ಬಾಡಿಗೆ ಮನೆಯ ಮುಂಗಡ ಹಣದ ವಿಚಾರವಾಗಿ ಉಂಟಾದ ಗಲಾಟೆಯಲ್ಲಿ ಅಂಗಡಿ ಮಾಲೀಕನ ಮೇಲೆ ಆ್ಯಸಿಡ್ ಎರಚಿ, ತಲವಾರಿನಿಂದ ಹಲ್ಲೆಗೆ ಯತ್ನಿಸಿದ ಆರೋಪಿಯನ್ನು ಉಡುಪಿ ನಗರ ಪೊಲೀಸರು ಕೆಲವೇ ಗಂಟೆಗಳಲ್ಲಿ ಬಂಧಿಸಿದ್ದಾರೆ.
ದಾಳಿಯಿಂದ ಗಾಯಗೊಂಡ ಕುಂಜಿಬೆಟ್ಟು ಬುಡ್ನಾರು 4ನೇ ಕ್ರಾಸ್ ನಿವಾಸಿ ನವೀನ್ ಕುಮಾರ್ ಅವರು ಮಣಿಪಾಲದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಂಧಿತ ಆರೋಪಿಯನ್ನು ಕುಂಜಿಬೆಟ್ಟು ಎಂಜಿಎಂ ಮೈದಾನದ ಬಳಿಯ ನಿವಾಸಿ ಸುರೇಶ್ ಆಚಾರ್ಯ ಎಂದು ಗುರುತಿಸಲಾಗಿದೆ.
ನವೀನ್ ಕುಮಾರ್ ಅವರು ವಿಷ್ಣುಮೂರ್ತಿ ನಗರದ ಮನೆಯೊಂದರ ಮೊದಲ ಮಹಡಿಯನ್ನು ಸುರೇಶ್ ಆಚಾರ್ಯ ಅವರಿಗೆ ಬಾಡಿಗೆಗೆ ನೀಡಿದ್ದರು. ಮನೆ ಖಾಲಿ ಮಾಡುವ ಸಂದರ್ಭದಲ್ಲಿ ಗೋಡೆ ಹಾಗೂ ಟ್ಯಾಪ್‌ಗಳಿಗೆ ಹಾನಿಯಾಗಿದ್ದರಿಂದ ಮುಂಗಡವಾಗಿ ನೀಡಿದ್ದ 20 ಸಾವಿರ ರೂ. ಹಣದಲ್ಲಿ ಎರಡು ತಿಂಗಳ ಬಾಡಿಗೆ ಮತ್ತು ದುರಸ್ತಿ ವೆಚ್ಚವನ್ನು ಕಡಿತಗೊಳಿಸುವುದಾಗಿ ನವೀನ್ ತಿಳಿಸಿದ್ದರು. ಇದಕ್ಕೆ ಒಪ್ಪದ ಸುರೇಶ್ ಪೂರ್ಣ ಹಣ ನೀಡುವಂತೆ ಒತ್ತಾಯಿಸಿ ಅಕ್ಟೋಬರ್ 23ರಂದು ಅಂಗಡಿಗೆ ಬಂದು ಬೆದರಿಕೆ ಹಾಕಿದ್ದ ಎನ್ನಲಾಗಿದೆ.
ಅಕ್ಟೋಬರ್ 28ರಂದು ಸಂಜೆ 3.30ರ ಸುಮಾರಿಗೆ ಮತ್ತೆ ಅಂಗಡಿಗೆ ಬಂದ ಸುರೇಶ್, ಬಾಡಿಗೆ ಹಣದ ವಿಚಾರವಾಗಿ ಗಲಾಟೆ ನಡೆಸಿದ್ದಾನೆ. ಬಳಿಕ ಸ್ಕೂಟರ್‌ನಿಂದ ಬಾಟಲಿ ಹಾಗೂ ತಲವಾರು ತಂದು ನವೀನ್ ಅವರ ಮೇಲೆ ಆ್ಯಸಿಡ್ ಎರಚಿ, ತಲವಾರಿನಿಂದ ಹಲ್ಲೆ ನಡೆಸಲು ಯತ್ನಿಸಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ದಾಳಿಯಿಂದ ನವೀನ್ ಅವರ ಮುಖ, ಕೈ, ಹೊಟ್ಟೆ, ಸೊಂಟ ಹಾಗೂ ಪಾದಗಳಿಗೆ ಸುಟ್ಟ ಗಾಯಗಳಾಗಿವೆ.
