ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಉಡುಪಿಯ ನೂತನ ಜಿಲ್ಲಾಸ್ಪತ್ರೆಯನ್ನು ಸಂಪೂರ್ಣ ವೈದ್ಯಕೀಯ ಸೌಲಭ್ಯಗಳೊಂದಿಗೆ ಸಾರ್ವಜನಿಕ ಸೇವೆಗೆ ಮುಕ್ತಗೊಳಿಸಬೇಕು. ಈ ನಿಟ್ಟಿನಲ್ಲಿ ಆರೋಗ್ಯ ಸಚಿವರು ನವೆಂಬರ್ 15ರೊಳಗೆ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಲೋಕಾರ್ಪಣೆಯ ದಿನಾಂಕ ಘೋಷಿಸಬೇಕು ಎಂದು ಶಾಸಕ ಯಶ್ಪಾಲ್ ಎ. ಸುವರ್ಣ ಒತ್ತಾಯಿಸಿದ್ದಾರೆ.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಕ್ಷಿಣ ಕನ್ನಡ ಜಿಲ್ಲೆಯಿಂದ ಪ್ರತ್ಯೇಕಗೊಂಡು ಉಡುಪಿ ಜಿಲ್ಲೆ ಅಸ್ತಿತ್ವಕ್ಕೆ ಬಂದು 28 ವರ್ಷಗಳಾದರೂ, ಜಿಲ್ಲೆಯ ಜನರ ಬಹುಕಾಲದ ಬೇಡಿಕೆಯಾಗಿರುವ ಸುಸಜ್ಜಿತ ಜಿಲ್ಲಾಸ್ಪತ್ರೆ ಇನ್ನೂ ಪೂರ್ಣ ಪ್ರಮಾಣದಲ್ಲಿ ಕಾರ್ಯಾರಂಭ ಮಾಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
2021ರಲ್ಲಿ ನೂತನ ಜಿಲ್ಲಾಸ್ಪತ್ರೆಯ ನಿರ್ಮಾಣ ಕಾಮಗಾರಿ ಆರಂಭಗೊಂಡಿದ್ದು, 2023ರಲ್ಲಿಯೇ ಕಟ್ಟಡ ಬಹುತೇಕ ಪೂರ್ಣಗೊಂಡಿದೆ. ಆದರೂ ಆಸ್ಪತ್ರೆ ಈವರೆಗೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿಲ್ಲ. ಕಳೆದ ಮೂರೂವರೆ ವರ್ಷಗಳಿಂದ ವೈಯಕ್ತಿಕವಾಗಿ, ಪತ್ರಗಳ ಮೂಲಕ ಹಾಗೂ ವಿಧಾನಮಂಡಲದ ಅಧಿವೇಶನಗಳಲ್ಲಿ ಈ ವಿಚಾರವನ್ನು ಪ್ರಸ್ತಾಪಿಸಿ ಸರ್ಕಾರದ ಗಮನ ಸೆಳೆಯುತ್ತಿದ್ದರೂ ಪರಿಣಾಮಕಾರಿ ಕ್ರಮ ಕೈಗೊಂಡಿಲ್ಲ ಎಂದು ಹೇಳಿದರು.
ಹಿಂದಿನ ಮತ್ತು ಪ್ರಸ್ತುತ ಮುಖ್ಯಮಂತ್ರಿಗಳು, ಆರೋಗ್ಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಿಗೆ ಹಲವು ಬಾರಿ ಮನವಿ ಸಲ್ಲಿಸಿದ್ದರೂ, ಆಸ್ಪತ್ರೆಯ ಕಾರ್ಯಾರಂಭದ ಕುರಿತು ಈವರೆಗೆ ಸ್ಪಷ್ಟ ನಿರ್ಧಾರ ಪ್ರಕಟವಾಗಿಲ್ಲ. ಕೂಡಲೇ ಸರ್ಕಾರ ಅಗತ್ಯ ಕ್ರಮ ಕೈಗೊಂಡು ಆಸ್ಪತ್ರೆಯನ್ನು ಪೂರ್ಣ ಪ್ರಮಾಣದಲ್ಲಿ ಸಾರ್ವಜನಿಕರ ಸೇವೆಗೆ ಸಮರ್ಪಿಸಬೇಕು ಎಂದು ಯಶ್ಪಾಲ್ ಸುವರ್ಣ ಆಗ್ರಹಿಸಿದರು.
ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ ಸಂದರ್ಭದಲ್ಲಿ ಉಡುಪಿಯ ಆದರ್ಶ ಆಸ್ಪತ್ರೆಯ ಮುಖ್ಯಸ್ಥ ಡಾ. ಚಂದ್ರಶೇಖರ್ ಅವರ ಹೆಸರನ್ನು ಮೊದಲ ಪಟ್ಟಿಯಲ್ಲಿ…
ಮೂಡಬಿದಿರೆ ತಾಲೂಕಿನ ಮಿಜಾರ್ನಲ್ಲಿ ಅಭಿಮಾನಿ ಬಸ್ ಹಾಗೂ ಸ್ಕೂಟರ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ರಾಂಗ್ ಸೈಡ್ನಲ್ಲಿ ಬಂದ…
ಶಾಲಾ ಶಿಕ್ಷಣ ಇಲಾಖೆ ಹಾಗೂ ಸಜೀಪಮೂಡ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಜಂಟಿ ಆಶ್ರಯದಲ್ಲಿ 2026-27ನೇ ಸಾಲಿನ ಬಂಟ್ವಾಳ ತಾಲೂಕು…
ಮೋಟಾರ್ಸೈಕಲ್ಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಸಹಸವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಅಕ್ಟೋಬರ್ 30ರಂದು…
ಮಂಗಳೂರಿನಲ್ಲಿ ಮಾಹಿತಿ ತಂತ್ರಜ್ಞಾನ ಉದ್ಯಮದ ಬೆಳವಣಿಗೆಗೆ ಮಹತ್ವದ ಕೊಡುಗೆ ನೀಡಿದ್ದ ಇನ್ಫೋಸಿಸ್ ಸಂಸ್ಥೆಯ ಕೊಟ್ಟಾರದಲ್ಲಿರುವ ಕ್ಯಾಂಪಸ್ ಮಾರಾಟವಾಗಿದೆ. ಅಕ್ಟೋಬರ್ 23ರಂದು…
ವಾಣಿಜ್ಯ ಮತ್ತು ಕೈಗಾರಿಕಾ ಉದ್ದೇಶಗಳ ಅನಿಲ ವ್ಯವಸ್ಥೆ ಎಂಜಿನಿಯರಿಂಗ್ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಪುಣೆ ಗ್ಯಾಸ್ ಸಂಸ್ಥೆಯು ಮಂಗಳೂರಿನಲ್ಲಿ ತನ್ನ ನೂತನ…