ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಪ್ರವಾಸಿಗರಿಗೆ ಗಾಂಜಾ ಮಾರಾಟ ಆರೋಪ; ಇಬ್ಬರ ಬಂಧನ, 5.710 ಕೆ.ಜಿ. ಗಾಂಜಾ ವಶ

ಪ್ರವಾಸಿಗರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಕಾಪು ಪೊಲೀಸರು ಬಂಧಿಸಿದ್ದು, ₹2.85 ಲಕ್ಷ ಮೌಲ್ಯದ 5.710 ಕೆ.ಜಿ. ಗಾಂಜಾ ಸೇರಿದಂತೆ ನಗದು ಹಾಗೂ ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

ಬಂಧಿತರನ್ನು ಕಾಪು ತಾಲೂಕಿನ ಬೆಳಪು ಗ್ರಾಮದ ವಿನಯನಗರ ನಿವಾಸಿ ಆರೀಫ್ ಹಾಗೂ ಉಡುಪಿ ತಾಲೂಕಿನ ಪಡುತೋನ್ಸೆ ಗ್ರಾಮದ ಹೂಡೆ ನಿವಾಸಿ ಅಕೀಫ್ ಎಂದು ಗುರುತಿಸಲಾಗಿದೆ.

ಅಕ್ಟೋಬರ್ 27ರಂದು ಕಾಪು ಪೊಲೀಸ್ ವೃತ್ತ ನಿರೀಕ್ಷಕ ಅಜ್ಮತ್ ಆಲಿ ಅವರಿಗೆ ದೊರೆತ ಖಚಿತ ಮಾಹಿತಿಯ ಮೇರೆಗೆ, ಉಳಿಯಾರಗೋಳಿ ಗ್ರಾಮದ ಯಾರ್ಡ್ ಬೀಚ್‌ನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಮಧ್ಯಾಹ್ನ 12.05ರ ಸುಮಾರಿಗೆ ನಡೆದ ಕಾರ್ಯಾಚರಣೆಯಲ್ಲಿ ಮಾರಾಟದ ಉದ್ದೇಶದಿಂದ ಇಟ್ಟುಕೊಂಡಿದ್ದ ಗಾಂಜಾ ಪತ್ತೆಯಾಗಿದೆ.

ಆರೋಪಿಗಳಿಂದ 5.710 ಕೆ.ಜಿ. ಗಾಂಜಾ, ₹225 ನಗದು ಹಾಗೂ ಎರಡು ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ವಿಚಾರಣೆ ವೇಳೆ ಆರೋಪಿಗಳು ಆಂಧ್ರಪ್ರದೇಶದ ಹೈದರಾಬಾದ್‌ನಿಂದ ಗಾಂಜಾ ತಂದು ಮಾರಾಟ ಮಾಡುತ್ತಿದ್ದುದಾಗಿ ತಿಳಿಸಿರುವುದಾಗಿ ವರದಿಯಾಗಿದೆ.

ಇಬ್ಬರೂ ಈ ಹಿಂದೆ ವಿವಿಧ ಪೊಲೀಸ್ ಠಾಣೆಗಳಲ್ಲಿ ಕ್ರಿಮಿನಲ್ ಪ್ರಕರಣಗಳನ್ನು ಎದುರಿಸಿದ್ದಾರೆ ಎಂದು ತಿಳಿದುಬಂದಿದೆ. ಪ್ರಕರಣದ ಕುರಿತು ಕಾಪು ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ರೌಡಿಶೀಟರ್ ಸುಜಿತ್ ಪಿಂಟೊ ಕೊಲೆ ಪ್ರಕರಣ; ಮತ್ತೋರ್ವ ಆರೋಪಿ ಬಂಧನ….!

ಮಂಗಳೂರು: ಮಂಗಳೂರಿನಲ್ಲಿ 16 ವರ್ಷದ ಬಾಲಕ ನಾಪತ್ತೆ: ಪತ್ತೆಗೆ ಸಾರ್ವಜನಿಕರ ಸಹಕಾರ ಕೋರಿಕೆ…!

ಬಂಟ್ವಾಳ: ಬಂಟ್ವಾಳದಲ್ಲಿ ಹೆಬ್ಬಾವಿನ ಆತಂಕ: ಬೆಕ್ಕನ್ನು ಹಿಡಿದು ಪೊದೆಯೊಳಗೆ ಎಳೆದೊಯ್ದ ಬೃಹತ್ ಹೆಬ್ಬಾವು?

ಮುಂಬೈ: ಟೈಗರ್ ಶ್ರಾಫ್‌ಗೂ ಮುನ್ನ ಆಮಿರ್, ಸಲ್ಮಾನ್ ಖಾನ್ ನಿವಾಸಗಳ ಮೇಲೆ ನಿಗಾ?

ಬಂಟ್ವಾಳ: ಕಿಟಕಿಗೆ ಕಟ್ಟಿದ್ದ ಹಗ್ಗ ಕುತ್ತಿಗೆಗೆ ಸಿಲುಕಿ 9 ವರ್ಷದ ಬಾಲಕ ಸಾವು…!

ಬಂಟ್ವಾಳ: ಬಂಟ್ವಾಳ ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿ ರಮೇಶ್ ನಾಯ್ಕ್ ಮೆಲ್ಕಾರ್ ಆಯ್ಕೆ…!

ಉಡುಪಿ: ಎಸ್ಐಆರ್ ವಿರುದ್ಧ ಬ್ರಹ್ಮಾವರದಲ್ಲಿ ಕಾಂಗ್ರೆಸ್ ಪ್ರತಿಭಟನೆ; ಪ್ರತಿಕೃತಿ ದಹಿಸಿ ಆಕ್ರೋಶ

ಪುತ್ತೂರು: ಜಿಲ್ಲಾ ಮಟ್ಟದ ಈಜು ಸ್ಪರ್ಧೆ: ಸಿಯಾ ಸುಧೀರ್‌ಗೆ ಕಂಚಿನ ಪದಕ

ಉಡುಪಿ: ಗಾಜಿನ ಬ್ಲಾಕ್ ಇಳಿಸುವ ವೇಳೆ ಅವಘಡ: ಸಾಮಾಜಿಕ ಕಾರ್ಯಕರ್ತ ಸುನಿಲ್ ಬೈಲಕೆರೆ ಸಾವು

error: Content is protected !!