ಕರಾವಳಿ

ಬಂಟ್ವಾಳ: ಕಂಬಳದಲ್ಲಿ ಗೆದ್ದ ಚಿನ್ನದ ಪದಕ ಅನಾರೋಗ್ಯಪೀಡಿತ ಸಹಾಯಕನಿಗೆ ಸಮರ್ಪಣೆ

ಕಂಬಳದ ಕರೆಯಲ್ಲಿ ಗೆಲುವು ಸಾಧಿಸಿ ಚಿನ್ನದ ಪದಕ ಪಡೆಯುವುದು ಕೋಣಗಳ ಯಜಮಾನರಿಗೆ ಹೆಮ್ಮೆಯ ಗೌರವ. ಆದರೆ ಆ ಗೆಲುವಿನ ಹಿಂದೆ ಬೆವರಿಳಿಸಿ ದುಡಿದವರ ಸೇವೆಯನ್ನು ಗುರುತಿಸಿ, ಅವರ ಸಂಕಷ್ಟಕ್ಕೆ ಸ್ಪಂದಿಸುವ ಮೂಲಕ ಪದಕದ ಮೌಲ್ಯವನ್ನು ಹೆಚ್ಚಿಸಿದ ಅಪರೂಪದ ಘಟನೆ ನಡೆದಿದೆ.

ತಮ್ಮ ತಂಡದೊಂದಿಗೆ ಸುದೀರ್ಘ ಕಾಲ ದುಡಿದ ಅನಾರೋಗ್ಯಪೀಡಿತ ಸಹಾಯಕನಿಗೆ ಗೆದ್ದ ಚಿನ್ನದ ಪದಕವನ್ನು ನೀಡುವ ಮೂಲಕ ಮಂಗಳೂರಿನ ಶಕ್ತಿನಗರ ಪದವು ಕಾನಡ್ಕ ತಂಡ ಮಾನವೀಯತೆ ಮೆರೆದಿದೆ.

ಇತ್ತೀಚೆಗೆ ಮೈಸೂರಿನಲ್ಲಿ ನಡೆದ ಕಂಬಳ ಸ್ಪರ್ಧೆಯಲ್ಲಿ ಫ್ಲೇವಿ ಡಿಸೋಜಾ ಅವರ ಪದವು ಕಾನಡ್ಕ ತಂಡದ ಕೋಣಗಳು ಹಗ್ಗ ಕಿರಿಯ ವಿಭಾಗದಲ್ಲಿ ಪ್ರಥಮ ಬಹುಮಾನ ಗಳಿಸಿದ್ದವು. ಈ ಸಾಧನೆಗೆ ಲಭಿಸಿದ ಚಿನ್ನದ ಪದಕವನ್ನು ತಂಡದಲ್ಲಿ ದೀರ್ಘಕಾಲ ಕೋಣಗಳ ಆರೈಕೆಯಲ್ಲಿ ತೊಡಗಿಸಿಕೊಂಡಿದ್ದ ಬಂಟ್ವಾಳ ತಾಲೂಕಿನ ಕೊಳತ್ತಮಜಲು ನಿವಾಸಿ ವೀರಪ್ಪ ಅವರಿಗೆ ಸಮರ್ಪಿಸಲಾಗಿದೆ.

ಅನಾರೋಗ್ಯದ ಕಾರಣ ವೀರಪ್ಪ ಅವರು ಕಳೆದ ವರ್ಷದಿಂದ ಕಂಬಳದಲ್ಲಿ ತೊಡಗಿಸಿಕೊಳ್ಳಲು ಸಾಧ್ಯವಾಗಿರಲಿಲ್ಲ. ಆದರೂ ತಂಡದ ಯಶಸ್ಸಿನಲ್ಲಿ ಅವರ ಕೊಡುಗೆಯನ್ನು ಮರೆಯದ ಪದವು ಕಾನಡ್ಕ ತಂಡ, ಗೆದ್ದ ಪದಕವನ್ನು ಅವರಿಗೆ ನೀಡುವ ಮೂಲಕ ತಮ್ಮ ಕೃತಜ್ಞತೆ ಹಾಗೂ ಗೌರವವನ್ನು ವ್ಯಕ್ತಪಡಿಸಿದೆ. ಈ ಮಾನವೀಯ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಉಡುಪಿ: ಸುಪ್ರೀಂ ಕೋರ್ಟ್‌ಗೆ ಮುತ್ತಿಗೆ ಹಾಕುವ ಪ್ರಯತ್ನಕ್ಕೆ ರಾಹುಲ್ ಗಾಂಧಿ ಪ್ರಚೋದನೆ: ಕೆ.ಎಸ್. ನವೀನ್ ಆರೋಪ

