ಮಂಗಳೂರಿನಲ್ಲಿ 16 ವರ್ಷದ ಶ್ರೀವತ್ಸ ಎಂಬ ಬಾಲಕ ಕಾಣೆಯಾಗಿದ್ದು, ಆತನ ಪತ್ತೆಗೆ ಕುಟುಂಬಸ್ಥರು ಸಾರ್ವಜನಿಕರ ಸಹಕಾರ ಕೋರಿದ್ದಾರೆ.

ಮೂಲತಃ ಸುಳ್ಯ ತಾಲೂಕಿನ ಮುರುಳ್ಯ ಗ್ರಾಮದ ನಿವಾಸಿಯಾಗಿರುವ ಶ್ರೀವತ್ಸ ಅಕ್ಟೋಬರ್ 22ರಂದು ಬೆಳಿಗ್ಗೆ ಮನೆಯಿಂದ ಹೊರಟಿದ್ದ. ಆದರೆ, ಬಳಿಕ ಮನೆಗೆ ಮರಳಿಲ್ಲ ಎಂದು ತಿಳಿದುಬಂದಿದೆ. ಮನೆಯವರು ಹಾಗೂ ಸಂಬಂಧಿಕರು ವಿವಿಧೆಡೆ ಹುಡುಕಾಟ ನಡೆಸಿದರೂ ಈವರೆಗೆ ಬಾಲಕನ ಬಗ್ಗೆ ಯಾವುದೇ ಸುಳಿವು ಲಭ್ಯವಾಗಿಲ್ಲ ಎನ್ನಲಾಗಿದೆ.
ಬಾಲಕನ ಬಗ್ಗೆ ಯಾರಿಗಾದರೂ ಮಾಹಿತಿ ದೊರೆತಲ್ಲಿ 9844041650 ಅಥವಾ 7892809788 ದೂರವಾಣಿ ಸಂಖ್ಯೆಗಳಿಗೆ ಸಂಪರ್ಕಿಸುವಂತೆ ಕುಟುಂಬಸ್ಥರು ಮನವಿ ಮಾಡಿದ್ದಾರೆ. ಅಲ್ಲದೆ, ಮಾಹಿತಿ ದೊರೆತವರು ಹತ್ತಿರದ ಪೊಲೀಸ್ ಠಾಣೆಗೂ ತಿಳಿಸುವಂತೆ ಕೋರಿದ್ದಾರೆ.



