ಪ್ರೀತಿ ವಿಚಾರಕ್ಕೆ ಸಂಬಂಧಿಸಿದಂತೆ ಯುವಕನನ್ನು ತಲವಾರ್‌ನಿಂದ ಕೊಲೆ ಮಾಡಿದ ಪ್ರಕರಣದಲ್ಲಿ ನಾಲ್ವರು ಆರೋಪಿಗಳು ದೋಷಿಗಳೆಂದು 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಘೋಷಿಸಿದೆ.

2019ರ ಜನವರಿ 3ರಂದು ಪಂಜಿಮೊಗರು ಮಾಲಾಡಿ ರಸ್ತೆಯ ಎಂ.ವಿ. ಶೆಟ್ಟಿ ಕಾಲೇಜು ಬಳಿ ಈ ಘಟನೆ ನಡೆದಿತ್ತು. ಪ್ರಕರಣದ ಮೊದಲನೇ ಆರೋಪಿ ಸುನಿಲ್ ಕುಮಾರ್ ಅವರ ತಂಗಿಯನ್ನು ರಾಕೇಶ್ ಪ್ರೀತಿಸುತ್ತಿದ್ದ ಎಂಬ ಕಾರಣಕ್ಕೆ ಸುನಿಲ್ ಕುಮಾರ್ ಸೇರಿದಂತೆ ಪ್ರವೀಣ್ ಪೂಜಾರಿ ಅಲಿಯಾಸ್ ಚೋಟು, ಪ್ರೀತಮ್ ಹಾಗೂ ರೋಹಿತ್ ಕುಮಾರ್ ಅಲಿಯಾಸ್ ಶೂಟರ್ ಸೇರಿ ರಾಕೇಶ್‌ನನ್ನು ತಲವಾರ್‌ಗಳಿಂದ ಕೊಲೆ ಮಾಡಿದ್ದರು.
ಈ ಸಂಬಂಧ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸರು ತನಿಖೆ ನಡೆಸಿ ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದ್ದರು.
ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ನಾಲ್ವರು ಆರೋಪಿಗಳು ದೋಷಿಗಳೆಂದು ಘೋಷಿಸಿದೆ.