ಸಂವಿಧಾನವನ್ನು ಎತ್ತಿಹಿಡಿಯುವ ಸುಪ್ರೀಂ ಕೋರ್ಟ್‌ಗೆ ಮುತ್ತಿಗೆ ಹಾಕುವ ದುಷ್ಟತನಕ್ಕೆ ರಾಹುಲ್ ಗಾಂಧಿ ಪ್ರಚೋದನೆ ನೀಡುತ್ತಿದ್ದಾರೆ. ದೇಶದ ಇತಿಹಾಸದಲ್ಲೇ ಸುಪ್ರೀಂ ಕೋರ್ಟ್‌ಗೆ…

13 hours ago

ಉಡುಪಿ: ನ.15ರೊಳಗೆ ಉಡುಪಿ ಜಿಲ್ಲಾಸ್ಪತ್ರೆಗೆ ಆರೋಗ್ಯ ಸಚಿವರು ಭೇಟಿ ನೀಡಿ ಪರಿಶೀಲಿಸಲಿ: ಯಶ್ಪಾಲ್ ಸುವರ್ಣ ಆಗ್ರಹ

ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಉಡುಪಿಯ ನೂತನ ಜಿಲ್ಲಾಸ್ಪತ್ರೆಯನ್ನು ಸಂಪೂರ್ಣ ವೈದ್ಯಕೀಯ ಸೌಲಭ್ಯಗಳೊಂದಿಗೆ ಸಾರ್ವಜನಿಕ ಸೇವೆಗೆ ಮುಕ್ತಗೊಳಿಸಬೇಕು. ಈ ನಿಟ್ಟಿನಲ್ಲಿ…

13 hours ago

ಮಂಗಳೂರು: ವಾಮಂಜೂರು ಶಾಲೆಯಲ್ಲಿ ಹಣಕಾಸು ಅವ್ಯವಹಾರದ ಆರೋಪ: 11 ವರ್ಷಗಳ ಲೆಕ್ಕಪತ್ರ ಬಹಿರಂಗಪಡಿಸಲು ಆಗ್ರಹ..!

ವಾಮಂಜೂರಿನ ತಿರುವೈಲು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಕ್ರಮ ಹಣಕಾಸು ವ್ಯವಹಾರ ನಡೆದಿದೆ ಎಂಬ…

13 hours ago

ಮಂಗಳೂರು: ಪ್ರೀತಿ ವಿಚಾರವಾಗಿ ರಾಕೇಶ್ ಕೊಲೆ ಪ್ರಕರಣ: ನಾಲ್ವರು ಆರೋಪಿಗಳು ದೋಷಿಗಳು ಎಂದು ನ್ಯಾಯಾಲಯ ತೀರ್ಪು

ಪ್ರೀತಿ ವಿಚಾರಕ್ಕೆ ಸಂಬಂಧಿಸಿದಂತೆ ಯುವಕನನ್ನು ತಲವಾರ್‌ನಿಂದ ಕೊಲೆ ಮಾಡಿದ ಪ್ರಕರಣದಲ್ಲಿ ನಾಲ್ವರು ಆರೋಪಿಗಳು ದೋಷಿಗಳೆಂದು 6ನೇ ಹೆಚ್ಚುವರಿ ಜಿಲ್ಲಾ ಮತ್ತು…

15 hours ago

ಬೆಂಗಳೂರು: ನಂದಿನಿ ಹಾಲಿನ ದರ ಲೀಟರ್‌ಗೆ ₹8 ಏರಿಕೆ: ನವೆಂಬರ್ 1ರಿಂದಲೇ ಹೊಸ ದರ ಜಾರಿ

ರಾಜ್ಯದ ಜನತೆಗೆ ಬೆಲೆ ಏರಿಕೆಯ ಬಿಸಿ ತಟ್ಟಿದ್ದು, ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್‌ಗೆ 8 ರೂಪಾಯಿ ಹೆಚ್ಚಿಸಲು ರಾಜ್ಯ…

16 hours ago

ಉಡುಪಿ: ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಣೆ ಅಭಿನಂದನೀಯ: ವಿನಯಕುಮಾರ್ ಸೊರಕೆ

ಕಾಂಗ್ರೆಸ್ ಪಕ್ಷದ ಸಂಘಟನೆಗೆ ನಿರಂತರವಾಗಿ ಶ್ರಮಿಸುತ್ತಿರುವ ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಅವರು ಸಮಾಜಮುಖಿ ಕಾರ್ಯಗಳ ಮೂಲಕ…

18 hours ago