ಈ ಕುರಿತು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸ್ ನಿರೀಕ್ಷಕ ಮಹೇಶ್ ಪ್ರಸಾದ್ ನೇತೃತ್ವದ ವಿಶೇಷ ತಂಡ ಕಾರ್ಯಾಚರಣೆ ನಡೆಸಿ ಎಂಜಿಎಂ ಮೈದಾನದ ಬಳಿ ಆರೋಪಿಯನ್ನು ಬಂಧಿಸಿದೆ. ಕೃತ್ಯಕ್ಕೆ ಬಳಸಿದ ಸ್ಕೂಟರ್ ಹಾಗೂ ತಲವಾರನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಂವಿಧಾನವನ್ನು ಎತ್ತಿಹಿಡಿಯುವ ಸುಪ್ರೀಂ ಕೋರ್ಟ್‌ಗೆ ಮುತ್ತಿಗೆ ಹಾಕುವ ದುಷ್ಟತನಕ್ಕೆ ರಾಹುಲ್ ಗಾಂಧಿ ಪ್ರಚೋದನೆ ನೀಡುತ್ತಿದ್ದಾರೆ. ದೇಶದ ಇತಿಹಾಸದಲ್ಲೇ ಸುಪ್ರೀಂ ಕೋರ್ಟ್‌ಗೆ…
ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಉಡುಪಿಯ ನೂತನ ಜಿಲ್ಲಾಸ್ಪತ್ರೆಯನ್ನು ಸಂಪೂರ್ಣ ವೈದ್ಯಕೀಯ ಸೌಲಭ್ಯಗಳೊಂದಿಗೆ ಸಾರ್ವಜನಿಕ ಸೇವೆಗೆ ಮುಕ್ತಗೊಳಿಸಬೇಕು. ಈ ನಿಟ್ಟಿನಲ್ಲಿ…
ವಾಮಂಜೂರಿನ ತಿರುವೈಲು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಕ್ರಮ ಹಣಕಾಸು ವ್ಯವಹಾರ ನಡೆದಿದೆ ಎಂಬ…
ಪ್ರೀತಿ ವಿಚಾರಕ್ಕೆ ಸಂಬಂಧಿಸಿದಂತೆ ಯುವಕನನ್ನು ತಲವಾರ್‌ನಿಂದ ಕೊಲೆ ಮಾಡಿದ ಪ್ರಕರಣದಲ್ಲಿ ನಾಲ್ವರು ಆರೋಪಿಗಳು ದೋಷಿಗಳೆಂದು 6ನೇ ಹೆಚ್ಚುವರಿ ಜಿಲ್ಲಾ ಮತ್ತು…
ರಾಜ್ಯದ ಜನತೆಗೆ ಬೆಲೆ ಏರಿಕೆಯ ಬಿಸಿ ತಟ್ಟಿದ್ದು, ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್‌ಗೆ 8 ರೂಪಾಯಿ ಹೆಚ್ಚಿಸಲು ರಾಜ್ಯ…
ಕಾಂಗ್ರೆಸ್ ಪಕ್ಷದ ಸಂಘಟನೆಗೆ ನಿರಂತರವಾಗಿ ಶ್ರಮಿಸುತ್ತಿರುವ ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಅವರು ಸಮಾಜಮುಖಿ ಕಾರ್ಯಗಳ ಮೂಲಕ…