ಜನ ಮನದ ನಾಡಿ ಮಿಡಿತ

Advertisement

ಬೆಂಗಳೂರು: ನಂದಿನಿ ಹಾಲಿನ ದರ ಲೀಟರ್‌ಗೆ ₹8 ಏರಿಕೆ: ನವೆಂಬರ್ 1ರಿಂದಲೇ ಹೊಸ ದರ ಜಾರಿ

ರಾಜ್ಯದ ಜನತೆಗೆ ಬೆಲೆ ಏರಿಕೆಯ ಬಿಸಿ ತಟ್ಟಿದ್ದು, ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್‌ಗೆ 8 ರೂಪಾಯಿ ಹೆಚ್ಚಿಸಲು ರಾಜ್ಯ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಪರಿಷ್ಕೃತ ದರ ನವೆಂಬರ್ 1ರಿಂದಲೇ ಜಾರಿಗೆ ಬರಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ಗುರುವಾರ ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಹಾಲಿನ ದರ ಹೆಚ್ಚಳದಿಂದ ಲಭಿಸುವ ಹೆಚ್ಚುವರಿ 8 ರೂಪಾಯಿಗಳಲ್ಲಿ 7 ರೂಪಾಯಿಗಳನ್ನು ಹಾಲು ಉತ್ಪಾದಕರಿಗೆ ಹಾಗೂ 1 ರೂಪಾಯಿಯನ್ನು ಕರ್ನಾಟಕ ಹಾಲು ಮಹಾಮಂಡಳಿಗೆ ನೀಡಲು ತೀರ್ಮಾನಿಸಲಾಗಿದೆ.

ಪ್ರಸ್ತುತ ರೈತರಿಗೆ ಪ್ರತಿ ಲೀಟರ್ ಹಾಲಿಗೆ ನೀಡಲಾಗುತ್ತಿರುವ 35 ರೂಪಾಯಿಗಳನ್ನು 42 ರೂಪಾಯಿಗಳಿಗೆ ಹೆಚ್ಚಿಸಲಾಗುತ್ತದೆ. ಇದಕ್ಕೆ ಸರ್ಕಾರದ 5 ರೂಪಾಯಿ ಪ್ರೋತ್ಸಾಹಧನ ಸೇರಿ ರೈತರಿಗೆ ಪ್ರತಿ ಲೀಟರ್ ಹಾಲಿಗೆ ಒಟ್ಟು 47 ರೂಪಾಯಿ ದೊರೆಯಲಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಹಿಂದಿನ ಸಚಿವ ಸಂಪುಟ ಸಭೆಯಲ್ಲಿ ಹಾಲಿನ ದರ ಹೆಚ್ಚಳಕ್ಕೆ ಒಪ್ಪಿಗೆ ನೀಡಲಾಗಿತ್ತು. ಆದರೆ, ವಿಧಾನ ಪರಿಷತ್ ಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿದ್ದ ಹಿನ್ನೆಲೆಯಲ್ಲಿ ಅಂತಿಮ ನಿರ್ಧಾರವನ್ನು ಮುಖ್ಯಮಂತ್ರಿ ಅವರ ವಿವೇಚನೆಗೆ ಬಿಡಲಾಗಿತ್ತು. ಇದೀಗ ಚುನಾವಣಾ ಪ್ರಕ್ರಿಯೆ ಪೂರ್ಣಗೊಂಡ ಬೆನ್ನಲ್ಲೇ ದರ ಏರಿಕೆಗೆ ಅಂತಿಮ ಒಪ್ಪಿಗೆ ದೊರೆತಿದೆ.

Leave a Reply

Your email address will not be published. Required fields are marked *

ಉಡುಪಿ: ಸುಪ್ರೀಂ ಕೋರ್ಟ್‌ಗೆ ಮುತ್ತಿಗೆ ಹಾಕುವ ಪ್ರಯತ್ನಕ್ಕೆ ರಾಹುಲ್ ಗಾಂಧಿ ಪ್ರಚೋದನೆ: ಕೆ.ಎಸ್. ನವೀನ್ ಆರೋಪ

ಉಡುಪಿ: ನ.15ರೊಳಗೆ ಉಡುಪಿ ಜಿಲ್ಲಾಸ್ಪತ್ರೆಗೆ ಆರೋಗ್ಯ ಸಚಿವರು ಭೇಟಿ ನೀಡಿ ಪರಿಶೀಲಿಸಲಿ: ಯಶ್ಪಾಲ್ ಸುವರ್ಣ ಆಗ್ರಹ

ಮಂಗಳೂರು: ವಾಮಂಜೂರು ಶಾಲೆಯಲ್ಲಿ ಹಣಕಾಸು ಅವ್ಯವಹಾರದ ಆರೋಪ: 11 ವರ್ಷಗಳ ಲೆಕ್ಕಪತ್ರ ಬಹಿರಂಗಪಡಿಸಲು ಆಗ್ರಹ..!

ಮಂಗಳೂರು: ಪ್ರೀತಿ ವಿಚಾರವಾಗಿ ರಾಕೇಶ್ ಕೊಲೆ ಪ್ರಕರಣ: ನಾಲ್ವರು ಆರೋಪಿಗಳು ದೋಷಿಗಳು ಎಂದು ನ್ಯಾಯಾಲಯ ತೀರ್ಪು

ಉಡುಪಿ: ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಣೆ ಅಭಿನಂದನೀಯ: ವಿನಯಕುಮಾರ್ ಸೊರಕೆ

ಉಡುಪಿ: ಬಾಡಿಗೆ ಮುಂಗಡ ಹಣದ ವಿವಾದ; ಅಂಗಡಿ ಮಾಲೀಕನ ಮೇಲೆ ಆ್ಯಸಿಡ್ ದಾಳಿ, ಆರೋಪಿ ಬಂಧನ

ಬಂಟ್ವಾಳ: ಕಂಬಳದಲ್ಲಿ ಗೆದ್ದ ಚಿನ್ನದ ಪದಕ ಅನಾರೋಗ್ಯಪೀಡಿತ ಸಹಾಯಕನಿಗೆ ಸಮರ್ಪಣೆ

ಉಡುಪಿ: ರೌಡಿಶೀಟರ್ ಸುಜಿತ್ ಪಿಂಟೊ ಕೊಲೆ ಪ್ರಕರಣ; ಮತ್ತೋರ್ವ ಆರೋಪಿ ಬಂಧನ….!

ಉಡುಪಿ: ಪ್ರವಾಸಿಗರಿಗೆ ಗಾಂಜಾ ಮಾರಾಟ ಆರೋಪ; ಇಬ್ಬರ ಬಂಧನ, 5.710 ಕೆ.ಜಿ. ಗಾಂಜಾ ವಶ

error: Content is protected !!