ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಎಸ್ಐಆರ್ ವಿರುದ್ಧ ಬ್ರಹ್ಮಾವರದಲ್ಲಿ ಕಾಂಗ್ರೆಸ್ ಪ್ರತಿಭಟನೆ; ಪ್ರತಿಕೃತಿ ದಹಿಸಿ ಆಕ್ರೋಶ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ವಿರೋಧಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸೋಮವಾರ ಬೃಹತ್ ಪ್ರತಿಭಟನೆ ಹಾಗೂ ಪಾದಯಾತ್ರೆ ನಡೆಯಿತು.

ಬ್ರಹ್ಮಾವರದ ಬಂಟರ ಭವನದಿಂದ ಆರಂಭವಾದ ಪಾದಯಾತ್ರೆ ಆಕಾಶವಾಣಿ ವೃತ್ತ, ಗಾಂಧಿ ಮೈದಾನ ಹಾಗೂ ಮಾರ್ಕೆಟ್ ರಸ್ತೆ ಮೂಲಕ ಬಸ್ ನಿಲ್ದಾಣದವರೆಗೆ ಸಾಗಿತು. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಜ್ಞಾನೇಶ್ ಕುಮಾರ್ ಅವರ ಅಣಕು ಶವಯಾತ್ರೆ ನಡೆಸಿ, ಬಳಿಕ ಪ್ರತಿಕೃತಿ ದಹಿಸಿದರು. ಕೇಂದ್ರ ಸರ್ಕಾರ ಹಾಗೂ ಚುನಾವಣಾ ಆಯೋಗದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್ ಕಾಂಚನ್, ಎಸ್ಐಆರ್ ಮೂಲಕ ಮಧ್ಯಮ ವರ್ಗದವರು, ಬಡವರು ಹಾಗೂ ಕಾರ್ಮಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದರು. ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿಯೂ ಸುಮಾರು 15 ಸಾವಿರ ಮಂದಿಯ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ ಎಂದು ದೂರಿದರು. ಗ್ರಾಮೀಣ ಪ್ರದೇಶಗಳ ಅನಕ್ಷರಸ್ಥರು ಹಾಗೂ ಆರ್ಥಿಕವಾಗಿ, ಸಾಮಾಜಿಕವಾಗಿ ಹಿಂದುಳಿದ ಜನರ ಮತದಾನದ ಹಕ್ಕಿಗೆ ಇದರಿಂದ ಧಕ್ಕೆಯಾಗುತ್ತಿದೆ ಎಂದು ಹೇಳಿದರು.

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸೋಲುವ ಭೀತಿಯಿಂದ ಬಿಜೆಪಿ ಚುನಾವಣಾ ಆಯೋಗವನ್ನು ದುರ್ಬಳಕೆ ಮಾಡಿಕೊಂಡು ಎಸ್ಐಆರ್ ಜಾರಿಗೊಳಿಸಿದೆ ಎಂದು ಕಾಂಚನ್ ಆರೋಪಿಸಿದರು. ಬಡವರು ಹಾಗೂ ಹಿಂದುಳಿದ ವರ್ಗಗಳ ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡುವುದು ಪ್ರಜಾಪ್ರಭುತ್ವಕ್ಕೆ ಮಾಡಿದ ದ್ರೋಹ ಎಂದು ಟೀಕಿಸಿದ ಅವರು, ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡದಿದ್ದರೆ ದೇಶಾದ್ಯಂತ ಹೋರಾಟ ತೀವ್ರಗೊಳಿಸುವುದಾಗಿ ಎಚ್ಚರಿಸಿದರು.

ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲ್ ಮಾತನಾಡಿದರು. ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಘವೇಂದ್ರ ಶೆಟ್ಟಿ ಕರ್ಜೆ, ಮುಖಂಡರಾದ ವೆರೋನಿಕಾ ಕರ್ನೇಲಿಯೋ, ಉದಯ್ ಆಚಾರ್, ಕುಮಾರ್, ಅಮೃತ್ ಶೆಣೈ ಸೇರಿದಂತೆ ಹಲವು ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *

ಬಂಟ್ವಾಳ: ಬಂಟ್ವಾಳದಲ್ಲಿ ಹೆಬ್ಬಾವಿನ ಆತಂಕ: ಬೆಕ್ಕನ್ನು ಹಿಡಿದು ಪೊದೆಯೊಳಗೆ ಎಳೆದೊಯ್ದ ಬೃಹತ್ ಹೆಬ್ಬಾವು?

ಮುಂಬೈ: ಟೈಗರ್ ಶ್ರಾಫ್‌ಗೂ ಮುನ್ನ ಆಮಿರ್, ಸಲ್ಮಾನ್ ಖಾನ್ ನಿವಾಸಗಳ ಮೇಲೆ ನಿಗಾ?

ಬಂಟ್ವಾಳ: ಕಿಟಕಿಗೆ ಕಟ್ಟಿದ್ದ ಹಗ್ಗ ಕುತ್ತಿಗೆಗೆ ಸಿಲುಕಿ 9 ವರ್ಷದ ಬಾಲಕ ಸಾವು…!

ಬಂಟ್ವಾಳ: ಬಂಟ್ವಾಳ ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿ ರಮೇಶ್ ನಾಯ್ಕ್ ಮೆಲ್ಕಾರ್ ಆಯ್ಕೆ…!

ಪುತ್ತೂರು: ಜಿಲ್ಲಾ ಮಟ್ಟದ ಈಜು ಸ್ಪರ್ಧೆ: ಸಿಯಾ ಸುಧೀರ್‌ಗೆ ಕಂಚಿನ ಪದಕ

ಉಡುಪಿ: ಗಾಜಿನ ಬ್ಲಾಕ್ ಇಳಿಸುವ ವೇಳೆ ಅವಘಡ: ಸಾಮಾಜಿಕ ಕಾರ್ಯಕರ್ತ ಸುನಿಲ್ ಬೈಲಕೆರೆ ಸಾವು

ಪುತ್ತೂರು: ದಿ. ಸರಾಫ್ ಮುಳಿಯ ಶ್ಯಾಮ್ ಭಟ್ ಅವರಿಗೆ ‘ಸಾರ್ಥಕ’ ನಾದ-ನುಡಿ ನಮನ

ಉಡುಪಿ: ಕೆರೆಯಲ್ಲಿ ಮುಳುಗಿ 7ನೇ ತರಗತಿಯ ಇಬ್ಬರು ವಿದ್ಯಾರ್ಥಿನಿಯರು ಸಾವು…!

ಉಡುಪಿ: ಶಾನಾಡಿ ಕೊರಗ ಕಾಲೋನಿಯಲ್ಲಿ ದುರಂತ: ಮಗಳನ್ನು ಕೊಂದು ತಾಯಿ ಆತ್ಮಹತ್ಯೆ…!

error: Content is protected !!