ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ವಿರೋಧಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸೋಮವಾರ ಬೃಹತ್ ಪ್ರತಿಭಟನೆ ಹಾಗೂ ಪಾದಯಾತ್ರೆ ನಡೆಯಿತು.
ಬ್ರಹ್ಮಾವರದ ಬಂಟರ ಭವನದಿಂದ ಆರಂಭವಾದ ಪಾದಯಾತ್ರೆ ಆಕಾಶವಾಣಿ ವೃತ್ತ, ಗಾಂಧಿ ಮೈದಾನ ಹಾಗೂ ಮಾರ್ಕೆಟ್ ರಸ್ತೆ ಮೂಲಕ ಬಸ್ ನಿಲ್ದಾಣದವರೆಗೆ ಸಾಗಿತು. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಜ್ಞಾನೇಶ್ ಕುಮಾರ್ ಅವರ ಅಣಕು ಶವಯಾತ್ರೆ ನಡೆಸಿ, ಬಳಿಕ ಪ್ರತಿಕೃತಿ ದಹಿಸಿದರು. ಕೇಂದ್ರ ಸರ್ಕಾರ ಹಾಗೂ ಚುನಾವಣಾ ಆಯೋಗದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್ ಕಾಂಚನ್, ಎಸ್ಐಆರ್ ಮೂಲಕ ಮಧ್ಯಮ ವರ್ಗದವರು, ಬಡವರು ಹಾಗೂ ಕಾರ್ಮಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದರು. ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿಯೂ ಸುಮಾರು 15 ಸಾವಿರ ಮಂದಿಯ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ ಎಂದು ದೂರಿದರು. ಗ್ರಾಮೀಣ ಪ್ರದೇಶಗಳ ಅನಕ್ಷರಸ್ಥರು ಹಾಗೂ ಆರ್ಥಿಕವಾಗಿ, ಸಾಮಾಜಿಕವಾಗಿ ಹಿಂದುಳಿದ ಜನರ ಮತದಾನದ ಹಕ್ಕಿಗೆ ಇದರಿಂದ ಧಕ್ಕೆಯಾಗುತ್ತಿದೆ ಎಂದು ಹೇಳಿದರು.
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸೋಲುವ ಭೀತಿಯಿಂದ ಬಿಜೆಪಿ ಚುನಾವಣಾ ಆಯೋಗವನ್ನು ದುರ್ಬಳಕೆ ಮಾಡಿಕೊಂಡು ಎಸ್ಐಆರ್ ಜಾರಿಗೊಳಿಸಿದೆ ಎಂದು ಕಾಂಚನ್ ಆರೋಪಿಸಿದರು. ಬಡವರು ಹಾಗೂ ಹಿಂದುಳಿದ ವರ್ಗಗಳ ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡುವುದು ಪ್ರಜಾಪ್ರಭುತ್ವಕ್ಕೆ ಮಾಡಿದ ದ್ರೋಹ ಎಂದು ಟೀಕಿಸಿದ ಅವರು, ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡದಿದ್ದರೆ ದೇಶಾದ್ಯಂತ ಹೋರಾಟ ತೀವ್ರಗೊಳಿಸುವುದಾಗಿ ಎಚ್ಚರಿಸಿದರು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲ್ ಮಾತನಾಡಿದರು. ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಘವೇಂದ್ರ ಶೆಟ್ಟಿ ಕರ್ಜೆ, ಮುಖಂಡರಾದ ವೆರೋನಿಕಾ ಕರ್ನೇಲಿಯೋ, ಉದಯ್ ಆಚಾರ್, ಕುಮಾರ್, ಅಮೃತ್ ಶೆಣೈ ಸೇರಿದಂತೆ ಹಲವು ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ತಾಲೂಕಿನ ಅಮ್ಟಾಡಿ ಗ್ರಾಮದ ಕಾಜಿಪಿಟ್ಲು ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಬೆಕ್ಕುಗಳು ಮತ್ತು ನಾಯಿಗಳು ನಾಪತ್ತೆಯಾಗುತ್ತಿರುವುದು ಸ್ಥಳೀಯ ನಿವಾಸಿಗಳಲ್ಲಿ ಆತಂಕ…
ಬಾಲಿವುಡ್ ನಟ ಟೈಗರ್ ಶ್ರಾಫ್ ಅವರ ಕಾರಿನ ಮೇಲಿನ ಗುಂಡಿನ ದಾಳಿ ಪ್ರಕರಣದ ತನಿಖೆ ವೇಳೆ, ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ನ…
ತಾಲೂಕಿನ ಕುಕ್ಕಿಪಾಡಿ ಗ್ರಾಮದ ಕೆಂತಲೆ ಎಂಬಲ್ಲಿ ಮನೆಯಲ್ಲಿ ಆಟವಾಡುತ್ತಿದ್ದ ಒಂಬತ್ತು ವರ್ಷದ ಬಾಲಕನೊಬ್ಬನ ಕುತ್ತಿಗೆಗೆ ಹಗ್ಗ ಸಿಲುಕಿ ಆಕಸ್ಮಿಕವಾಗಿ ಮೃತಪಟ್ಟ…
ಚುಟುಕು ಸಾಹಿತ್ಯ ಪರಿಷತ್ ಬಂಟ್ವಾಳ ತಾಲೂಕು ಘಟಕದ ಅಧ್ಯಕ್ಷರಾಗಿ ರಮೇಶ್ ನಾಯ್ಕ್ ಮೆಲ್ಕಾರ್ ಅವರನ್ನು ನೇಮಕ ಮಾಡಲಾಗಿದೆ. ಚುಟುಕು ಸಾಹಿತ್ಯದ…
ಮಂಗಳೂರಿನ ಶ್ರೀ ನಾರಾಯಣ ಗುರು ಪದವಿ ಪೂರ್ವ ಕಾಲೇಜಿನಲ್ಲಿ ಅಕ್ಟೋಬರ್ 9ರಂದು ನಡೆದ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ)…
ನಿಟ್ಟೂರಿನ ಶ್ರೀದೇವಿ ಗ್ಲಾಸ್ ಫ್ಯಾಕ್ಟರಿಯಲ್ಲಿ ಗಾಜಿನ ಬ್ಲಾಕ್ಗಳನ್ನು ಇಳಿಸುತ್ತಿದ್ದ ವೇಳೆ ಸಂಭವಿಸಿದ ಅವಘಡದಲ್ಲಿ ಸಾಮಾಜಿಕ ಕಾರ್ಯಕರ್ತ ಹಾಗೂ ರಿಕ್ಷಾ ಚಾಲಕ…