ತಾಲೂಕಿನ ಕುಕ್ಕಿಪಾಡಿ ಗ್ರಾಮದ ಕೆಂತಲೆ ಎಂಬಲ್ಲಿ ಮನೆಯಲ್ಲಿ ಆಟವಾಡುತ್ತಿದ್ದ ಒಂಬತ್ತು ವರ್ಷದ ಬಾಲಕನೊಬ್ಬನ ಕುತ್ತಿಗೆಗೆ ಹಗ್ಗ ಸಿಲುಕಿ ಆಕಸ್ಮಿಕವಾಗಿ ಮೃತಪಟ್ಟ ಘಟನೆ ಭಾನುವಾರ ರಾತ್ರಿ ನಡೆದಿದೆ.
ಮೃತ ಬಾಲಕನನ್ನು ಕುಕ್ಕಿಪಾಡಿಯ ಹೋಟೆಲ್ ಕಾರ್ಮಿಕ ಆನಂದ ಪೂಜಾರಿ ಅವರ ಪುತ್ರ ಅಮೃತ್ ಎ. ಪೂಜಾರಿ (9) ಎಂದು ಗುರುತಿಸಲಾಗಿದೆ.
ಭಾನುವಾರ ರಾತ್ರಿ ಸುಮಾರು 9 ಗಂಟೆಯ ವೇಳೆಗೆ ಅಮೃತ್ ಮನೆಯ ಕಿಟಕಿ ಬಳಿ ಒಬ್ಬನೇ ಆಟವಾಡುತ್ತಿದ್ದ. ಈ ವೇಳೆ ಕಿಟಕಿಗೆ ಕಟ್ಟಿದ್ದ ಸ್ಕಿಪ್ಪಿಂಗ್ ಹಗ್ಗ ಆತನ ಕುತ್ತಿಗೆಗೆ ಸಿಲುಕಿ ಬಿಗಿದಿದೆ ಎನ್ನಲಾಗಿದೆ. ಅಡುಗೆ ಮನೆಯಲ್ಲಿದ್ದ ತಾಯಿ ಇದನ್ನು ಗಮನಿಸಿ ಕಿರುಚಿಕೊಂಡಿದ್ದಾರೆ.
ತಕ್ಷಣ ಪಕ್ಕದ ಮನೆಯಲ್ಲಿದ್ದ ಆನಂದ ಪೂಜಾರಿ ಅವರ ಸಹೋದರ ಜಯಾನಂದ ಹಾಗೂ ಇತರರು ಬಾಲಕನನ್ನು ಮೂಡುಬಿದಿರೆಯ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಅಷ್ಟರಲ್ಲಾಗಲೇ ಬಾಲಕ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.
ಈ ಕುರಿತು ಜಯಾನಂದ ಅವರು ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ತಾಲೂಕಿನ ಅಮ್ಟಾಡಿ ಗ್ರಾಮದ ಕಾಜಿಪಿಟ್ಲು ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಬೆಕ್ಕುಗಳು ಮತ್ತು ನಾಯಿಗಳು ನಾಪತ್ತೆಯಾಗುತ್ತಿರುವುದು ಸ್ಥಳೀಯ ನಿವಾಸಿಗಳಲ್ಲಿ ಆತಂಕ…
ಬಾಲಿವುಡ್ ನಟ ಟೈಗರ್ ಶ್ರಾಫ್ ಅವರ ಕಾರಿನ ಮೇಲಿನ ಗುಂಡಿನ ದಾಳಿ ಪ್ರಕರಣದ ತನಿಖೆ ವೇಳೆ, ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ನ…
ಚುಟುಕು ಸಾಹಿತ್ಯ ಪರಿಷತ್ ಬಂಟ್ವಾಳ ತಾಲೂಕು ಘಟಕದ ಅಧ್ಯಕ್ಷರಾಗಿ ರಮೇಶ್ ನಾಯ್ಕ್ ಮೆಲ್ಕಾರ್ ಅವರನ್ನು ನೇಮಕ ಮಾಡಲಾಗಿದೆ. ಚುಟುಕು ಸಾಹಿತ್ಯದ…
ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ವಿರೋಧಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ…
ಮಂಗಳೂರಿನ ಶ್ರೀ ನಾರಾಯಣ ಗುರು ಪದವಿ ಪೂರ್ವ ಕಾಲೇಜಿನಲ್ಲಿ ಅಕ್ಟೋಬರ್ 9ರಂದು ನಡೆದ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ)…
ನಿಟ್ಟೂರಿನ ಶ್ರೀದೇವಿ ಗ್ಲಾಸ್ ಫ್ಯಾಕ್ಟರಿಯಲ್ಲಿ ಗಾಜಿನ ಬ್ಲಾಕ್ಗಳನ್ನು ಇಳಿಸುತ್ತಿದ್ದ ವೇಳೆ ಸಂಭವಿಸಿದ ಅವಘಡದಲ್ಲಿ ಸಾಮಾಜಿಕ ಕಾರ್ಯಕರ್ತ ಹಾಗೂ ರಿಕ್ಷಾ ಚಾಲಕ…