೆಯ 100 ಮೀಟರ್ ಬ್ಯಾಕ್ಸ್ಟ್ರೋಕ್ ವಿಭಾಗದಲ್ಲಿ ಸಿಯಾ ಈ ಸಾಧನೆ ಮಾಡಿದ್ದಾರೆ. ಇವರು ಪುತ್ತೂರಿನ ನೆಲ್ಲಿಕಟ್ಟೆ ನಿವಾಸಿಗಳಾದ ಸುಧೀರ್ ಕುಮಾರ್ ಮತ್ತು ಪ್ರಮೀಳ ದಂಪತಿಯ ಪುತ್ರಿ.
ವಿದ್ಯಾರ್ಥಿನಿಯ ಸಾಧನೆಗೆ ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ರಾಜೇಶ್ ಮೂಲ್ಯ ಉಪಸ್ಥಿತರಿದ್ದರು.



